ಗೌಪ್ಯತೆಯ ಬದ್ದತೆ ಮುರಿಯಲು ಒತ್ತಾಯಿಸಿದರೆ ಭಾರತವನ್ನೇ ತೊರೆಯುತ್ತೇವೆ: ವಾಟ್ಸಾಪ್‌

Date:

ವಾಟ್ಸಾಪ್‌ನಲ್ಲಿ ಸಂದೇಶಗಳ ಖಾಸಗಿತನ/ಗೌಪ್ಯತೆ (ಎಂಡ್‌-ಟು-ಎಂಚ್‌ ಎನ್‌ಕ್ರಿಪ್ಶನ್‌) – ಸಂದೇಶ ಕಳಿಸಿದವರು, ಸ್ವೀಕರಿಸಿದವರಲ್ಲದೆ ಮೂರನೇ ವ್ಯಕ್ತಿ ಆ ಸಂದೇಶ ನೋಡಲಾಗದು – ಉಲ್ಲಂಘಿಸಲು ಒತ್ತಾಯಿಸಿದರೆ ದೇಶವನ್ನು ತೊರೆಯುವುದಾಗಿ ವಾಟ್ಸಾಪ್‌ ಹೇಳಿದೆ. ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ರದ್ದುಗೊಳಿಸುವುದಾಗಿ ಮೆಟಾ ಒಡೆತನದ ವಾಟ್ಸಾಪ್‌ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

- Advertisement -

ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಯಂತ್ರಿಸುವ ‘ಮಾಹಿತಿ ತಂತ್ರಜ್ಞಾನ ನಿಯಮ ನಿಯಮಗಳು-2021’ಅನ್ನು ಪ್ರಶ್ನಿಸಿ 2021ರಲ್ಲಿಯೇ ವಾಟ್ಸಾಪ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರಿದ್ದ ವಿಭಾಗೀಯ ಪೀಠ ನಡೆಸುತ್ತಿದೆ. “ಬಳಕೆದಾರರ ಖಾಸಗಿತನವನ್ನು ವೇದಿಕೆಯು ಉಲ್ಲಂಘಿಸುವಂತೆ ಒತ್ತಾಯಿಸಿದರೆ, ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನೇ ನಿಲ್ಲಿಸುತ್ತದೆ” ಎಂದು ವಾಟ್ಸಾಪ್‌ ಕಂಪನಿಯ ವಕೀಲ ತೇಜಸ್‌ ಕರಿಯಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಖಾಸಗಿತನದ ಗೌಪ್ಯತೆಯ ಕಾರಣಕ್ಕಾಗಿ ಜನರು ವಾಟ್ಸಾಪ್‌ಅನ್ನು ಬಳಸುತ್ತಿದ್ದಾರೆ. ಕೇಂದ್ರ ಸರ್ಕಾರದ ಹೊಸ ನಿಯಮವು ಬಳಕೆದಾರರ ಗೌಪ್ಯತೆಯನ್ನು ಮುರಿಯುತ್ತದೆ. ವಾಟ್ಸಾಪ್‌ ಶತಕೋಟಿ ಸಂದೇಶಗಳನ್ನು ಸಂಗ್ರಹಿಸಬಹುದಾದ ವೇದಿಕೆಯಾಗಿದೆ. ವಾಟ್ಸಾಪ್‌ನಲ್ಲಿ ಯಾವುದೇ ಮಿತಿಯಿಲ್ಲಲ. ಹೀಗಾಗಿ, ನಮ್ಮ ಮೇಲೆ, ಬಳಕೆದಾರರ ಸಂದೇಶಗಳನ್ನು ಪದೇ ಪದೆ ಕೇಳಲಾಗುತ್ತದೆ” ಎಂದು ವಾದಿಸಿದ್ದಾರೆ.

“ಇಲ್ಲಿ ಎರಡು ವಿಚಾರಗಳಿವೆ – ಒಂದು, ಬಳಕೆದಾರರ ಖಾಸಗಿತನ – ಗೌಪ್ಯತೆ. ಎರಡು, ಸರ್ಕಾರವು ಬಳಕೆದಾರರ ಸಂದೇಶಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕನ್ನು ಹೊಂದಿದೆ. ಉದಾಹರಣೆಗೆ, ಭಯೋತ್ಪದಕ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂಬ ಆರೋಪದ ಮೇಲೆ ಆತನನ್ನು ಹಿಡಿಯಲು, ಆತ ಕಳುಹಿಸುವ ಸಂದೇಶಗಳಿಗಾಗಿ ಸರ್ಕಾರವು ನಮ್ಮ ಮೇಲೆ ಒತ್ತಡ ಹೇರುತ್ತದೆ. ನಾವು ಬಳಕೆದಾರ ಮತ್ತು ಸರ್ಕಾರಗಳ ನಡುವೆ ಸಿಲುಕಿದ್ದೇವೆ. ಒಂದು ಸೂಚನೆಗಾಗಿ ನಾವು ನಮ್ಮ ಗೌಪ್ಯತೆಯ ನಿಲುವನ್ನು ಮುರಿಯಬೇಕೆ? ಈ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯವು ಪರಿಶೀಲಿಸಬೇಕಾಗುತ್ತದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿ ಈ ನಿಯಮ ರೂಪಿಸಲು ಸರ್ಕಾರಕ್ಕೆ ಅವಕಾಶವಿಲ್ಲ” ಎಂದು ವಕೀಲರು ವಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....