ರಾಜಸ್ಥಾನ | ಪೊಲೀಸ್ ರಕ್ಷಣೆ ಕೋರಿದ ಕೆಲವೇ ನಿಮಿಷಗಳಲ್ಲಿ ಎಸ್‌ಪಿ ಕಚೇರಿಯ ಹೊರಗೆ ಯುವತಿಯ ಅಪಹರಣ

Date:

ರಾಜಸ್ಥಾನದ ಭಿಲ್ವಾರಾದ ಕಲೆಕ್ಟರೇಟ್ ಸಂಕೀರ್ಣದ ಬಳಿ ಬುಧವಾರ ಹಾಡಹಗಲೇ ಯುವತಿಯೊಬ್ಬಳನ್ನು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಯ ಸಮೀಪದಿಂದಲೇ ಅಪಹರಣ ಮಾಡಲಾಗಿದೆ. ಯುವತಿ ಪೊಲೀಸ್ ರಕ್ಷಣೆ ಕೋರಿದ ಕೆಲವೇ ನಿಮಿಷಗಳಲ್ಲಿ ಎಸ್‌ಪಿ ಕಚೇರಿಯಿಂದ 50 ಮೀಟರ್ ದೂರದಲ್ಲೇ ಅತ್ಯಂತ ಹೆಚ್ಚಿನ ಭದ್ರತಾ ವಲಯಗಳಲ್ಲಿ ಒಂದಾದ ಭಿಲ್ವಾರದಲ್ಲಿ ಈ ಘಟನೆ ನಡೆದಿದೆ.

- Advertisement -

ಸಂಜೆ 6 ಗಂಟೆ ಸುಮಾರಿಗೆ ಕಪ್ಪು ಬಣ್ಣದ ಸ್ಕಾರ್ಪಿಯೋದಲ್ಲಿ ಬಂದವರು ಯುವತಿಯನ್ನು ಬಲವಂತವಾಗಿ ವಾಹನಕ್ಕೆ ಎಳೆದೊಯ್ದು ಅತಿ ವೇಗದಲ್ಲಿ ಪರಾರಿಯಾಗಿದ್ದಾರೆ. ಎಸ್‌ಪಿ ಕಚೇರಿಯ ಪ್ರದೇಶವನ್ನು ನಗರದಲ್ಲೇ ಅತಿ ಸುರಕ್ಷಿತ ಪ್ರದೇಶವೆಂದು ಪರಿಗಣಿಸಲಾಗುತ್ತದೆ. ಅಧಿಕ ಭದ್ರತೆ ಇರುವ ಪ್ರದೇಶದಲ್ಲೇ ಅಪಹರಣ ನಡೆದಿರುವುದು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆ ಹುಟ್ಟುಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಬೆಂಗಳೂರು | ಸಹಾಯ ಕೇಳುವ ನೆಪದಲ್ಲಿ ಮಕ್ಕಳ ಅಪಹರಣ; ಆರೋಪಿ ಮಹಿಳೆ ಬಂಧನ

ಇನ್ನು ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ವಾಹನವನ್ನು ತಡೆಯಲು ಪ್ರಯತ್ನಿಸಿದ್ದು ಆರೋಪಿಗಳು ತಮ್ಮ ವಾಹನದಿಂದ ಪೊಲೀಸರಿಗೆ ಡಿಕ್ಕಿ ಹೊಡಯಲು ಪ್ರಯತ್ನಿಸಿ ತಪ್ಪಿಸಿಕೊಂಡಿದ್ದಾರೆ. ಇನ್ನು ಸಮೀಪದಲ್ಲಿ ಕರ್ತವ್ಯದಲ್ಲಿದ್ದ ಜಿಲ್ಲಾ ವಿಶೇಷ ಶಾಖೆಯ (ಡಿಎಸ್‌ಬಿ) ಎಎಸ್‌ಐ ಪ್ರತಾಪ್ ಸಿಂಗ್ ವಾಹನಕ್ಕೆ ಅಡ್ಡಲಾಗಿ ನಿಂತಿದ್ದು, ವಾಹನ ಮಾತ್ರ ವೇಗ ಕಡಿಮೆ ಮಾಡಿಲ್ಲ. ಪ್ರತಾಪ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದು, ಅವರ ಮೊಬೈಲ್‌ಗೆ ಮಾತ್ರ ಹಾನಿಯಾಗಿದೆ. ಇನ್ನು ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ವಕೀಲರು ಯುವತಿಯನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಅಪಹರಣ ಮಾಡಿದವರು ಆಕೆಯ ಪೋಷಕರ ಕುಟುಂಬಕ್ಕೆ ಸೇರಿದವರು ಎಂದು ಯುವತಿಯ ಅತ್ತೆ-ಮಾವ ಆರೋಪಿಸಿದ್ದಾರೆ. ಮಹಿಳೆ ಕೋರ್ಟ್‌ ವಿವಾಹವಾಗಿದ್ದು, ಈ ಹಿಂದೆ ತನ್ನ ಸಂಗಾತಿಯೊಂದಿಗೆ ಲಿವ್-ಇನ್‌ನಲ್ಲಿದ್ದರು. ಆದರೆ ಆಕೆಯ ಕುಟುಂಬ ಇದನ್ನು ವಿರೋಧಿಸಿತ್ತು. ಯುವತಿ ಈಗಾಗಲೇ ತನ್ನ ಪೋಷಕರ ಕುಟುಂಬದಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಬುಧವಾರ, ಪೊಲೀಸ್ ರಕ್ಷಣೆ ಕೋರಿ ಅಫಿಡವಿಟ್ ಸಲ್ಲಿಸಲು ಎಸ್‌ಪಿ ಕಚೇರಿಗೆ ಭೇಟಿ ನೀಡಿದ್ದರು. ಅಫಿಡವಿಟ್ ಸಲ್ಲಿಸಿ ಹಿಂತಿರುಗುತ್ತಿದ್ದಾಗ ಅಪಹರಣ ನಡೆದಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಾಸ್ ಜೈನ್, “ಜಿಲ್ಲೆಯಾದ್ಯಂತ ರಸ್ತೆ ತಡೆಗಳನ್ನು ಹಾಕಿ ಕಪ್ಪು ಸ್ಕಾರ್ಪಿಯೋವನ್ನು ವಶಕ್ಕೆ ಪಡೆದು ಯುವತಿಯನ್ನು ರಕ್ಷಿಸಲಾಗಿದೆ. ಹಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಪೊಲೀಸ್ ಕಚೇರಿಗಳಿರುವ ಪ್ರದೇಶದಲ್ಲೇ ಈ ಘಟನೆ ನಡೆದಿರುವುದರಿಂದ ಭಿಲ್ವಾರಾದಲ್ಲಿ ಸ್ಥಳೀಯವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಭಾರೀ ಭದ್ರತೆ ಇರುವ ಪ್ರದೇಶಗಳಲ್ಲಿಯೂ ಸಹ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ಉಂಟಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...