ಕುಂಭಮೇಳಕ್ಕೆ ಕರೆದೊಯ್ದು ಪತ್ನಿಯ ಹತ್ಯೆ; ದುರುಳ ಪತಿ ಬಂಧನ

Date:

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಪತ್ನಿಯನ್ನು ಕೊರೆದೊಯ್ದು, ಸಂಗಮ ನಗರದಲ್ಲಿ ಆಕೆಯನ್ನು ಕೊಲೆ ಮಾಡಿದ್ದ ದುರುಳ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೆಹಲಿ ಅಶೋಕ್ ಕುಮಾರ್ ಎಂದು ಹೆಸರಿಸಲಾಗಿದೆ. ಆತ ತನ್ನ ಪತ್ನಿಯನ್ನು ಕೊಲೆಗೈದು, ನಾಪತ್ತೆಯಾಗಿದ್ದಾರೆ ಎಂದು ಸುಳ್ಳಿನ ಕತೆ ಕಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ದೆಹಲಿಯ ತ್ರಿಲೋಕಪುರಿ ಪ್ರದೇಶದಲ್ಲಿ ವಾಸವಾಗಿದ್ದ ಅಶೋಕ್ ಕುಮಾರ್, ವಿವಾಹೇತರ ಸಂಬಂಧ ಹೊಂದಿದ್ದ. ಆತನ ವಿವಾಹೇತರ ಸಂಬಂಧವನ್ನು ಪ್ರಶ್ನಿಸಿದ್ದಕ್ಕಾಗಿ, ತನ್ನ ಪತ್ನಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಕೊಲೆ ಮಾಡಿ, ಪ್ರಕರಣದಿಂದ ಪಾರಾಗಲು ಕುಂಭಮೇಳವು ಉತ್ತಮ ಅವಕಾಶವೆಂದು ಭಾವಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಳೆದ ಮಂಗಳವಾರ ತನ್ನ ಪತ್ನಿಯನ್ನು ಪ್ರಯಾಗ್‌ರಾಜ್ ನಗರಕ್ಕೆ ಕರೆದೊಯ್ದಿದ್ದ ಆರೋಪಿ ಅಶೋಕ್ ಕುಮಾರ್, ಆಕೆಯನ್ನು ಕೊಲೆ ಮಾಡಿದ್ದಾನೆ. ಬಳಿಕ, ಪೊಲೀಸ್‌ ಠಾಣೆಗೆ ಬಂದು ತನ್ನ ಪತ್ನಿ ನಾಪತ್ತೆಯಾಗಿದ್ದಾರೆ ಎಂದು ದೂರ ದಾಖಲಿಸಿದ್ದ. ಆ ನಂತರ, ತಲೆ ಮರೆಸಿಕೊಂಡಿದ್ದ ಎಂದು ಡಿಸಿಪಿ ಅಶೋಕ್ ಭಾರ್ತಿ ಹೇಳಿದ್ದಾರೆ.

ಆದಾಗ್ಯೂ, ಪ್ರಯಾಗ್‌ರಾಜ್ ನಗರದ ಅಜಾತ್‌ನಗರದಲ್ಲಿ ಬಾಡಿಗೆ ಕೊಠಡಿಯೊಂದರಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾಗಿತ್ತು. ಮೃತ ಮಹಿಳೆಯ ಗುರುತನ್ನು ಪತ್ತೆ ಮಾಡಿದಾಗ, ಆಕೆಯೇ ಅಶೋಕ್‌ನ ಪತ್ನಿ ಎಂಬುದನ್ನು ಪೊಲೀಸರು ಕಂಡುಕೊಂಡಿದ್ದಾರೆ. ಬಳಿಕ, ಆಶೋಕ್‌ನನ್ನು ಬಂಧಿಸಿ, ವಿಚಾರಣೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ, ತಾನೇ ಆಕೆಯ ಕತ್ತು ಸೀಳ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...