ಅಮಾನುಷ ಕೃತ್ಯ | ತರಕಾರಿ ಕದ್ದ ಆರೋಪ: ಮಹಿಳೆ, ಪುತ್ರಿಗೆ ಥಳಿತ; ನೆಟ್ಟಿಗರ ಆಕ್ರೋಶ

Date:

ತರಕಾರಿ ಕದ್ದ ಆರೋಪದಲ್ಲಿ ಮಹಿಳೆ ಮತ್ತು ಆಕೆಯ ಪುತ್ರಿಗೆ ಕೂದಲು ಹಿಡಿದು ಎಳೆದಾಡಿ ಅಮಾನುಷವಾಗಿ ಥಳಿಸಿದ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

- Advertisement -

ತರಕಾರಿ ಮಾರುಕಟ್ಟೆಯ ರಸ್ತೆಯಲ್ಲಿ ಮಹಿಳೆ ಮತ್ತು ಆಕೆಯ ಪುತ್ರಿಯ ಕೂದಲು ಎಳೆದು, ಹೊಟ್ಟೆಗೆ ಒದ್ದು, ಕೋಲುಗಳಿಂದ ಹೊಡೆದಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದ್ದು, ಇಬ್ಬರು ಪುರುಷರು ಮಹಿಳೆ ಮತ್ತು ಆಕೆಯ ಮಗಳನ್ನು ಥಳಿಸುತ್ತಿರುವುದು ಕಂಡುಬಂದಿದೆ. ಹಲವು ಮಂದಿ ನಿಂತು ನೋಡುತ್ತಿರುವುದು ಕಂಡು ಬಂದಿದೆ. ಆದರೆ ಯಾರೂ ಕೂಡಾ ಮಹಿಳೆಯರ ಸಹಾಯಕ್ಕೆ ಬಂದಿಲ್ಲ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಅಮಾನುಷ ಕೃತ್ಯ | ದಲಿತ ಬಾಲಕಿಯ ಅಪಹರಣ, ನಿರಂತರ ಸಾಮೂಹಿಕ ಅತ್ಯಾಚಾರ

ಸೆಕ್ಯುರಿಟಿ ಗಾರ್ಡ್‌ನಂತೆ ಕಾಣುವ ವ್ಯಕ್ತಿಯೊಬ್ಬರ ಹಣೆಯಲ್ಲಿ ರಕ್ತಸ್ರಾವವಾಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ವ್ಯಕ್ತಿಯೇ ಕೋಲು ಹಿಡಿದುಕೊಂಡು ಮಹಿಳೆಯ ಕಡೆಗೆ ಹೋಗಿ ಕೂದಲು ಹಿಡಿದು ರಸ್ತೆಯಲ್ಲಿ ಎಳೆದಾಡಿ ಹೊಡೆದಿದ್ದಾರೆ. ಅದೇ ಸಮಯದಲ್ಲಿ, ಇತರ ಇಬ್ಬರು ಪುರುಷರು ಯುವತಿಯ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಆಕೆಯ ಕೂದಲನ್ನು ಎಳೆದು, ನೆಲಕ್ಕೆ ತಳ್ಳಿ ಹೊಟ್ಟೆಗೆ ಒದ್ದಿದ್ದಾರೆ.

ಸೂರತ್ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ವಿಡಿಯೋವನ್ನು ಕೂಡಾ ಸೇರಿಸಲಾಗಿದೆ. “ಸೂರತ್ ಎಪಿಎಂಸಿಯಲ್ಲಿ ತರಕಾರಿಗಳನ್ನು ಕದ್ದ ಆರೋಪದ ಮೇಲೆ ಮಹಿಳೆ ಮತ್ತು ಯುವತಿಯ ಮೇಲೆ ಹಲ್ಲೆ ನಡೆಸಿದ ಘಟನೆಯಲ್ಲಿ ಸೂರತ್ ನಗರ ಪುಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ” ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ನೆಟ್ಟಿಗರು ಪೊಲೀಸರು ಈ ಆರೋಪಿಗಳಿಗೂ ಥಳಿಸಿದ್ದಾರೆ ಎಂದು ಹೇಳಿದ್ದಾರೆ. ಆರೋಪಿಗಳಿಗೆ ಥಳಿಸಿ ಶಿಕ್ಷಿಸುವುದು ಸರಿಯಲ್ಲ. ನ್ಯಾಯಾಲಯವೇ ತೀರ್ಪು ನೀಡಬೇಕು. ಪೊಲೀಸರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಕೆಲವು ನೆಟ್ಟಿಗರು ಹೇಳಿದ್ದಾರೆ.

ಇನ್ನು ಕೆಲವು ಪೊಲೀಸರನ್ನು ಪ್ರಶಂಸಿಸಿದ್ದಾರೆ. ಇವೆಲ್ಲವುದರ ನಡುವೆ ಬೆಲೆ ಏರಿಕೆ, ಬಡತನದ ವಿಚಾರವನ್ನು ಕೆಲವು ನೆಟ್ಟಿಗರು ಮುಂದಿಟ್ಟಿದ್ದಾರೆ. ಮಹಿಳೆಯರು ತರಕಾರಿ ಕದ್ದಿರುವುದು ನಿಜವೇ ಆಗಿದ್ದರೆ, ಅವರ ಬಡತನದ ಬಗ್ಗೆ ಚಿಂತಿಸಬೇಕು. ಪ್ರಸ್ತುತ ದೇಶದಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಬಡವರಿಗೆ ಒಂದು ಹೊತ್ತಿನ ಊಟಕ್ಕೂ ಕಷ್ಟವಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...