ಉತ್ತರ ಪ್ರದೇಶ | ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಹತ್ಯೆ; ಯುವತಿಯ ಬಂಧನ

Date:

ಅತ್ಯಾಚಾರ ನಡೆಸಲು ಯತ್ನಿಸಿದ ವ್ಯಕ್ತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ 18 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ ಮುರ್ವಾಲ್ ಗ್ರಾಮದಲ್ಲಿ ಯುವತಿ ತನ್ನ ಮೇಲೆ ಅತ್ಯಾಚಾರ ಮಾಡಲು ಬಂದ ವ್ಯಕ್ತಿಯ ಕೊಲೆ ಮಾಡಿದ್ದಾರೆ.

- Advertisement -

ಮಧ್ಯಾಹ್ನ 3.30ರ ಸುಮಾರಿಗೆ ಸುಖರಾಜ್ ಪ್ರಜಾಪತಿ (50) ಮೃತದೇಹವು ಮನೆಯಲ್ಲಿ ಪತ್ತೆಯಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಜೇಂದ್ರ ಸಿಂಗ್ ರಾಜವತ್ ಹೇಳಿದ್ದಾರೆ. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಯುವತಿಯನ್ನು ಬಂಧಿಸಿದ್ದಾರೆ ಎಂದೂ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಉತ್ತರಪ್ರದೇಶ: ದಲಿತ ಮಹಿಳೆಯ ಮೇಲೆ ಅತ್ಯಾಚಾರ

ವಿಚಾರಣೆಯ ವೇಳೆ “ಆ ವ್ಯಕ್ತಿ ನನ್ನ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಈ ವೇಳೆ ನನ್ನನ್ನು ನಾನು ರಕ್ಷಿಸಿಕೊಳ್ಳಲು ಮನೆಯಲ್ಲಿದ್ದ ಹರಿತ ಆಯುಧದಿಂದ ಹೊಡೆದೆ. ಇದರಿಂದಾಗಿ ಆತ ಮೃತಪಟ್ಟ” ಎಂದು ಯುವತಿ ಹೇಳಿದ್ದಾಳೆ.

ಕಾನೂನು ಹೇಳುವುದೇನು?

ಪ್ರಸ್ತುತ ಜಾರಿಯಲ್ಲಿರುವ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಮಹಿಳೆಯು ತನ್ನ ರಕ್ಷಣೆಗಾಗಿ ಎದುರಾಳಿಯ ಮೇಲೆ ದಾಳಿ ಮಾಡಿದಾಗ ಎದುರಾಳಿ ಮೃತಪಟ್ಟರೆ ಅದನ್ನು ಕೊಲೆ ಎಂದು ಪರಿಗಣಿಸಲಾಗುವುದಿಲ್ಲ. ಆತ್ಮರಕ್ಷಣೆ ಅಥವಾ ಇತರರ ರಕ್ಷಣೆಗಾಗಿ ಮಾಡುವ ಹತ್ಯೆಯನ್ನು ಸಮರ್ಥನೀಯ ನರಹತ್ಯೆ (Justifiable Homicide) ಎಂದು ಪರಿಗಣಿಸಲಾಗುತ್ತದೆ. ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರದ ಪ್ರಯತ್ನ ನಡೆದಾಗ, ಆಸಿಡ್ ಎಸೆಯುವ ಅಥವಾ ಆಸಿಡ್ ಹಾಕಲು ಯತ್ನಿಸುವ ಸಂದರ್ಭದಲ್ಲಿ ತನ್ನನ್ನು ತಾನು ರಕ್ಷಿಸಲು ಎದುರಾಳಿಯ ಮೇಲೆ ದಾಳಿ ನಡೆಸುವುದು ಅಪರಾಧವಾಗುವುದಿಲ್ಲ.

ಆದರೆ ಬಿಎನ್‌ಎಸ್ ಸೆಕ್ಷನ್ 37 / ಹಿಂದಿನ IPC 99 ಈ ಸಂಬಂಧ ಕೆಲವು ಮಿತಿಗಳಿವೆ. ಎದುರಾಳಿಯು ಕೇವಲ ಸಣ್ಣ ಪುಟ್ಟ ತಳ್ಳಾಟ ಮಾಡುತ್ತಿದ್ದರೆ ಅಥವಾ ಬಯ್ಯುತ್ತಿದ್ದಾಗ ಆತನನ್ನು ಕೊಲ್ಲುವ ಹಕ್ಕು ಇರುವುದಿಲ್ಲ. ಅಂದರೆ ಎದುರಾಳಿಯ ದಾಳಿಯ ತೀವ್ರತೆಗೆ ತಕ್ಕಷ್ಟೇ ಪ್ರತಿರೋಧ ಇರಬೇಕು ಎಂದು ಕಾನೂನು ಹೇಳುತ್ತದೆ. ಹಾಗೆಯೇ ದಾಳಿ ಮಾಡುವ ವ್ಯಕ್ತಿಯಿಂದ ತಪ್ಪಿಸಿಕೊಳ್ಳಲು ಸಮಯವಿದ್ದಾಗ ಅಥವಾ ಹತ್ತಿರದಲ್ಲಿ ಪೊಲೀಸರ ನೆರವು ಲಭ್ಯವಿದ್ದಾಗ ಸ್ವತಃ ಕಾನೂನನ್ನು ಕೈಗೆತ್ತಿಕೊಳ್ಳುವಂತಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...