ನಾಗ್ಪುರ | ಬಿಜೆಪಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಲ್ತುಳಿತ: ಮಹಿಳೆ ಸಾವು, ನಾಲ್ವರಿಗೆ ಗಾಯ

ಕಾಲ್ತುಳಿತ ನಾಗ್ಪುರ

ಮಹಾರಾಷ್ಟ್ರದ ನಾಗ್ಪುರದಲ್ಲಿ ಬಿಜೆಪಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ಸ್ಥಳೀಯ ಪೊಲೀಸ್ ವರದಿಗಳ ಪ್ರಕಾರ ಬೆಳಿಗ್ಗೆ 10.30ರ ಸಮಯದಲ್ಲಿ ಬಿಜೆಪಿಯ ನಾಗ್ಪುರ ಘಟಕವು ರೇಷಿಂಭಾಗ್‌ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾಗ ದುರಂತ ಸಂಭವಿಸಿದೆ.

ಕಾರ್ಯಕ್ರಮದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪಾತ್ರೆಗಳನ್ನು ವಿತರಿಸಲಾಗುತ್ತಿತ್ತು. ಸ್ಥಳದಲ್ಲಿ ಬೃಹತ್ ಸಂಖ್ಯೆಯಲ್ಲಿ ಜನರು ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ʼಮಹಿಳಾ ದಿನʼ ಅರ್ಥಪೂರ್ಣವಾಗೋದು ಆಕೆಗೆ ಘನತೆಯಿಂದ ಬದುಕಲು ಬಿಟ್ಟಾಗ ಮಾತ್ರ

ಕಾಲ್ತುಳಿತದಲ್ಲಿ ಅಸ್ವಸ್ಥಗೊಂಡ ಮನು ತುಳಸಿರಾಮ್‌ ರಜಪೂತ್‌ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನಂತರದಲ್ಲಿ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಇತರ ನಾಲ್ವರು ಮಹಿಳೆಯರು ಸಣ್ಣಪುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಕಸ್ಮಿಕ ಸಾವು ಎಂದು ಪ್ರಕರಣ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here