ಅದಾನಿ – ಹಿಂಡನ್‌ಬರ್ಗ್‌ ಪ್ರಕರಣವನ್ನು ಸೆಬಿಯೇ ತನಿಖೆ ಮಾಡಲಿ ಎಂದ ಸುಪ್ರೀಂ

Date:

ಅದಾನಿ – ಹಿಂಡನ್‌ಬರ್ಗ್‌ ರೀಸರ್ಚ್‌ ವಿವಾದದ ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿಗೆ ವಹಿಸದಿರಲು ಸುಪ್ರೀಂ ಕೋರ್ಟ್‌ ಆದೇಶಿಸಿದ್ದು ‘ಸೆಬಿ’ಯು ಉಳಿದ ಪ್ರಕರಣಗಳನ್ನು ತನಿಖೆ ನಡೆಸಲು ಆದೇಶಿಸಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠವು, ಸೆಬಿ ತನಿಖೆಯಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸುವ ಮೂಲಕ ಸೆಬಿ ನೀಡಿದ್ದ ಕ್ಲೀನ್‌ಚಿಟ್ ಅನ್ನು ಎತ್ತಿ ಹಿಡಿದಿದೆ. ಅಲ್ಲದೆ ಈ ಪ್ರಕರಣದ ತನಿಖೆಯನ್ನು ಸೆಬಿಯಿಂದ ಸಿಬಿಐ ಅಥವಾ ಎಸ್‌ಐಟಿಗೆ ವರ್ಗಾಯಿಸಲು ಯಾವುದೇ ಆಧಾರವಿಲ್ಲ ಎಂದು ತನ್ನ ತೀರ್ಪಿನಲ್ಲಿ ತಿಳಿಸಿದೆ.

ಅದಾನಿ – ಹಿಂಡನ್‌ಬರ್ಗ್‌ ರೀಸರ್ಚ್‌ ವಿವಾದದ ತನಿಖೆಯ ಉಳಿದ ಎರಡು ಪ್ರಕರಣಗಳನ್ನು ಸೆಬಿಯು ಮೂರು ತಿಂಗಳೊಳಗೆ ತನಿಖೆ ನಡೆಸಬೇಕೆಂದು ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನ್ಯಾಯಾಲಯದ ನಿರ್ಧಾರವು ಪ್ರಾಥಮಿಕವಾಗಿ ವರದಿಗಳ ದೃಢೀಕರಣದ ಮೌಲ್ಯಮಾಪನಗಳು ಮತ್ತು ಸೆಬಿ ಅಧಿಕಾರ ವ್ಯಾಪ್ತಿಯನ್ನು ನಿರ್ಧರಿಸಿದೆ ಎಂದು ತಿಳಿಸಿದೆ.

ಅಲ್ಲದೆ ತಿರುಚಲಾಗಿದೆ ಎಂಬ ಜಾರ್ಜ್‌ ಒಸಿಸಿಆರ್‌ಪಿ ವರದಿಯ ವಿಶ್ವಾಸಾರ್ಹತೆಯ ಬಗ್ಗೆ ನ್ಯಾಯಾಲಯ ಸಂದೇಹ ವ್ಯಕ್ತಪಡಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

ವರದಿಗಳನ್ನು ಸ್ವತಂತ್ರವಾಗಿ ಪರಿಶೀಲಿಸಲಾಗಿಲ್ಲ ಹಾಗೂ ಅಧಿಕೃತ ಮಾಹಿತಿಯನ್ನು ಒಳಗೊಂಡಿಲ್ಲ ಎಂದು ತಿಳಿಸಿದೆ. ಇದಲ್ಲದೆ ಷೇರು ಬೆಲೆಗಳನ್ನು ತಗ್ಗಿಸಲಾಗಿದೆ ಎಂಬ ಆರೋಪವನ್ನು ಅಲ್ಲಗಳೆದಿದ್ದು ಎಫ್‌ಪಿಐ ನಿಯಮಗಳ ಸಿಂದುತ್ವವನ್ನು ಎತ್ತಿ ಹಿಡಿದಿದೆ. ಜೊತೆಗೆ ಸೆಬಿ ತನಿಖೆಯು ಕಾನೂನಿನ ಯಾವುದೇ ದೌರ್ಬಲ್ಯಗಳಿಂದ ಬಳಲುತ್ತಿಲ್ಲ ಎಂದು ತಿಳಿಸಿದೆ.

ಅದಾನಿ-ಹಿಂಡನ್ ಬರ್ಗ್‌ ಪ್ರಕರಣದ ಕುರಿತು ನಾಲ್ಕು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಸಿಜೆಐ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪಾರ್ಡಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ನೇತೃತ್ವದ ಪೀಠ ಈ ತೀರ್ಪನ್ನು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರಾದ ವಿಶಾಲ್ ತಿವಾರಿ, ಎಂ ಎಲ್ ಶರ್ಮಾ ಮತ್ತು ಕಾಂಗ್ರೆಸ್ ಮುಖಂಡ ಜಯ ಠಾಕೂರ್ ಮತ್ತು ಅನಾಮಿಕಾ ಜೈಸ್ವಾಲ್ ಸಲ್ಲಿಸಿದ್ದ ಪಿಐಎಲ್‌ನ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಪೀಠ ಕಳೆದ ವರ್ಷ ನವೆಂಬರ್ 24ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಅದಾನಿ ಸಮೂಹ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಿಂಡನ್ ಬರ್ಗ್‌ ವರದಿ ಬಹಿರಂಗದ ನಂತರ ಅದಾನಿ ಸಮೂಹದ ಷೇರುಗಳ ಬೆಲೆ ಭಾರೀ ಕುಸಿತ ಕಂಡಿರುವುದಾಗಿ ಪಿಐಎಲ್‌ನಲ್ಲಿ ಆರೋಪಿಸಲಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಹೇಳಿಕೆ ಟೀಕಿಸಿದ ಬಿಜೆಪಿಯ ಬಿಕಾನೇರ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷರ ಬಂಧನ!

ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ...

ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು...

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...