ಆಪ್‌ ಸಂಸದರ ಸೇರ್ಪಡೆಯಿಂದ ರಾಜ್ಯಸಭೆಯಲ್ಲಿ NDAಗೆ 2/3 ಬಹುಮತಕ್ಕೆ ಕೇವಲ 17 ಸ್ಥಾನಗಳ ಕೊರತೆ   

Date:

ಆಮ್‌ ಆದ್ಮಿ ಪಕ್ಷದ ರಾಘವ ಚಡ್ಡಾ ಸೇರಿದಂತೆ 7 ಮಂದಿ ರಾಜ್ಯಸಭಾ ಸಂಸದರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಗೆ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ಕೇವಲ 17 ಸದಸ್ಯರ ಕೊರತೆ ಇದೆ.

- Advertisement -

ಎನ್‌ಡಿಎ ಈಗ ಮೇಲ್ಮನೆಯಲ್ಲಿ 145 ಸಂಸದರ ಬೆಂಬಲವನ್ನು ಹೊಂದಿದೆ. 244 ಸದಸ್ಯ ಬಲದ ಸದನದಲ್ಲಿ ಮೂರನೇ ಎರಡರಷ್ಟು ಬಹುಮತದ ಸಂಖ್ಯೆ 163 ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ರಾಜ್ಯಸಭಾಧ್ಯಕ್ಷ ಸಿ.ಪಿ ರಾಧಾಕೃಷ್ಣನ್ ಅವರು ಆಮ್‌ ಆದ್ಮಿ ಪಕ್ಷದ ಸಂಸದರ ವಿಲೀನವನ್ನು ಅನುಮೋದಿಸಿದ ಬಳಿಕ ಆಡಳಿತ ಪಕ್ಷದ ಸಂಸದರ ಸಂಖ್ಯೆ 113ಕ್ಕೆ ಹೆಚ್ಚಳವಾಗಲಿದೆ.

ರಾಜ್ಯಸಭೆಯಲ್ಲಿ ಬಿಜೆಪಿ ಪ್ರಸ್ತುತ 106 ಸಂಸದರನ್ನು ಹೊಂದಿದೆ. ಅಷ್ಟಲ್ಲದೆ ಆಡಳಿತ ಪಕ್ಷ  ಬಿಜೆಪಿ ಏಳು ನಾಮನಿರ್ದೇಶಿತ ಸದಸ್ಯರು ಹಾಗೂ ಇಬ್ಬರು ಸ್ವತಂತ್ರ ಸಂಸದರ ಬೆಂಬಲವನ್ನು ಪಡೆಯುವ ಸಾಧ್ಯತೆಯಿದೆ. ಇದರಿಂದ ಬಿಜೆಪಿಗೆ ಬೆಂಬಲ ನೀಡುವ ಒಟ್ಟು ಸದಸ್ಯರ ಸಂಖ್ಯೆ 122ಕ್ಕೆ ತಲುಪಲಿದೆ, ಇದು ಸದನದ ಅರ್ಧ ಸಂಖ್ಯೆಗೆ ಸರಿಯಾಗಲಿದೆ.

ಸಾಂವಿಧಾನಿಕ ತಿದ್ದುಪಡಿಗಳ ಅಗತ್ಯವಿರುವ ನಿರ್ಣಾಯಕ ಶಾಸನಗಳನ್ನು ಮೇಲ್ಮನೆಯಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಪಡೆದರೆ ಅಂಗೀಕರಿಸುವುದು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸುಲಭ ಸಾಧ್ಯವಾಗಲಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...