ಮುಸ್ಲಿಂ ದ್ವೇಷ ಬೇಡ ಎಂದಿದ್ದಕ್ಕೆ ಟ್ರೋಲ್‌ಗೆ ಗುರಿಯಾದ ಯೋಧನ ಪತ್ನಿ: ಮಹಿಳಾ ಆಯೋಗ ಆಕ್ರೋಶ

Date:

Advertisements

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಏ.22 ರಂದು ಮೃತರಾದ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೆ ಗುರಿಯಾಗಿರುವ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗ ದುರದೃಷ್ಟಕರ ಎಂದು ಖಂಡನೆಯನ್ನು ವ್ಯಕ್ತಪಡಿಸಿದೆ. ವಿನಯ್ ಅವರ ಪತ್ನಿ ಮುಸ್ಲಿಮರು ಅಥವಾ ಕಾಶ್ಮೀರಿಗಳ ವಿರುದ್ಧ ಜನರು ದ್ವೇಷ ಸಾಧಿಸಬಾರದು ಎಂದು ಹೇಳಿದ್ದರು.

ಈ ಕುರಿತು ರಾಷ್ಟ್ರೀಯ ಮಹಿಳಾ ಆಯೋಗ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಅನೇಕ ನಾಗರಿಕರು ಕೊಲ್ಲಲ್ಪಟ್ಟರು. ಇದೇ ವೇಳೆ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರನ್ನು ಧರ್ಮವನ್ನು ಕೇಳಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಈ ದಾಳಿ ಇಡೀ ದೇಶಕ್ಕೆ ನೋವುಂಟುಮಾಡಿದೆ ಮತ್ತು ಇಡೀ ದೇಶವೇ ಆಕ್ರೋಶಗೊಂಡಿದೆ. ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ನಿಧನದ ಬಳಿಕ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸುತ್ತಿರುವ ರೀತಿ ಅತ್ಯಂತ ಖಂಡನೀಯ ಮತ್ತು ದುರದೃಷ್ಟಕರ. ಮಹಿಳೆಯ ಅಭಿಪ್ರಾಯಗಳಿಗಾಗಿ ಅಥವಾ ಅವರ ವೈಯಕ್ತಿಕ ಜೀವನದ ಬಗ್ಗೆ ಟ್ರೋಲ್ ಮಾಡುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ.

ಯಾವುದೇ ಭಿನ್ನಾಭಿಪ್ರಾಯವನ್ನು ಯಾವಾಗಲೂ ಸಭ್ಯವಾಗಿ ಮತ್ತು ಸಾಂವಿಧಾನಿಕ ಮಿತಿಯೊಳಗೆ ವ್ಯಕ್ತಪಡಿಸಬೇಕು. ರಾಷ್ಟ್ರೀಯ ಮಹಿಳಾ ಆಯೋಗವು ಪ್ರತಿಯೋರ್ವ ಮಹಿಳೆಯ ಗೌರವ ಮತ್ತು ಘನತೆಯನ್ನು ರಕ್ಷಿಸಲು ಬದ್ಧವಾಗಿದೆ ಎಂದು ಮಹಿಳಾ ಆಯೋಗ ತಿಳಿಸಿದೆ.

Advertisements

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹತ್ಕರ್ ಅವರು ಈ ಕುರಿತು ಎಕ್ಸ್‌ನಲ್ಲಿ ಪ್ರತ್ಯೇಕವಾಗಿ ಪೋಸ್ಟ್ ಮಾಡಿದ್ದು, ‘ಕೆಲವರಿಗೆ ನರ್ವಾಲ್ ಅವರ ಹೇಳಿಕೆಗಳು ಇಷ್ಟವಾಗದಿರಬಹುದು. ಆದರೆ ಅವರ ಅಭಿಪ್ರಾಯಗಳ ಕಾರಣಕ್ಕೆ ಅವರನ್ನು ಟ್ರೋಲ್ ಮಾಡುವುದು ಮತ್ತು ಗುರಿಯಾಗಿಸುವುದು ಸರಿಯಲ್ಲ’ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಭಯೋತ್ಪಾದಕ ದಾಳಿಗೆ ಕೆಲವು ದಿನಗಳ ಮೊದಲು ವಿವಾಹವಾಗಿದ್ದ ದಂಪತಿ ಕಾಶ್ಮೀರಕ್ಕೆ ತೆರಳಿದ್ದರು. ಎಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 26 ವರ್ಷದ ವಿನಯ್ ನರ್ವಾಲ್ ಸೇರಿ 26 ಮಂದಿ ಮೃತಪಟ್ಟಿದ್ದರು.

ಭಯೋತ್ಪಾದಕ ದಾಳಿ ಬಗ್ಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ವ್ಯಾಪಕವಾದ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಕೆಲವರು ಕಾಶ್ಮೀರಿಗಳು ಮತ್ತು ಮುಸ್ಲಿಮರನ್ನು ಗುರಿಯಾಗಿಸಿಕೊಂಡರು.

ಭಯೋತ್ಪಾದಕರ ದಾಳಿಯಲ್ಲಿ ಪತಿಯನ್ನು ಕಳೆದುಕೊಂಡ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ನರ್ವಾಲ್, ಇಡೀ ದೇಶವು ವಿನಯ್‌ಗಾಗಿ ಪ್ರಾರ್ಥಿಸಬೇಕೆಂದು ನಾನು ಬಯಸುತ್ತೇನೆ. ಮುಸ್ಲಿಮರು ಮತ್ತು ಕಾಶ್ಮೀರಿಗಳ ಮೇಲೆ ದ್ವೇಷ ಬೆಳೆಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ. ನಮಗೆ ಇದು ಬೇಡ. ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ, ಬೇರೇನೂ ಅಲ್ಲ. ದಾಳಿಯ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಬೇಕೆಂದು ಹೇಳಿದ್ದರು. ಆದರೆ ಶಾಂತಿ ಕಾಪಾಡುವಂತೆ ಮಾಡಿದ್ದ ನರ್ವಾಲ್ ಮನವಿಗೆ ಹಲವರು ನಿಂದಿಸಿದರು. ಕೆಲವರು ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡರು. ಇನ್ನು ಕೆಲವರು ನೀವು ಪತಿಯ ಪಿಂಚಣಿಯನ್ನು ಪಡೆಯಬಾರದು ಎಂದು ಹೇಳಿದರು. ಟ್ರೋಲ್ ಮಧ್ಯೆ ಹಲವರು ಹಿಮಾಂಶಿ ನರ್ವಾಲ್‌ ಅವರನ್ನು ಬೆಂಬಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X