ಮತ್ತೆ ಎಂದಿಗೂ ಹೀಗೆ ಮಾಡಲ್ಲ: ಪತಂಜಲಿ ಬಾಬಾ ರಾಮ್‌ದೇವ್ ಕ್ಷಮೆಯಾಚನೆ

Date:

ಹಮ್‌ದರ್ದ್‌ ಸಂಸ್ಥೆಯ ಶರಬತ್ ಉತ್ಪನ್ನದ ಬಗ್ಗೆ ಆಕ್ಷೇಪಾರ್ಹ ಮತ್ತು ನಿಂದನಾತ್ಮಕ ಹೇಳಿಕೆ ನೀಡಿದ್ದ ಸ್ವಯಂಘೋಷಿತ ಯೋಗಗುರು ಬಾಬಾ ರಾಮ್‌ದೇವ್ ಅವರು ನ್ಯಾಯಾಲಯದ ಎದುರು ಕ್ಷಮೆಯಾಚಿಸಿದ್ದಾರೆ. ಮತ್ತೆ ಎಂದಿಗೂ ಈ ರೀತಿ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

- Advertisement -

ತಮ್ಮ ಪತಂಜಲಿ ಸಂಸ್ಥೆಯ ಶರಬತ್‌ ಉತ್ಪನ್ನದ ಬಗ್ಗೆ ಪ್ರಚಾರ ಮಾಡುತ್ತಿದ್ದ ಬಾಬಾ ರಾಮ್‌ದೇವ್, ಹಮ್‌ದರ್ದ್‌ ಸಂಸ್ಥೆಯ ಶರಬತ್ ಉತ್ಪನ್ನವನ್ನು ‘ಶರಬತ್ ಜಿಹಾದ್’ ಎಂದು ಕರೆದಿದ್ದರು. ಅಲ್ಲದೆ, ಹಮ್‌ದರ್ದ್‌ ರೂಹ್‌ ಅಫ್ಜಾದಿಂದ ಸಂಪಾದಿಸಿದ ಹಣದಲ್ಲಿ ಮದರಸಾ ಮತ್ತು ಮಸೀದಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅವರ ಹೇಳಿಕೆಯ ವಿರುದ್ಧ ಹಮ್‌ದರ್ದ್‌ ಸಂಸ್ಥೆ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿತ್ತು. ಇತ್ತೀಚೆಗೆ, ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯವು ರಾಮ್‌ದೇವ್ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. “ಬಾಬಾ ರಾಮ್‌ದೇವ್‌ ಅವರ ಹೇಳಿಕೆಯು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತ ತಂದಿದೆ. ಅವರು ನೀಡಿರುವ ಹೇಳಿಕೆ ಅಸಮರ್ಥನೀಯವಾದದ್ದು. ಇಂತಹ ಹೇಳಕೆಗಳ ಬಗ್ಗೆ ರಾಮ್‌ದೇವ್‌ ಎಚ್ಚವಹಿಸಬೇಕು. ಇಲ್ಲದಿದ್ದಲ್ಲಿ, ಕಠಿಣವಾದ ಆದೇಶ ನೀಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿತ್ತು.

ಇದೀಗ, ರಾಮ್‌ದೇವ್ ಅವರು ನ್ಯಾಯಾಲಯದ ಎದುರು ಕ್ಷಮೆಯಾಚಿಸಿದ್ದಾರೆ. ‘ರಾಮ್‌ದೇವ್ ಅವರಿಗೆ ನ್ಯಾಯಾಲಯದ ಬಗ್ಗೆ ಅಪಾರ ಗೌರವವಿದೆ. ನ್ಯಾಯಾಲಯದ ನಿರ್ದೇಶನಗಳನ್ನು ರಾಮ್‌ದೇವ್ ಪಾಲಿಸುತ್ತಾರೆ’ ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...