ಭಾವನೆಗೆ ಧಕ್ಕೆಯಾಗುವುದಾದರೆ ಮಾಂಸಾಹಾರ ರೆಸ್ಟೋರೆಂಟ್‌ನಿಂದ ಸಸ್ಯಾಹಾರ ಆರ್ಡರ್‌ ಮಾಡುವುದೇಕೆ: ಗ್ರಾಹಕರ ಆಯೋಗ ಪ್ರಶ್ನೆ

Date:

ಮಾಂಸಾಹಾರ ನಿಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಾದರೆ, ಹಾನಿಯನ್ನುಂಟುಮಾಡಿದರೆ ಸಸ್ಯಾಹಾರ ಮತ್ತು ಮಾಂಸಹಾರ ಎರಡನ್ನೂ ಪೂರೈಸು ರೆಸ್ಟೋರೆಂಟ್‌ನಿಂದ ಆಹಾರವನ್ನು ಆರ್ಡರ್ ಮಾಡುವುದೇಕೆ ಎಂದು ಗ್ರಾಹಕರ ಆಯೋಗ ಪ್ರಶ್ನಿಸಿದೆ.

- Advertisement -

“ಒಬ್ಬ ವಿವೇಕಯುತ ವ್ಯಕ್ತಿಯು ಆಹಾರ ಸೇವಿಸುವ ಮೊದಲು ಅದು ಸಸ್ಯಾಹಾರವೇ ಅಥವಾ ಮಾಂಸಹಾರವೇ ಎಂಬ ವ್ಯತ್ಯಾಸವನ್ನು ಗುರುತಿಸಲು ಸಾಧ್ಯವಾಗುತ್ತದೆ” ಎಂದು ಮುಂಬೈ ಉಪನಗರ(ಹೆಚ್ಚುವರಿ) ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಆಹಾರ ಸಮಾನತೆಗೆ ಸರ್ಕಾರದಿಂದ ಮತ್ತೊಂದು ಸ್ವಾಗತಾರ್ಹ ಹೆಜ್ಜೆ

ತಪ್ಪಾಗಿ ಮಾಂಸಾಹಾರಿ ಆಹಾರವನ್ನು ನೀಡಲಾಗುತ್ತಿದೆ ಎಂದು ಆರೋಪ ಮಾಡಿ ಇಬ್ಬರು ಸಲ್ಲಿಸಿದ್ದ ದೂರನ್ನು ಆಯೋಗ ವಜಾಗೊಳಿಸಿದೆ. “ದೂರುದಾರರು ಕಟ್ಟುನಿಟ್ಟಾಗಿ ಸಸ್ಯಾಹಾರಿಗಳಾಗಿದ್ದರೆ ಮತ್ತು ಮಾಂಸಾಹಾರ ಅವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದಾದರೆ ಅವರು ಸಸ್ಯಾಹಾರವನ್ನು ಮಾತ್ರ ಪೂರೈಸುವ ರೆಸ್ಟೋರೆಂಟ್‌ನಿಂದ ಆಹಾರವನ್ನು ಆರ್ಡರ್ ಮಾಡುವ ಬದಲು, ಸಸ್ಯಾಹಾರ ಮತ್ತು ಮಾಂಸಹಾರ ಎರಡನ್ನೂ ಪೂರೈಸುವ ರೆಸ್ಟೋರೆಂಟ್‌ನಿಂದ ಆಹಾರವನ್ನು ಯಾಕೆ ಆರ್ಡ್ ಮಾಡುವುದ” ಎಂದು ಪ್ರಶ್ನಿಸಿದೆ.

2020ರ ಡಿಸೆಂಬರ್ 19ರಂದು ಮುಂಬೈನ ಸಿಯಾನ್‌ನಲ್ಲಿರುವ ವಾವ್ ಮೊಮೊಸ್ ಔಟ್‌ಲೆಟ್‌ನಿಂದ ತಂಪು ಪಾನೀಯದೊಂದಿಗೆ ‘ಡಾರ್ಜಿಲಿಂಗ್ ಮೊಮೊ ಕಾಂಬೊ’ ಅನ್ನು ಆರ್ಡರ್ ಮಾಡಿದ್ದರು. ಸಸ್ಯಹಾರ ಆಯ್ಕೆಯನ್ನು ಎರಡು ಬಾರಿ ಒತ್ತಿದ್ದರು. ಆದರೆ ಡಾರ್ಜಿಲಿಂಗ್ ಚಿಕನ್ ಮೊಮೊಸ್ ಲಭಿಸಿದೆ ಎಂದು ದೂರುದಾರರು ಹೇಳಿದ್ದಾರೆ.

ತಾನು ಸಸ್ಯಹಾರಕ್ಕೆ ಆದ್ಯತೆ ನೀಡುವುದಾಗಿ ಉಲ್ಲೇಖಿಸಿದ್ದರೂ ರೆಸ್ಟೋರೆಂಟ್‌ನವರು ತನ್ನ ಸೂಚನೆಗಳನ್ನು ನಿರ್ಲಕ್ಷಿಸಿದ್ದಾರೆ. ಕಾಂಬೋ ಆಫರ್‌ನಲ್ಲಿ ಸಸ್ಯಾಹಾರ ಅಥವಾ ಮಾಂಸಾಹಾರ ಆಯ್ಕೆಗಳನ್ನು ಸ್ಪಷ್ಟವಾಗಿ ಸೂಚಿಸಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ.

ಕಂಪನಿಯ ನಿರ್ಲಕ್ಷ್ಯದಿಂದಾಗಿ ನಾವು ಮಾನಸಿಕ ಆಘಾತ, ಭಾವನಾತ್ಮಕವಾಗಿ ಕುಗ್ಗಿದ್ದೇವೆ. ನಮ್ಮ ಧಾರ್ಮಿಕ ಭಾವನೆಗಳಿಗೆ ನೋವಾಗಿದೆ. ಅದಕ್ಕಾಗಿ ಪರಿಹಾರವಾಗಿ ಆರು ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ದೂರುದಾರರು ಕೋರಿದ್ದಾರೆ.

ಇದನ್ನು ಓದಿದ್ದೀರಾ? ರಾಮ ಮಾಂಸಾಹಾರಿಯಾಗಿದ್ದ: ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿದ ಎನ್‌ಸಿಪಿ ಶಾಸಕನ ಹೇಳಿಕೆ

ಮತ್ತೊಂದೆಡೆ ಬಿಲ್‌ನಲ್ಲಿ(ಇನ್‌ವಾಯ್ಸ್‌) ಸೂಚಿಸಿದಂತೆ ಕಂಪನಿಯು ದೂರುದಾರರೇ ಮಾಂಸಾಹಾರ ಆರ್ಡರ್ ಮಾಡಿದ್ದಾರೆ ಎಂದು ವಾದಿಸಿದೆ. ದೂರುದಾರರು ತಮ್ಮ ಉದ್ಯೋಗಿ ಮೇಲೆ ಹಲ್ಲೆ ಮಾಡಿದ್ದಾರೆ, ಗದ್ದಲ ಸೃಷ್ಟಿಸಿದ್ದಾರೆ. ಈ ವೇಳೆ ರಿಫಂಡ್ ಮಾಡಿ, ಉಚಿತವಾಗಿ ಆಹಾರ ನೀಡಲಾಗಿದೆ ಎಂದು ರೆಸ್ಟೋರೆಂಟ್ ಹೇಳಿದೆ.

ಮರುಪಾವತಿ ಮಾಡಿರುವುದರಿಂದಾಗಿ ದೂರುದಾರರು ಗ್ರಾಹಕ ಸಂರಕ್ಷಣಾ ಕಾಯ್ದೆಯಡಿ ಬರುವ ಗ್ರಾಹಕರಲ್ಲ. ಕಂಪನಿ ಮರುಪಾವತಿ ಮಾಡಿದ್ದರೂ 1,200 ರೂ. ಮೌಲ್ಯದ ಉಡುಗೊರೆ ವೋಚರ್ ನೀಡುವುದಾಗಿ ಹೇಳಿದೆ. ಆದರೆ ದೂರುದಾರರು ತಲಾ 3 ಲಕ್ಷ ರೂ.ಗಳನ್ನು ಕೇಳಿದ್ದಾರೆ. ಕಂಪನಿಯ ಸಿಬ್ಬಂದಿಗಳಿಗೆ ಕಿರುಕುಳ ನೀಡುವ ದುರುದ್ದೇಶಪೂರಿತ ಉದ್ದೇಶ ದೂರುದಾರರು ಹೊಂದಿದ್ದಾರೆ ಎಂದು ಕಂಪನಿ ಹೇಳಿದೆ.

ಡಾರ್ಜಿಲಿಂಗ್‌ ಮೊಮೊ ಕಾಂಬೊ ಸಸ್ಯಾಹಾರ ಅಥವಾ ಮಾಂಸಾಹಾರವೇ ಎಂದು ಆಫರ್ ಬೋರ್ಡ್‌ನ ಫೋಟೋ ಸ್ಪಷ್ಟವಾಗಿ ಹೇಳದಿದ್ದರೂ, ಕೆಳಭಾಗದಲ್ಲಿ ಸಸ್ಯಹಾರ/ಮಾಂಸಹಾರ ಎಂದಿದೆ. ಎರಡೂ ಆಯ್ಕೆಗಳ ಲಭ್ಯತೆಯನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಆಯೋಗ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...