ನನ್ನ ಬೇಡಿಕೆ ಈಡೇರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್

Date:

ತನ್ನ ಬೇಡಿಕೆ ಈಡೇರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ ಎಂದು ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ‘ಜನತಾ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

- Advertisement -

‘ಜನತಾ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, “ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಮೊದಲು ಎನ್‌ಡಿಎ ಆಡಳಿತ ಇರುವ ಎಲ್ಲಾ ರಾಜ್ಯಗಳಲ್ಲಿ ಉಚಿತ ವಿದ್ಯುತ್ ನೀಡಿ” ಎಂದು ಪ್ರಧಾನಿ ಮೋದಿಗೆ ಸವಾಲು ಹಾಕಿದ ಕೇಜ್ರಿವಾಲ್ ಈ ಬೇಡಿಕೆ ಈಡೇರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು

“ಪ್ರಧಾನಿ ಮೋದಿ ತಮ್ಮ 10 ವರ್ಷಗಳ ಅಧಿಕಾರದಲ್ಲಿ ಏನನ್ನೂ ಮಾಡಿಲ್ಲವೆಂದು ಜನರು ಹೇಳುತ್ತಿದ್ದಾರೆ. ಈಗ ಏನಾದರೂ ಮಾಡಿದರೆ, ಚುನಾವಣೆಗೂ ಮುನ್ನವಾದರೂ ಪ್ರಧಾನಿ ಏನೋ ಒಂದು ಸಾಧಿಸಿದ್ದಾರೆ ಎಂದು ಜನರು ಹೇಳಬಹುದು” ಎಂದರು.

“ದೆಹಲಿಯಲ್ಲಿ ಫೆಬ್ರವರಿಯಲ್ಲಿ ಚುನಾವಣೆಯಿದೆ. ಇದಕ್ಕೂ ಮುನ್ನ ಅವರು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಉಚಿತ ವಿದ್ಯುತ್ ನೀಡಲು ನಾನು ಆಗ್ರಹಿಸುತ್ತೇನೆ. ಈ ಬೇಡಿಕೆ ಈಡೇರಿಸಿದರೆ ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಇನ್ನು ಈ ಸಂದರ್ಭದಲ್ಲೇ ‘ಡಬಲ್ ಇಂಜಿನ್’ ಆಡಳಿತ ಮಾದರಿಯನ್ನು ‘ಡಬಲ್ ಲೂಟಿ ಮತ್ತು ಡಬಲ್ ಭ್ರಷ್ಟಾಚಾರ’ ಎಂದು ಬಣ್ಣಿಸಿದರು. “ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ದಿನನಿತ್ಯ ಗುಂಡಿನ ದಾಳಿ ನಡೆಯುತ್ತಿದೆ. ಅಪರಾಧಗಳು ಹೆಚ್ಚಾಗುತ್ತಿವೆ. ದೆಹಲಿ ಸರ್ಕಾರದ ಕಾರ್ಯಗಳಲ್ಲಿ ಬಿಜೆಪಿ ತಡೆಯೊಡ್ಡುತ್ತಿದೆ. ನಾವು ಮಹಿಳೆಯರ ರಕ್ಷಣೆಗಾಗಿ ಬಸ್ ಮಾರ್ಷಲ್‌ಗಳನ್ನು ಪರಿಚಯಿಸಿದ್ದೆವು. ಆದರೆ ಅವರು ಅದನ್ನೂ ಕೂಡಾ ತಡೆದಿದ್ದಾರೆ” ಎಂದು ದೂರಿದ್ದಾರೆ.

ಈ ವೇಳೆಯೇ ತನ್ನನ್ನು ಜೈಲಿನಲ್ಲಿದ್ದಾಗ ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ. ನನಗೆ ಇನ್ಸುಲಿನ್ ಪೂರೈಕೆಯನ್ನು ಜೈಲಿನಲ್ಲಿ ನಿಲ್ಲಿಸಲಾಗಿತ್ತು. ನನ್ನ ಮೂತ್ರಪಿಂಡಗಳು ವಿಫಲವಾಗುವ ಅಪಾಯವಿತ್ತು ಮತ್ತು ನಾನು ಸಾಯುವ ಅಪಾಯವೂ ಇತ್ತು ಎಂದು ಹೇಳಿದರು.

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿ ಐದು ತಿಂಗಳುಗಳ ಕಾಲ ತಿಹಾರ್ ಜೈಲಿನಲ್ಲಿದ್ದ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ ಜಾಮೀನಿನಲ್ಲಿ ಸೆಪ್ಟೆಂಬರ್ 13ರಂದು ಬಿಡುಗಡೆಯಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...