ರೀಲ್ಸ್‌ ಹುಚ್ಚಾಟ: ನೇಣು ಬಿಗಿದುಕೊಂಡು ಮಹಿಳೆ ಸಾವು

Date:

ಉತ್ತರ ಪ್ರದೇಶದ ಬಂಡಾ ಜಿಲ್ಲೆಯ 27 ವರ್ಷದ ಮೋಹಿನಿ ಎಂಬ ಮಹಿಳೆ ಇನ್‌ಸ್ಟಾಗ್ರಾಮ್ ರೀಲ್ಸ್‌ ಚಿತ್ರೀಕರಣ ಮಾಡುವಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್‌ ಮಾಡಲು ಮೋಹಿನಿ ಭಯಸುತ್ತಿದ್ದರು. ಅದರಂತೆ ಕೋಣೆಯಲ್ಲಿ ರೀಲ್ಸ್‌ ಮಾಡುವ ವೇಳೆ ಸ್ಟೂಲ್‌ ಮೇಲೆ ನಿಂತು ಸೀಲಿಂಗ್‌ ಫ್ಯಾನಿಗೆ ನೇಣು ಹಾಕಿಕೊಳ್ಳವ ದೃಶ್ಯವನ್ನು ಚಿತ್ರೀಕರಿಸಲು ಪ್ರಯತ್ನಿಸಿದ್ದಾರೆ. ಸ್ಟೂಲ್‌ ಮೇಲೆ ನಿಂತಾಗ ಕಾಲು ಜಾರಿದೆ. ತಕ್ಷಣವೇ ಸ್ಟೂಲ್‌ ಜಾರಿ ಬಿದ್ದಿದೆ. ಕೆಲವೇ ಕ್ಷಣದಲ್ಲಿ ಪ್ರಾಣಪಕ್ಷಿ ಹಾರಿ ಹೋಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಮೋಹಿನಿ ಅವರಿಗೆ ನಾಲ್ಕು ವರ್ಷದ ಮಗಳಿದ್ದು, ಅವಳು ಕೋಣೆಗೆ ಪ್ರವೇಶಿಸಿದಾಗ ತಾಯಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಮಗು ತಕ್ಷಣವೇ ಕಿರುಚಿಕೊಂಡಿದೆ. ಆಕೆಯ ಕಿರುಚಾಟಕೇಳಿದಾಗ ಅವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ವಿಷಯ ತಿಳಿದ ತಕ್ಷಣ ಮೋಹಿನಿ ಅವರ ಪತಿ, ಜಗದೀಶ್‌ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ʼಫೆ. 06 ರ ಸಂಜೆ ವೇಳೆ ರೀಲ್ಸ್‌ ತಯಾರಿಸಲು ಕೋಣೆಗೆ ತೆರಳಿಸಿದ್ದಾರೆ. ಸ್ಟೂಲ್‌ ಮೇಲೆ ನಿಂತು ನೇಣು ಹಾಕಿಕೊಳ್ಳುವ ದೃಶ್ಯ ತಯಾರಿಸುತ್ತಿದ್ದಾರೆ ಎಂದು ಭಾವಿಸಿದ್ದೆವುʼ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ.

ಆರಂಭದಲ್ಲಿ ಮೋಹಿನಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಸದಸ್ಯರು ಭಾವಿಸಿದ್ದಾರೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ರೀಲ್ಸ್‌ ಮಾಡುವ ವೇಳೆ ಈ ಘಟನೆ ನಡೆದಿದೆ ಎಂದು ಬಾಬೇರು ಪೊಲೀಸ್‌ ಠಾಣೆಯ ಪೊಲೀಸ್‌ ವರಿಷ್ಠಾಧಿಕಾರಿ ಪಲಾಶ್‌ ಬನ್ಸಾಲ್‌ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...