ಮೌಢ್ಯ | ‘ಪೂರ್ವಜರ ಮೋಕ್ಷ’ಕ್ಕಾಗಿ ಇಬ್ಬರು ಮಕ್ಕಳನ್ನು ಬಲಿಕೊಟ್ಟ ತಾಯಿ

Date:

ಮೌಢ್ಯ ನಂಬಿಕೆಯನ್ನು ಹೊಂದಿದ್ದ ಮಹಿಳೆಯೊಬ್ಬರು ಪೂರ್ವಜರ ಮೋಕ್ಷಕ್ಕಾಗಿ ತನ್ನ ಇಬ್ಬರು ಮಕ್ಕಳನ್ನು ಕೊಂದ ಆಘಾತಕಾರಿ ಘಟನೆ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

- Advertisement -

ಆರೋಪಿ ಸುನೀತಾ ಶರ್ಮಾಳನ್ನು ಪೊಲೀಸರು ಬಂಧಿಸಿದ್ದಾರೆ. ಸುನೀತಾ ತನ್ನ ಮಾವನನ್ನೂ ಕೊಲ್ಲಲು ಪ್ರಯತ್ನಿಸಿದ್ದು ಮನೆಯಿಂದ ಹೊರಗೆ ಓಡಿಹೋಗಿ ಅವರು ತಮ್ಮ ಜೀವವನ್ನು ಉಳಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಯಾಂಕಿ ಕೆರೆಯಲ್ಲಿ ಸರ್ಕಾರಿ ಪ್ರಾಯೋಜಿತ ಮೌಢ್ಯಾರತಿ, ಯಾರಿಗಾಗಿ?

ಮೂಲತಃ ಉತ್ತರ ಪ್ರದೇಶದ ಸುನೀತಾ, ತನ್ನ ಪತಿ ಶಿವಕಾಂತ್, ಏಳು ಮತ್ತು ನಾಲ್ಕು ವರ್ಷದ ಇಬ್ಬರು ಗಂಡು ಮಕ್ಕಳು, ಅತ್ತೆ-ಮಾವ ಇಂದ್ರಪಾಲ್ ಮತ್ತು ಸುಸ್ರಿ ಜೊತೆ ಗುಜರಾತ್‌ನ ನವಸಾರಿ ಜಿಲ್ಲೆಯ ಬಿಲಿಮೊರಾ ಪಟ್ಟಣದ ಡೆಸ್ರಾ ಪ್ರದೇಶದ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಶಿವಕಾಂತ್‌ಗೆ ಟೈಫಾಯ್ಡ್ ಇದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಇಂದ್ರಪಾಲ್(ಮಾವ) ಮತ್ತು ಸುಶ್ರೀ(ಅತ್ತೆ) ತಮ್ಮ ಮಗ (ಶಿವಕಾಂತ್) ಗೆ ಆಹಾರ ನೀಡಲು ಆಸ್ಪತ್ರೆಗೆ ಹೋಗಿದ್ದು ಇಂದ್ರಪಾಲ್‌ ಹಿಂದಿರುಗಿ ಬಂದು ತಮ್ಮ ಕೋಣೆಯಲ್ಲಿ ಮಲಗಿದ್ದರು. ಸುನೀತಾ ತನ್ನ ಮಲಗುವ ಕೋಣೆಯಲ್ಲಿದ್ದಳು. ಸುನೀತಾಗೆ ಕೆಲವು ದಿನಗಳಿಂದ ಸರಿಯಾಗಿ ನಿದ್ದೆ ಬರುತ್ತಿರಲಿಲ್ಲ. ತನ್ನ ಪೂರ್ವಜರ ಮೋಕ್ಷ ಸಿಗದ ಕಾರಣದಿಂದಾಗಿ ಹೀಗೆ ಆಗುತ್ತಿದೆ ಎಂದುಕೊಂಡಿದ್ದ ಸುನೀತಾ, ಪೂರ್ವಜರ ಮೋಕ್ಷಕ್ಕಾಗಿ ತನ್ನ ಇಬ್ಬರು ಗಂಡು ಮಕ್ಕಳನ್ನು ಕೊಂದಿದ್ದಾಳೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ ವಿ ಗೋಹಿಲ್ ಮಾಹಿತಿ ನೀಡಿದ್ದಾರೆ.

ಅದಾದ ಬಳಿಕ ಸುನೀತಾ ಇನ್ನೊಂದು ಕೋಣೆಗೆ ಹೋಗಿ ತನ್ನ ಮಾವನ ಕತ್ತು ಹಿಸುಕಲು ಪ್ರಯತ್ನಿಸಿದ್ದು ಆದರೆ ಅವರ ಮನೆಯಿಂದ ಹೊರಗೆ ಓಡಿಹೋಗಿ ನೆರೆಹೊರೆಯವರನ್ನು ಕರೆದಿದ್ದಾರೆ. ಈ ವೇಳೆ ಸುನೀತಾ ಬಾಗಿಲು ಚಿಲಕ ಹಾಕಿಕೊಂಡಿದ್ದು, ಪೊಲೀಸ್ ತಂಡ ಬಂದು ಬಾಗಿಲು ಒಡೆದು ಒಳಗೆ ಹೋಗಿದ್ದು ಸುನೀತಾಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮೈಸೂರು | ಆನೆ ಲದ್ದಿ ತುಳಿದು ಮೌಢ್ಯ ಮೆರೆದ ಮೈಸೂರಿಗರು

ಭಾರತದಲ್ಲಿ ಮೌಢ್ಯಕ್ಕೆ ಮಕ್ಕಳ ಬಲಿ

ದೇಶ ಎಷ್ಟೇ ಮುಂದುವರೆದರೂ ಇಂದಿಗೂ ಮೌಢ್ಯ ಮತ್ತು ಅಂಧವಿಶ್ವಾಸಗಳಿವೆ. ಮಕ್ಕಳನ್ನು ಬಲಿ ನೀಡುವ ಅಮಾನುಷ ಕೃತ್ಯಗಳು ಗ್ರಾಮೀಣ ಭಾಗಗಳಲ್ಲಿ ಕಂಡುಬರುತ್ತಿವೆ. ಗ್ರಾಮ ದೇವತೆಗಳ ಕೋಪ ತಣಿಸಲು, ರೋಗಗಳನ್ನು ಗುಣಪಡಿಸಲು, ಅದೃಷ್ಟಕ್ಕಾಗಿ- ಹೀಗೆ ಹಲವು ನೆಪಗಳನ್ನು ಮುಂದಿಟ್ಟು ಮಕ್ಕಳ ಬಲಿ ನೀಡಲಾಗುತ್ತಿದೆ. ಎನ್‌ಸಿಆರ್‌ಬಿ ಮತ್ತು ಎನ್‌ಜಿಒ ವರದಿಗಳ ಪ್ರಕಾರ ದೇಶದಲ್ಲಿ ಪ್ರತಿ ವರ್ಷ 50-100 ನರಬಲಿ ಪ್ರಕರಣಗಳು ದಾಖಲಾಗುತ್ತಿವೆ. ಈ ಪೈಕಿ ಶೇ.20-30ರಷ್ಟು 1-12 ವರ್ಷದ ಮಕ್ಕಳಾಗಿದ್ದಾರೆ.

ಛತ್ತೀಸ್‌ಗಢ, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ಉತ್ತರ ಪ್ರದೇಶದ ಹಳ್ಳಿ ಭಾಗಗಳಲ್ಲಿ ಹೆಚ್ಚಾಗಿ ಈ ಮೌಢ್ಯ ಆಚರಣೆ ನಡೆಸಲಾಗುತ್ತಿದೆ. ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಕೇಂದ್ರ ಸರ್ಕಾರ ಇನ್ನೂ ರಾಷ್ಟ್ರೀಯ ಮಟ್ಟದಲ್ಲಿ ಅಂಧವಿಶ್ವಾಸ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ದೇಶದಲ್ಲಿ ಮಹಾರಾಷ್ಟ್ರ, ಕರ್ನಾಟಕ, ಒಡಿಶಾ, ಜಾರ್ಖಂಡ್, ಛತ್ತೀಸ್‌ಗಢ, ಬಿಹಾರ, ರಾಜಸ್ಥಾನ, ಗುಜರಾತ್ ಸೇರಿದಂತೆ ಎಂಟು ರಾಜ್ಯಗಳಲ್ಲಿ ವಿಶೇಷ ಕಾಯ್ದೆಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...