ನಳಂದದಲ್ಲಿ ಮಹಿಳೆ ಮೇಲೆ ದೌರ್ಜನ್ಯ, ಬೀದಿಗಳಲ್ಲಿ ಎಳೆದೊಯ್ದು ಅಮಾನುಷ ಕೃತ್ಯ; 8 ಮಂದಿ ಬಂಧನ

Date:

ಮಹಿಳೆಯೊಬ್ಬರು ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ, ಗುಂಪೊಂದು ಆಕೆಯನ್ನು ಬೀದಿಗಳನ್ನು ಎಳೆದೊಯ್ದು, ಅಸಭ್ಯವಾಗಿ ವರ್ತಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿರುವ ಅಮಾನುಷ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ 8 ಮಂದಿ ವಿಕೃತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮಾರ್ಚ್ 26 ರಂದು ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿರುವ ಪುರುಷರನ್ನು ಪೊಲೀಸರು ಗುರುತಿಸಿದ್ದಾರೆ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ, ಪ್ರಕರಣ ದಾಖಲಿಸಿದ್ದಾರೆ. ಬಂಧನ ಕಾರ್ಯಾಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತನ್ನ ಮೊಬೈಲ್ ಸಂಖ್ಯೆಯ ‘ಬ್ಲಾಕ್’ ತೆರವುಗೊಳಿಸಲು ಹತ್ತಿರದ ಮೊಬೈಲ್ ಅಂಗಡಿಗೆ ಹೋಗಿದ್ದಾಗಿ ಮಹಿಳೆ ತಿಳಿಸಿದ್ದಾರೆ. ಈ ವೇಳೆ ಅಂಗಡಿಯಲ್ಲಿದ್ದ ತಂತ್ರಜ್ಞನ ಜೊತೆ ಮಹಿಳೆಯನ್ನು ನೋಡಿದ ಗ್ರಾಮಸ್ಥರು, ಆಕೆ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ, ದಾಂಧಲೆ ನಡೆಸಿದ್ದಾರೆ.

“ನಾನು ಆ ಹುಡುಗನ ಜೊತೆ ತಪ್ಪು ಮಾಡಲು ಅಲ್ಲಿಗೆ ಹೋಗಿದ್ದೇನೆಂದು ಆರೋಪಿಸಿ, ನನ್ನನ್ನು ಅಂಗಡಿಯೊಳಗೆ ಕೂಡಿಹಾಕಿ, ಹೊರಗಿನಿಂದ ಅಂಗಡಿಗೆ ಬೀಗ ಹಾಕಿದರು. ನಂತರ, ಅಲ್ಲಿಗೆ ದೊಡ್ಡ ಗುಂಪು ಜಮಾಯಿಸಿತು. ಮೊಬೈಲ್ ತಂತ್ರಜ್ಞ ಕಿಟಕಿಯಿಂದ ಜಿಗಿದು ತಪ್ಪಿಸಿಕೊಳ್ಳಲು ಯತ್ನಿಸಿದರೂ, ಆತನನ್ನು ಹಿಡಿದು ಹಲ್ಲೆ ನಡೆಸಿದರು. ನನ್ನ ಮೇಲೆ ದೌರ್ಜನ್ಯ ಎಸಗಿದರು”
ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

“ನನ್ನ ಮೇಲೆ ದೌರ್ಜನ್ಯ ಎಸಗುತ್ತಾ ಗ್ರಾಮದಾದ್ಯಂತ ನನ್ನನ್ನು ಮೆರವಣಿಗೆ ಮಾಡಿದರು. ನಾನು ತಪ್ಪು ಮಾಡಿದ್ದೇನೆಂದು ಗ್ರಾಮಸ್ಥರು ಆರೊಪಿಸುತ್ತಿದ್ದಾರೆ. ಆದರೆ, ಅದಕ್ಕೆ ಪುರಾವೆ ಎಲ್ಲಿದೆ? ಒಂದು ವೇಳೆ ಏನಾದರೂ ತಪ್ಪಾಗಿದ್ದರೂ ಅದನ್ನು ನನ್ನ ಪತಿ ನಿರ್ಧರಿಸುತ್ತಾರೆ. ಸಮಾಜಕ್ಕೆ ಯಾವ ಹಕ್ಕಿದೆ?” ಎಂದು ಸಂತ್ರಸ್ತೆ ಪ್ರಶ್ನಿಸಿದ್ದಾರೆ.

ಘಟನೆಯ ಸಮಯದಲ್ಲಿ ಆಕೆಯ ಪತಿ ಗ್ರಾಮದಲ್ಲಿ ಇರಲಿಲ್ಲವೆಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ವಿಡಿಯೋ ತುಣುಕುಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಂಗಾಳ ಚುನಾವಣೆ | ಪಶ್ಚಿಮ ರಾಜ್ಯದಲ್ಲಿ ಕಾಂಗ್ರೆಸ್‌ನ 50 ವರ್ಷಗಳ ವನವಾಸ!

“ತನಿಖೆಯನ್ನು ಚುರುಕುಗೊಳಿಸಲಾಗಿದೆ. ಶೀಘ್ರವೇ ತನಿಖೆ ಪೂರ್ಣಗೊಳಿಸಿ ಒಂದು ವಾರದೊಳಗೆ ಚಾರ್ಜ್ ಶೀಟ್ ಸಲ್ಲಿಸಲು ನಿರ್ದೇಶಿಸಲಾಗಿದೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಕಾರಣ ಏನೇ ಇರಲಿ, ಮಹಿಳೆಯ ಮೇಲೆ ಬಹಿರಂಗವಾಗಿ ದೌರ್ಜನ್ಯ ನಡೆಸುವ ಹಕ್ಕು ಯಾರಿಗೂ ಇಲ್ಲ” ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯ ವಿಡಿಯೋವನ್ನು ಹಂಚಿಕೊಳ್ಳದಂತೆ ನಳಂದ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಇಂತಹ ವಿಡಿಯೋಗಳನ್ನು ಪ್ರಸಾರ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) 2000ರ ಉಲ್ಲಂಘನೆಯಾಗಿದ್ದು, ಮಹಿಳೆಯ ಖಾಸಗಿತನಕ್ಕೆ ಧಕ್ಕೆ ತರುತ್ತದೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಘಟನೆ ಸಂಬಂಧ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. :ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಮತ್ತು ಮಹಿಳೆಯರ ಮೇಲಿನ ಹೆಚ್ಚುತ್ತಿರುವ ಅಪರಾಧಗಳಿಗೆ ಸಾಕ್ಷಿ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...