ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಡಿಕ್ಕಿ: ತಪ್ಪಿದ ಭಾರಿ ಅನಾಹುತ

Date:

ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿದ್ದ ಎರಡು ವಿಮಾನ ಗಳ ರೆಕ್ಕೆಗಳು ಡಿಕ್ಕಿ ಹೊಡೆದುಕೊಂಡಿದ್ದು, ಸ್ವಲ್ಪದರಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ.

- Advertisement -

ಒಂದು ವಿಮಾನ ಚೆನ್ನೈಗೆ ಹೊರಡಲು ಮೇಲಕ್ಕೆ ಹಾರುತ್ತಿದ್ದರೆ, ಬಿಹಾರದ ದಾರಬಾಂಗ್‌ ಮೂಲದ ವಿಮಾನ ಹೊರಡಲು ಸಿದ್ಧವಾಗಿತ್ತು. ಅಪಘಾತದಲ್ಲಿ ಎರಡು ವಿಮಾನಗಳ ರೆಕ್ಕೆಗಳು ಪರಸ್ಪರ ಬಡಿದುಕೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಘಟನೆಯು ಇಂದು ಬೆಳಿಗ್ಗೆ 11.10ಕ್ಕೆ ಸಂಭವಿಸಿದ್ದು, ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ವಿಮಾನಗಳ ಘರ್ಷಣೆಯಲ್ಲಿ ಚೆನ್ನೈ ಮೂಲದ ವಿಮಾನದ ರೆಕ್ಕೆ ಮುರಿದು ಬಿದ್ದರೆ, ದಾರಬಾಂಗ್ ವಿಮಾನವು ಅಸ್ತವ್ತಸ್ಥಗೊಂಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ಘಟನೆಯ ಬಗ್ಗೆ ನಾಗರಿಕ ವಿಮಾನಯಾನದ ಮಹಾ ನಿರ್ದೇಶಕರು ಮಾಹಿತಿ ಪಡೆದುಕೊಂಡಿದ್ದಾರೆ. ಅಪಘಾತದ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಉನ್ನತಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲಗಳ ಪ್ರಕಾರ, ಇಂದು ಬೆಳಿಗ್ಗೆ 10.40ಕ್ಕೆ ಚೆನ್ನೈಗೆ ಹೊರಡಲು ತಯಾರಾಗಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಈ ಘಟನೆ ಸಂಭವಿಸಿದೆ. ಈ ಸಮಯದಲ್ಲಿ 6 ವಿಮಾನದ ಸಿಬ್ಬಂದಿ ಒಳಗೊಂಡು 163 ಪ್ರಯಾಣಿಕರು ಏರ್‌ ಇಂಡಿಯಾ ವಿಮಾನದಲ್ಲಿದ್ದರು. ಈ ನಡುವೆ ಕೋಲ್ಕತ್ತಾದಿಂದ ಬಿಹಾರದ ದಾರ್‌ಗಂಗಾಗೆ ಹೊರಟಿದ್ದ 6 ಸಿಬ್ಬಂದಿಯೊಂದಿಗೆ 149 ಪ್ರಯಾಣಿಕರಿದ್ದ ಇಂಡಿಗೋ ವಿಮಾನ  ಹೊರಡಲು ಸಿದ್ದವಾಗುತ್ತಿತ್ತು. ಇವೆರೆಡು ವಿಮಾನಗಳ ನಡುವೆ ಅಪಘಾತ ಸಂಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ...