ಓವೈಸಿ ಸಹೋದರರ ವಿರುದ್ಧ ಬಿಜೆಪಿಯ ನವನೀತ್ ರಾಣಾ ವಿವಾದಾತ್ಮಕ ಹೇಳಿಕೆ

Date:

ಎಐಎಂಐಎಂ ಪಕ್ಷದ ಓವೈಸಿ ಸಹೋದರರ ಬಗ್ಗೆ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ನವನೀತ್‌ ರಾಣಾ ವಿವಾದಾತ್ಮಕ ಹೇಳಿಕೆ ನೀಡಿರುವುದು ಎಲ್ಲಡೆ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಹೈದರಾಬಾದ್‌ನಲ್ಲಿ ಮಾತನಾಡಿರುವ ನವನೀತ್‌ ರಾಣಾ, ಪೊಲೀಸರನ್ನು 15 ಸೆಕೆಂಡ್‌ ಹಿಂದಕ್ಕೆ ಪಡೆದರೆ ಸಹೋದರರು ಎಲ್ಲಿಂದ ಆಗಮಿಸಿದರು ಎಲ್ಲಿಗೆ  ವಾಪಸ್‌ ಹೋದರು ಎಂಬುದನ್ನು ತಿಳಿಯದ ಹಾಗೆ ಮಾಡುತ್ತೇವೆ ಎಂದು ಓವೈಸಿ ಸಹೋದರರನ್ನು ಗುರಿಯಾಗಿಸಿಕೊಂಡು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

2019ರಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ ಸ್ವತಂತ್ರವಾಗಿ ಸಂಸದರಾಗಿ ಆಯ್ಕೆಯಾಗಿದ್ದು, ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ.

ನವನೀತ್‌ ರಾಣಾಗೆ ತಿರುಗೇಟು ನೀಡಿರುವ ಅಸಾದುದ್ದೀನ್ ಓವೈಸಿ, “ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಕೆಗೆ 15 ಸೆಕೆಂಡ್‌ ನೀಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಕೇವಲ 15 ಸೆಕೆಂಡ್ ಮಾತ್ರವಲ್ಲ, ಒಂದು ಗಂಟೆ ತೆಗೆದುಕೊಳ್ಳಿ. ನಾವು ಹೆದರಿಕೊಳ್ಳುವುದಿಲ್ಲ. ನಿಮ್ಮಿಂದ ಮಾನವೀಯತೆ ಹೇಗೆ ಕಳೆದುಹೋಗಿದೆ ಎಂಬುದನ್ನು ಸಹ ನಾವು ನೋಡ ಬಯಸುತ್ತೇವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

“ಪ್ರಧಾನಿಯೂ ನಿಮ್ಮವರೆ, ಆರ್‌ಎಸ್‌ಎಸ್‌ ಕೂಡ ನಿಮ್ಮವರೆ. ಮಾಡಿ ನಿಮ್ಮನ್ನು ಯಾರೂ ತಡೆಯುತ್ತಾರೆ. ಎಲ್ಲಿಗೆ ಬರಬೇಕೆಂದು ಹೇಳಿ ಅಲ್ಲಿಗೆ ಬರುತ್ತೇವೆ. ಅದನ್ನು  ಈಗಲೇ ಮಾಡಿ” ಎಂದು ಹೇಳಿದ್ದಾರೆ.

ನವನೀತ್‌ ಹೇಳಿಕೆಯನ್ನು ಖಂಡಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪೃಥ್ವಿರಾಜ್‌ ಚೌಹಾಣ್, “ಇಂತಹ ವ್ಯಕ್ತಿಗಳು ಸಮಾಜಕ್ಕೆ ವಿಷಬೀಜ ಬಿತ್ತುತ್ತಿದ್ದಾರೆ. ಚುನಾವಣೆಯಲ್ಲಿ ಎಲ್ಲ ಬಿಜೆಪಿ ನಾಯಕರು ಇದನ್ನೇ ಮಾಡುತ್ತಿದ್ದಾರೆ” ಎಂದು ದೂರಿದರು.

ಅಸಾದುದ್ದೀನ್‌ ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿಯ ಮಾಧವಿ ಲತಾ ಕೂಡ ಈ ಹಿಂದೆ ಪ್ರಚಾರ ಕೈಗೊಳ್ಳುವ ಸಂದರ್ಭದಲ್ಲಿ ಮಸೀದಿಯನ್ನು ಬಿಲ್ಲುಬಾಣದಿಂದ ಕೆಡವುವ ಅಣಕು ಪ್ರದರ್ಶನ ಮಾಡಿದ್ದರು.

ಹೈದರಾಬಾದ್‌ ಲೋಕಸಭಾ ಕ್ಷೇತ್ರವು 6 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಅಸಾದುದ್ದೀನ್‌ ಓವೈಸಿ 2004ರಿಂದ ಈ ಕ್ಷೇತ್ರದ ಸಂಸದರಾಗಿದ್ದಾರೆ. ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...