ಪಹಲ್ಗಾಮ್‌ ದಾಳಿ ನಡೆಸಿದ ಉಗ್ರರು ಪಾಕ್‌ನಿಂದ ಬಂದಿರುವುದಕ್ಕೆ ಪುರಾವೆಗಳಿಲ್ಲ: ಪಿ ಚಿದಂಬರಂ

Date:

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರು ಪಾಕಿಸ್ತಾನದಿಂದ ಬಂದಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಸೋಮವಾರ ಹೇಳಿದ್ದಾರೆ.

- Advertisement -

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನಂತರದ ಆಪರೇಷನ್ ಸಿಂಧೂರ್ ಅನ್ನು ಕೇಂದ್ರ ಸರಕಾರ ನಿರ್ವಹಿಸಿದ ರೀತಿ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಗೃಹ ಸಚಿವ ಪಿ. ಚಿದಂಬರಂ ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಬಗ್ಗೆ ಸರಕಾರ ಸಾಕಷ್ಟು ಮಾಹಿತಿಯನ್ನು ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಭಯೋತ್ಪಾದಕ ದಾಳಿಕೋರರು ಎಲ್ಲಿದ್ದಾರೆ? ನೀವು ಅವರನ್ನು ಏಕೆ ಬಂಧಿಸಿಲ್ಲ ಅಥವಾ ಗುರುತಿಸಿಲ್ಲ? ದಾಳಿಕೋರರಿಗೆ ಆಶ್ರಯ ನೀಡಿದ ಕೆಲವು ಜನರನ್ನು ಬಂಧಿಸಲಾಗಿದೆ ಎಂಬ ಸುದ್ದಿಯಾಗಿತ್ತು. ಅವರಿಗೆ ಏನಾಯಿತು? ಎಂದು ಪಹಲ್ಗಾಮ್ ದಾಳಿ ಕುರಿತು ಪಿ ಚಿದಂಬರಂ ಪ್ರಶ್ನಿಸಿದ್ದಾರೆ.

ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು (ಸಿಡಿಎಸ್) ಸಿಂಗಾಪುರಕ್ಕೆ ಹೋಗಿ ಕೆಲವು ಮಾಹಿತಿಯನ್ನು ನೀಡುತ್ತಾರೆ. ಉಪ ಸೇನಾ ಮುಖ್ಯಸ್ಥರು ಮುಂಬೈನಲ್ಲಿ ಹೇಳಿಕೆ ನೀಡುತ್ತಾರೆ. ಇಂಡೋನೇಷ್ಯಾದಲ್ಲಿ ನೌಕಾಪಡೆಯ ಕಿರಿಯ ಅಧಿಕಾರಿಯೊಬ್ಬರು ಹೇಳಿಕೆ ನೀಡುತ್ತಾರೆ. ಆದರೆ, ಪ್ರಧಾನಿ ಅಥವಾ ರಕ್ಷಣಾ ಸಚಿವರು ಅಥವಾ ವಿದೇಶಾಂಗ ಸಚಿವರು ಸಮಗ್ರವಾದ ಹೇಳಿಕೆಯನ್ನು ಏಕೆ ನೀಡುತ್ತಿಲ್ಲ? ಚಿದಂಬರಂ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ?: ಮಹದಾಯಿ: ನಾಯಕರೇ ನಾಡದ್ರೋಹಿಗಳು

ತನಿಖೆಯಲ್ಲಿ ಎನ್ಐಎ ಪಾತ್ರವನ್ನು ಅವರು ಪ್ರಶ್ನಿಸಿದರು. ಇಷ್ಟು ವಾರಗಳಲ್ಲಿ ಎನ್ಐಎ ಏನು ತನಿಖೆ ಮಾಡಿದೆ ಎಂಬುದನ್ನು ಬಹಿರಂಗಪಡಿಸಲು ಅವರು ಸಿದ್ಧರಿಲ್ಲ. ಅವರು ಭಯೋತ್ಪಾದಕರನ್ನು ಪತ್ತಹೆಚ್ಚಿದ್ದಾರಾ? ಅವರು ಎಲ್ಲಿಂದ ಬಂದರು? ಅವರು ಸ್ವದೇಶಿ ಭಯೋತ್ಪಾದಕರಾಗಿರಬಹುದು. ಅವರು ಪಾಕಿಸ್ತಾನದಿಂದ ಬಂದವರು ಎಂದು ನೀವು ಏಕೆ ಭಾವಿಸುತ್ತೀರಿ? ಅದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.

ಅವರು ಯುದ್ಧದಲ್ಲಿ ಸಂಭವಿಸಿದ ನಷ್ಟಗಳನ್ನು ಮರೆಮಾಡುತ್ತಿದ್ದಾರೆ. ಯುದ್ಧದಲ್ಲಿ ಎರಡೂ ಕಡೆಯೂ ನಷ್ಟ ಸಂಭವಿಸುತ್ತದೆ ಎಂದು ನಾನು ಒಂದು ಅಂಕಣದಲ್ಲಿ ಹೇಳಿದ್ದೆ. ಯುದ್ಧದಲ್ಲಿ ಭಾರತಕ್ಕೆ ನಷ್ಟವಾಗಿದೆಯಾ ಎಂಬುದನ್ನು ಸ್ಪಷ್ಟವಾಗಿ ತಿಳಿಸಿ ಎಂದು ಚಿದಂಬರಂ ಹೇಳಿದರು.

ಸಂಸತ್ತಿನಲ್ಲಿ ಸೋಮವಾರ ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಕುರಿತು ಚರ್ಚೆ ನಡೆಯಲಿದೆ. ಈ ಮಧ್ಯೆ ಚಿದಂಬರಂ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.

ಚಿದಂಬರಂ ಅವರ ಈ ಹೇಳಿಕೆಗಳ ಬಗ್ಗೆ ಹಲವು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...