ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

Date:

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಚುನಾವಣಾ ರಾಜಕೀಯ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ. ಬದಲಾಗಿ, ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವ ಗುರಿ ಹೊಂದಿದೆ ಎಂದು ಆಂದೋಲನದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸೋಮವಾರ ಸ್ಪಷ್ಟಪಡಿಸಿದ್ದಾರೆ.

- Advertisement -

ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐ ಬಳಸಿ ರಾಜಕೀಯ ಪಕ್ಷಗಳನ್ನು ಹೇಗೆ ಒಡೆಯಲಾಗುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಚುನಾವಣೆಗಳಲ್ಲಿ ಮತಗಳನ್ನು ಅಳಿಸಿಹಾಕಲಾಗುತ್ತಿದೆ. ಜನರು ರಾಜಕಾರಣದ ಮೇಲಿನ ನಂಬಿಕೆಯನ್ನೇ ಕಳೆದುಕೊಂಡಿರುವ ಈ ಹಂತದಲ್ಲಿ, ರಾಜಕೀಯ ಪಕ್ಷವೊಂದನ್ನು ಕಟ್ಟಿ ನಾವೇನು ಮಾಡಲು ಸಾಧ್ಯ ಎಂದು ದೀಪ್ಕೆ ಪ್ರಶ್ನಿಸಿದ್ದಾರೆ. ಅವರು ತಮ್ಮ ತವರೂರಾದ ಛತ್ರಪತಿ ಸಂಭಾಜಿನಗರದಲ್ಲಿ ಈ ವಿಷಯ ತಿಳಿಸಿದರು. ಇದೇ ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಸಿಜೆಪಿಯ ಕಾರ್ಯತಂತ್ರ ರೂಪಿಸುವ ಸಭೆ ಇಲ್ಲಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ದೇಶದ ನ್ಯಾಯಾಂಗ, ಚುನಾವಣಾ ವ್ಯವಸ್ಥೆ ಹಾಗೂ ಮಾಧ್ಯಮಗಳ ಮೇಲೂ ಜನರು ವಿಶ್ವಾಸ ಕಳೆದುಕೊಳ್ಳುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ, ದೇಶಕ್ಕೆ ಒಂದು ಬಲವಾದ ಜನಾಂದೋಲನದ ಅಗತ್ಯವಿದೆ ಎಂದು ದೀಪ್ಕೆ ಪ್ರತಿಪಾದಿಸಿದ್ದಾರೆ.

ಅಮೆರಿಕದಲ್ಲಿ ವ್ಯಾಸಂಗ ಮಾಡಲು ತಮಗೆ ಹಣ ಎಲ್ಲಿಂದ ಬಂತು ಎಂಬ ದೂರಿನ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, “ನನ್ನ ವಿದ್ಯಾರ್ಥಿವೇತನ (ಸ್ಕಾಲರ್‌ಶಿಪ್) ಮತ್ತು ಶೈಕ್ಷಣಿಕ ಸಾಲದ ಪತ್ರಗಳನ್ನು ಬಹಿರಂಗಪಡಿಸಲು ನಾನು ಸಿದ್ಧನಿದ್ದೇನೆ. ಆದರೆ ‘ಚಕ್ರವರ್ತಿ’ ತಮ್ಮ ಪದವಿ ಪ್ರಮಾಣಪತ್ರವನ್ನು ತೋರಿಸುತ್ತಾರೆಯೇ?” ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಇದೇ ವೇಳೆ, ಯುವ ಆಂದೋಲನದ ಮುಂದಿನ ಹೆಜ್ಜೆಗಳ ಬಗ್ಗೆ ಚರ್ಚಿಸಲು ಸಿಜೆಪಿ ಸಂಸ್ಥಾಪಕರು, ವಕ್ತಾರರು ಮತ್ತು ಸಾಂಸ್ಥಿಕ ನಾಯಕರು ಪಾಲ್ಗೊಳ್ಳುವ ಎರಡು ದಿನಗಳ ಸಭೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಜಂತರ್ ಮಂತರ್ ಪ್ರತಿಭಟನೆಯುದ್ದಕ್ಕೂ ಶ್ರಮಿಸಿದ ಐವತ್ತು ಪ್ರಮುಖ ಸ್ವಯಂಸೇವಕರು ಸೇರಿದಂತೆ ಹಲವು ಪಾಲುದಾರರೊಂದಿಗೆ ಸಿಜೆಪಿ ತಂಡದ ಸದಸ್ಯರು ಮುಂದಿನ ಕಾರ್ಯತಂತ್ರಗಳ ಕುರಿತು ಕಳೆದ ಕೆಲವು ದಿನಗಳಿಂದ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಪಕ್ಷ ತಿಳಿಸಿದೆ.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ಯಶಸ್ವಿ ಪ್ರತಿಭಟನೆಯ ನಂತರ, ಯುವಜನರಲ್ಲಿ ದೇಶದ ಭವಿಷ್ಯದ ಬಗ್ಗೆ ಭರವಸೆ ಮತ್ತು ಆಶಾವಾದ ಮೂಡಿದೆ. ಈ ಹಿನ್ನೆಲೆಯಲ್ಲಿ, ಕಾರ್ಯತಂತ್ರ ಸಭೆಯ ಬಳಿಕ ದೇಶಾದ್ಯಂತ ಇರುವ ತನ್ನ ಸ್ವಯಂಸೇವಕರನ್ನು ತಲುಪಲು ಸಿಜೆಪಿ ಯೋಜಿಸಿದ್ದು, ಯುವಜನರ ಅಗತ್ಯಗಳು ಮತ್ತು ಆಕಾಂಕ್ಷೆಗಳನ್ನು ಅರಿಯಲು ‘ಅಖಿಲ ಭಾರತ ಆಲಿಸುವಿಕೆ ಪ್ರವಾಸ’ (ನ್ಯಾಷನ್‌ವೈಡ್ ಲಿಸನಿಂಗ್ ಟೂರ್) ಆಯೋಜಿಸಲು ನಿರ್ಧರಿಸಿದೆ.

ಯುವಕರು ಒಗ್ಗೂಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಈ ಅಹಂಕಾರಿ ಸರ್ಕಾರದ ಸೋಲು ತೋರಿಸಿದೆ. ಯುವಜನರ ನಿರೀಕ್ಷೆಗಳನ್ನು ಅರ್ಥಪೂರ್ಣ ಕಾರ್ಯಗಳಾಗಿ ಪರಿವರ್ತಿಸಲು ನಮ್ಮ ತಂಡವು ಅತ್ಯುತ್ತಮ ಮಾರ್ಗವನ್ನು ರೂಪಿಸುತ್ತಿದೆ ಎಂದು ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...