ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-27 ರಲ್ಲಿ ಬುಧವಾರ ನಡೆದಿದೆ.
ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಅದಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನದ ಬರಾನ್ ಮತ್ತು ಮಧ್ಯಪ್ರದೇಶದ ವಿವಿಧ ಭಾಗಗಳಿಂದ ರಾಜ್ಸಮಂದ್‌ಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತ ಸಂಭವಿಸಿದೆ.
ಇದನ್ನು ಓದಿದ್ದೀರಾ? ರಾಜಸ್ಥಾನ | ಆಟೋ-ಬಸ್ ನಡುವೆ ಭೀಕರ ಅಪಘಾತ; 12 ಮಂದಿ ದುರ್ಮರಣ
ಬುಧವಾರ ಬೆಳಗಿನ ಜಾವ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರು ಮತ್ತು ಗಾಯಾಳುಗಳ ಗುರುತು ಮತ್ತು ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
