ಸೇತುವೆ ಇಲ್ಲದೆ ಪರದಾಟ: ಮಂಚದ ಮೇಲೆ ಹೊತ್ತೊಯ್ಯುವಾಗಲೇ ಮಹಿಳೆಗೆ ಹೆರಿಗೆ!

Date:

ಅತ್ತ ಆಂಬ್ಯುಲೆನ್ಸ್ ಇಲ್ಲ, ಇತ್ತ ಸೇತುವೆಯೂ ಇಲ್ಲ. ಬೇರೆ ದಾರಿ ಕಾಣದೆ ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಯನ್ನು ಗ್ರಾಮಸ್ಥರು ಮಂಚದಲ್ಲಿ ಹೊತ್ತೊಯ್ಯುವಾಗ, ನಡು ದಾರಿಯಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಅಮರವಾರ ಬ್ಲಾಕ್‌ನ ಹಥೋಡಾ ಹಿರಿ ಗ್ರಾಮದ ಲೋಹ್ರಿ ಮೊಹಲ್ಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಳೆಗಾಲದಲ್ಲಿ ಸೇತುವೆ ಇಲ್ಲದೆ, ಇರುವ ಒಂದು ರಸ್ತೆಯೂ ಜಲಾವೃತವಾಗುವ ಕಾರಣ ಇಲ್ಲಿನ ಸುಮಾರು 20 ಕುಟುಂಬಗಳು ಪಟ್ಟಣಕ್ಕೆ ಸಂಪರ್ಕವನ್ನು ಕಳೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಇದನ್ನೂ ಓದಿ: ಹೆರಿಗೆಗಾಗಿ 6 ಕಿ.ಮೀ ನಡೆದು ಬಂದ ಗರ್ಭಿಣಿ ಸಾವು

ಈ ನಡುವೆ ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಗ್ರಾಮಸ್ಥರು ಮಂಚದಲ್ಲಿ ಹೊತ್ತು ಪಟ್ಟಣದತ್ತ ಧಾವಿಸಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಶಂಕರ್ ವಿಶ್ವಕರ್ಮ ಅವರ ಪತ್ನಿ 35 ವರ್ಷದ ಸವಿತಾ ವಿಶ್ವಕರ್ಮ ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಅವರ ಸಂಬಂಧಿಕರು ತಕ್ಷಣ 108 ಆಂಬ್ಯುಲೆನ್ಸ್ ಸೇವೆಗೆ ಕರೆ ಮಾಡಿದ್ದರು. ಆದರೆ ನದಿ ಉಕ್ಕಿ ಹರಿಯುತ್ತಿದ್ದ ಕಾರಣ ವಾಹನವು ಹಳ್ಳಿಯನ್ನು ತಲುಪಲು ಸಾಧ್ಯವಾಗಲಿಲ್ಲ. ಬೇರೆ ದಾರಿಯಿಲ್ಲದೆ, ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಮಹಿಳೆಯನ್ನು ಮಂಚದಲ್ಲಿ ಹೊತ್ತು ನಡೆದುಕೊಂಡು ನದಿಯನ್ನು ದಾಟಲು ಮುಂದಾಗಿದ್ದಾರೆ. ನದಿ ದಾಟುವಾಗ ಹೆರಿಗೆ ನೋವು ತೀವ್ರವಾಗಿ ಮಂಚದಲ್ಲಿಯೇ ಹೆರಿಗೆಯಾಗಿದೆ.

ನಂತರ ಗ್ರಾಮಸ್ಥರು ತಾಯಿ ಮತ್ತು ನವಜಾತ ಶಿಶುವನ್ನು ನದಿ ದಾಟಿಸಿ ಆಂಬ್ಯುಲೆನ್ಸ್‌ಗಾಗಿ ಕಾದಿದ್ದಾರೆ. ಆದರೆ ಸುಮಾರು ಗಂಟೆಗಳ ಕಾಲ ಕಾದರೂ ಆಂಬ್ಯುಲೆನ್ಸ್ ಬರದ ಕಾರಣ ಶಿಶು, ತಾಯಿಯನ್ನು ಕೊನೆಗೆ ಮೋಟಾರ್ ಸೈಕಲ್‌ನಲ್ಲಿ ಅಮರವಾರ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಹಿಳೆಯ ಸೋದರ ಮಾವ ಗೋಪಾಲ್ ವಿಶ್ವಕರ್ಮ, ಪ್ರತಿ ಮಳೆಗಾಲದಲ್ಲಿ ಗ್ರಾಮದಲ್ಲಿ ಇದೇ ಸಮಸ್ಯೆ ಉಂಟಾಗುತ್ತದೆ. ವಾಹನಗಳು ನದಿ ದಾಟಲು ಸಾಧ್ಯವಾಗದ ಕಾರಣ ಹಲವು ಸಮಸ್ಯೆಗಳಾಗುತ್ತದೆ. ನಾವು ಸೇತುವೆ ನಿರ್ಮಾಣಕ್ಕಾಗಿ, ಉತ್ತಮ ರಸ್ತೆಗಾಗಿ ಪದೇ ಪದೇ ಮನವಿ ಮಾಡುತ್ತಲೇ ಇದ್ದೇವೆ. ಆದರೆ ನಮ್ಮ ಮನವಿಯನ್ನು ಕೇಳುವವರಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅಧಿಕಾರಿಗಳು, ಜನಪ್ರತಿನಿಧಿಗಳು ನಮ್ಮ ಮನವಿಯನ್ನು ಕೇಳುವುದೇ ಇಲ್ಲ. ಶಾಲಾ ಮಕ್ಕಳು ಸಹ ಪ್ರತಿದಿನ ನದಿ ದಾಟಬೇಕಾಗುತ್ತದೆ. ನಾವು ಜನಪದ ಪಂಚಾಯತ್, ಎಸ್‌ಡಿಎಂಗೆ ದೂರುಗಳನ್ನು ಸಲ್ಲಿಸಿದ್ದೇವೆ. ಚುನಾಯಿತ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದೇವೆ. ಆದೆರೆ ಯಾರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ವಿಶ್ವಕರ್ಮ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...