‘ನೀನೇಕೆ 7:30ರಲ್ಲಿ ಹೊರಹೋಗಿದ್ದೆ?’; ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ಪೊಲೀಸರ ಪ್ರಶ್ನೆ – ಆರೋಪ

Date:

ಸಂಜೆ ವೇಳೆ ಸುರಿಯುತ್ತಿದ್ದ ಮಳೆಯಲ್ಲಿ ವಿಡಿಯೋ ಚಿತ್ರೀಕರಿಸಲು ತೆರಳಿದ್ದ ಯುವತಿ ಮೇಲೆ ಕಾಮಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ಸಂತ್ರಸ್ತ ಯುವತಿಯನ್ನೇ, ‘ನೀನೇಕೆ 7:30ರಲ್ಲಿ ಹೊರಹೋಗಿದ್ದೆ’ ಎಂದು ಪೊಲೀಸರು ಪ್ರಶ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

ನೋಯ್ಡಾದ ಸೆಕ್ಟರ್ 48 ಪ್ರದೇಶದಲ್ಲಿ ಮಳೆಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಅಪರಿಚಿತನೊಬ್ಬ ಯುವತಿ ಬಟ್ಟೆಯನ್ನು ಕಿತ್ತುಹಾಕಿದ್ದಾನೆ. ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ, ಇಬ್ಬರು ಬಾಲಕಿಯರು ಆಕೆಯ ರಕ್ಷಣೆಗೆ ಬಂದಿದ್ದು, ಕಾಮುಕ ಆರೋಪಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಘಟನೆ ಬಗ್ಗೆ ದೂರು ನೀಡಿಲು ಯುವತಿ ಸೆಕ್ಟರ್ 49 ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ, ಕರ್ತವ್ಯದಲ್ಲಿದ್ದ ಅಧಿಕಾರಿಗಳು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ಅದರೆ. ಅಲ್ಲದೆ, ಆ ಸಮಯದಲ್ಲಿ ನೀನ್ಯಾಕೆ ಹೊರಹೋಗಿದ್ದೆ ಎಂದು ಆಕೆಯನ್ನೇ ಪ್ರಶ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಯುವತಿಯು ತನ್ನ ಮೇಲಾದ ದೌರ್ಜನ್ಯ ಮತ್ತು ಪೊಲೀಸರ ಧೋರಣೆಯ ಬಗ್ಗೆ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್‌ ಆಗಿದ್ದು, ನೆಟ್ಟಿಗರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ, ಆಕೆಯ ವಿಡಿಯೋ ಸ್ಥಳೀಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

“ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ತಕ್ಷಣವೇ ಪ್ರಕರಣ ದಾಖಲಿಸಲಾಗಿದೆ. ಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿ ಇತ್ಯಾದಿಗಳನ್ನು ಪರಿಶೀಲಿಸಲಾಗುತ್ತಿದೆ. ಇಂದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...