ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 27ಕ್ಕೆ ಮುಂದೂಡಿಕೆ

Date:

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಆರಂಭವಾಗಿದ್ದು ಸ್ಪೀಕರ್ ಓಂ ಬಿರ್ಲಾ ಅವರು ಅಧಿವೇಶನವನ್ನು ನವೆಂಬರ್ 27ಕ್ಕೆ ಮುಂದೂಡಿದ್ದಾರೆ. ಅದಾನಿ ಹಗರಣ, ಮಣಿಪುರ ಹಿಂಸಾಚಾರ ಬಗ್ಗೆ ಸದನದಲ್ಲಿ ವಿಪಕ್ಷಗಳು ಪ್ರಸ್ತಾಪಿಸಿದ್ದು ಗದ್ದಲದ ಬಳಿಕ ಕಲಾಪ ಮುಂದೂಡಲಾಗಿದೆ.

- Advertisement -

ಇನ್ನು “ಸ್ಪೀಕರ್ ಸದನವನ್ನು ಯಾಕೆ ಮುಂದೂಡಿದರು ಎಂಬುದು ತಿಳಿದಿಲ್ಲ” ಎಂದು ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಹೇಳಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಮಣಿಪುರ ಹಿಂಸಾಚಾರದ ವಿಷಯವನ್ನು ಪ್ರಸ್ತಾಪಿಸಲು ನಾವು ಆಗ್ರಹಿಸಿದ್ದೇವೆ. ಮಣಿಪುರದಲ್ಲಿ ಅತ್ಯಾಚಾರ, ಕೊಲೆಗಳು ನಡೆಯುತ್ತಿವೆ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು ಉತ್ತರ ಭಾರತದಲ್ಲಿ ಮಾಲಿನ್ಯ ಅಧಿಕವಾಗಿದೆ. ಈ ಬಗ್ಗೆ ನಮಗೆ ಆತಂಕವಿದೆ. ಇದು ಅತೀ ಗಂಭೀರ ವಿಷಯಗಳಾಗಿವೆ” ಎಂದು ಕಾಂಗ್ರೆಸ್‌ನ ಪ್ರಮೋದ್ ತಿವಾರಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಡಿ. 9ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸತ್ತಿನ ಉಭಯ ಸದನಗಳು ಸುಗಮವಾಗಿ ನಡೆಯಲು ಸಹಕಾರ ಮತ್ತು ಬೆಂಬಲ ನೀಡುವಂತೆ ಎಲ್ಲಾ ಪಕ್ಷದ ನಾಯಕರನ್ನು ವಿನಂತಿಸಿದ್ದಾರೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಚಳಿಗಾಲದ ಅಧಿವೇಶನವು ಡಿಸೆಂಬರ್ 20ರವರೆಗೆ ನಡೆಯಲಿದೆ. ಈ ಅಧಿವೇಶನದಲ್ಲಿ, ವಕ್ಫ್ ತಿದ್ದುಪಡಿ ಮಸೂದೆ ಮತ್ತು ವಿಪತ್ತು ನಿರ್ವಹಣಾ (ತಿದ್ದುಪಡಿ) ಮಸೂದೆಗಳು ಚರ್ಚೆಗೆ ಬರುವ ಸಾಧ್ಯತೆಯಿದೆ. ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ ಮತ್ತು ರೈಲ್ವೆ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ. ರೈಲ್ವೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನೂ ಮಂಡಿಸಲಾಗುವುದು.

ಜೊತೆಗೆ ಈ ಅಧಿವೇಶನದಲ್ಲಿ ಸರ್ಕಾರವು ‘ಒಂದು ದೇಶ ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಬಹುದು ಎಂಬ ಊಹಾಪೋಹಗಳಿವೆ. ಇತ್ತೀಚೆಗೆ ಒಂದು ದೇಶ ಒಂದು ಚುನಾವಣೆ ಯೋಜನೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...