ಅತ್ಯಾಚಾರ ಆರೋಪಿ ಇನ್ನೂ ಏಕೆ ಶಾಸಕರಾಗಿದ್ದಾರೆ?: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ಆಕ್ರೋಶ

Date:

Advertisements

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ರಾಮ್ದುಲಾಲ್ ಗೊಂಡ್ ಅವರ ಹುದ್ದೆಯನ್ನು ಇನ್ನೂ ಏಕೆ ರದ್ದುಗೊಳಿಸಿಲ್ಲ ಎಂದು ಪ್ರಶ್ನಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಅವರು ಬಿಜೆಪಿಗೆ ಸೇರಿದವರು ಎಂಬ ಕಾರಣಕ್ಕಾಗಿ ಈ ರೀತಿ ಮಾಡಲಾಗಿದೆಯೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅಖಿಲೇಶ್, “ಬಿಜೆಪಿಯ ದುಡ್ಡಿ ಕ್ಷೇತ್ರದ ಶಾಸಕನಿಗೆ 25 ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಮತ್ತು 10 ಲಕ್ಷರೂ. ದಂಡ ವಿಧಿಸಿದ್ದರೂ ಇದುವರೆಗೂ ಅವರ ವಿಧಾನಸಭೆ ಸದಸ್ಯತ್ವ ರದ್ದಾಗಿಲ್ಲ. ಬಿಜೆಪಿ ಶಾಸಕ ಎಂಬ ಕಾರಣಕ್ಕೆ ಅವರಿಗೆ ವಿಶೇಷ ಗೌರವ, ವಿನಾಯಿತಿ ನೀಡಲಾಗುತ್ತಿದೆಯೇ? ಬುಲ್ಡೋಜರ್ ಕಾರ್ಯಾಚರಣೆ ಇಂದು ಅಥವಾ ನಾಳೆ ನಡೆಯುತ್ತದೆಯೇ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ಮೀಸಲಾದ ದುಡ್ಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲಾಲ್ ಗೊಂಡ್ ಅವರಿಗೆ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಭದ್ರಾದಲ್ಲಿರುವ ಎಂಪಿ-ಎಂಎಲ್ಎ ನ್ಯಾಯಾಲಯವು ಶುಕ್ರವಾರ(ಡಿ.15) 25 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡವನ್ನು ವಿಧಿಸಿತು.

Advertisements

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಉತ್ತರದಲ್ಲಿ ನಡೆದ ಅಧಿವೇಶನದಲ್ಲಿ ಸಿಕ್ಕ ಉತ್ತರವೇನು?

“ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ, ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಕಾಲ ಜೈಲಿನಲ್ಲಿರುವ ಯಾವುದೇ ಸಾರ್ವಜನಿಕ ಪ್ರತಿನಿಧಿಯನ್ನು ಅಪರಾಧ ನಿರ್ಣಯದ ದಿನಾಂಕದಿಂದ ಸದನದ ಸದಸ್ಯತ್ವಕ್ಕೆ ಅನರ್ಹರೆಂದು ಪರಿಗಣಿಸಲಾಗುತ್ತದೆ. ಶಿಕ್ಷೆಯ ಅವಧಿ ಮುಗಿದ ನಂತರ ಅಂತಹ ವ್ಯಕ್ತಿಯು ಮುಂದಿನ ಆರು ವರ್ಷಗಳವರೆಗೆ ಸದನದ ಸದಸ್ಯತ್ವಕ್ಕೆ ಅರ್ಹರಾಗಿರುವುದಿಲ್ಲ ಎಂದು ಪ್ರಜಾಪ್ರತಿನಿಧಿ ಕಾಯ್ದೆ ಕಾನೂನು ಹೇಳುತ್ತದೆ. ತಮ್ಮ ಪಕ್ಷವು ಪಿಡಿಎ (ಹಿಂದುಳಿದ, ದಲಿತ. ಅಲ್ಪಸಂಖ್ಯಾತ) ಬೆಂಬಲದೊಂದಿಗೆ ಉತ್ತರ ಪ್ರದೇಶದ ಎಲ್ಲ 80 ಸ್ಥಾನಗಳಲ್ಲಿ ಬಿಜೆಪಿಯನ್ನು ಸೋಲಿಸುತ್ತದೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಿಂದ ಯಾರೂ ಸಂತೋಷವಾಗಿಲ್ಲ ಮತ್ತು ಅವರೆಲ್ಲರೂ ಇದರಿಂದ ಬೇಸರಗೊಂಡಿದ್ದಾರೆ. ಈ ಕಾರಣಕ್ಕೆ ಜನರು 2024 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಬದಲಾವಣೆ ತರುತ್ತಾರೆ” ಎಂದು ಅಖಿಲೇಶ್ ಯಾದವ್ ಹೇಳಿದರು.

“ಬಿಜೆಪಿ ಸರ್ಕಾರದ ಅಡಿಯಲ್ಲಿ, ಸಮಾಜದ ಪ್ರತಿಯೊಂದು ವರ್ಗವೂ ಹಣದುಬ್ಬರ, ಭ್ರಷ್ಟಾಚಾರ ಮತ್ತು ನಿರುದ್ಯೋಗದಿಂದ ಬಳಲುತ್ತಿದೆ. ಜನರು ಬಿಜೆಪಿ ಸರ್ಕಾರದಿಂದ ಬೇಸತ್ತಿದ್ದಾರೆ ಮತ್ತು ಎಲ್ಲರೂ ‘ಇಂಡಿಯಾ’ (ವಿರೋಧ ಪಕ್ಷಗಳ ಗುಂಪು) ಗೆ ಬಲವನ್ನು ನೀಡುವುದರೊಂದಿಗೆ ಬಿಜೆಪಿಯನ್ನು ಸೋಲಿಸಲು ನಿರ್ಧರಿಸಿದ್ದಾರೆ. ಬಿಜೆಪಿಯ ನಡೆಗಳ ಬಗ್ಗೆ ನಾವು ಜಾಗರೂಕರಾಗಿರಬೇಕು. ಅವರು ಬ್ರಿಟಿಷರಿಂದ ಒಡೆದು ಆಳುವ ನೀತಿಯನ್ನು ಕಲಿತಿದ್ದಾರೆ” ಎಂದು ಅಖಿಲೇಶ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X