ಐಐಎಂ-ಕೋಲ್ಕತ್ತಾ ಬಾಲಕರ ಹಾಸ್ಟೆಲ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ: ಓರ್ವನ ಬಂಧನ

Date:

ಪಶ್ಚಿಮ ಬಂಗಾಳದ ಪ್ರತಿಷ್ಠಿತ ಸ್ನಾತಕೋತ್ತರ ನಿರ್ವಹಣಾ ಸಂಸ್ಥೆಯಾದ ಐಐಎಂ-ಕೋಲ್ಕತ್ತಾದ ಬಾಲಕರ ಹಾಸ್ಟೆಲ್ ಒಳಗೆ ಯುವತಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ.

- Advertisement -

ಆರೋಪಿಯನ್ನು ಕರ್ನಾಟಕ ಮೂಲದ ವಿದ್ಯಾರ್ಥಿ ಪರಮಾನಂದ ಎಂದು ಗುರುತಿಸಿದ್ದಾರೆ. ಶನಿವಾರ ಆರೋಪಿಯನ್ನು ಅಲಿಪೋರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಬೆಂಗಳೂರು | ಯುವತಿ ಮೇಲೆ ಅತ್ಯಾಚಾರಗೈದ ಮೂವರ ಬಂಧನ

ಆರೋಪಿಯು ಮತ್ತೊಂದು ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತ ಯುವತಿಯನ್ನು ಕೌನ್ಸೆಲಿಂಗ್ ಕಾರ್ಯಕ್ರಮಕ್ಕಾಗಿ ಸಂಸ್ಥೆಯ ಕ್ಯಾಂಪಸ್‌ಗೆ ಕರೆದಿದ್ದ. ಗೇಟ್‌ನಲ್ಲಿ ಅವಳನ್ನು ಭೇಟಿಯಾಗಿ ಸಂದರ್ಶಕರ ರಿಜಿಸ್ಟರ್‌ನಲ್ಲಿ ತನ್ನ ಹೆಸರನ್ನು ನಮೂದಿಸದಂತೆ ಹೇಳಿದ್ದಾನೆ. ಈ ವೇಳೆಯೇ ಯುವತಿಗೆ ಅನುಮಾನವಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಬಳಿಕ ಆರೋಪಿಯು ಬಾಲಕರ ಹಾಸ್ಟೆಲ್‌ನಲ್ಲಿ ತನಗೆ ಏನೋ ಕೆಲಸವಿದೆ ಎಂದು ಹೇಳಿ ಯುವತಿಯನ್ನು ಕೌನ್ಸೆಲಿಂಗ್ ಸ್ಥಳದ ಬದಲು ಹಾಸ್ಟೆಲ್‌ಗೆ ಕರೆದೊಯ್ದಿದ್ದಾನೆ. ಅಲ್ಲಿ ನೀರು ಮತ್ತು ಪಿಜ್ಜಾ ನೀಡಿದ್ದು ಅದರಲ್ಲಿ ಮಾದಕ ದ್ರವ್ಯ ಬೆರೆಸಲಾಗಿತ್ತು ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಅದನ್ನು ತಿಂದ ಬಳಿಕ ಪ್ರಜ್ಞೆ ತಪ್ಪಿತು, ಎಚ್ಚರವಾದಾಗ ಅತ್ಯಾಚಾರ ನಡೆದಿರುವುದು ತಿಳಿದುಬಂದಿದೆ ಎಂದು ಯುವತಿ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾಳೆ.

ಯುವತಿಗೆ ಪ್ರಜ್ಞೆ ಬಂದ ನಂತರ ಹಾಸ್ಟೆಲ್ ಕೊಠಡಿಯಿಂದ ತಪ್ಪಿಸಿಕೊಂಡು ಹೊರಬಂದು, ತನ್ನ ಮೇಲೆ ಅತ್ಯಾಚಾರವಾಗಿರುವ ಬಗ್ಗೆ ತನ್ನ ಸ್ನೇಹಿತರಿಗೆ ತಿಳಿಸಿದ್ದಾಳೆ. ಬಳಿಕ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾಳೆ. ಸದ್ಯ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನೂ ನಾಲ್ವರು ಈ ಅತ್ಯಾಚಾರ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯಿದೆ. ಸದ್ಯ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಭದ್ರತಾ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗಿದ್ದು, ಹಾಸ್ಟೆಲ್ ಸೂಪರಿಂಟೆಂಡೆಂಟ್ ಅವರ ವಿಚಾರಣೆಯೂ ನಡೆಯಲಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಸದ್ಯ ಪೊಲೀಸರು ಹಾಸ್ಟೆಲ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಸಂಸ್ಥೆಯ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...