ಬಾಲ್ಯದಿಂದಲೇ ನಿರಂತರ ಅತ್ಯಾಚಾರ: ಮದುವೆ ಬಳಿಕ ಧೈರ್ಯ ತುಂಬಿ ದೂರು ಕೊಡಿಸಿದ ಪತಿ

Date:

ಬಾಲ್ಯದಿಂದಲೇ ನಿರಂತರವಾಗಿ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆಗೆ ಮದುವೆಯ ಬಳಿಕ ಧೈರ್ಯ ತುಂಬಿದ ಪತಿ, ಅತ್ಯಾಚಾರ ಎಸಗಿದ ದುರುಳನ ವಿರುದ್ಧ ದೂರು ಕೊಡಿಸಿದ ಘಟನೆ ಉತ್ತರ ಪ್ರದೇಶದ ವಾರಾಣಸಿ ಜಿಲ್ಲೆಯ ಮಿರ್ಜಾ ಮುರಾದ್‌ನಲ್ಲಿ ನಡೆದಿದೆ.

- Advertisement -

ಮಹಿಳೆಯು 2019ರಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗ ಅತ್ಯಾಚಾರ ನಡೆದಿತ್ತು. ಆಕೆಯ ನೆರೆಮನೆಯ 60 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದ. ಬಳಿಕ ಬ್ಲ್ಯಾಕ್‌ಮೇಲ್ ಮಾಡಿ, ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನು ಓದಿದ್ದೀರಾ? ಮಗಳ ಮೇಲೆ 4 ವರ್ಷ ನಿರಂತರ ಅತ್ಯಾಚಾರ ಎಸಗಿದ ತಂದೆ; ದೂರು ದಾಖಲಾಗುತ್ತಿದ್ದಂತೆ ಪರಾರಿ

ಮಹಿಳೆ ನೀಡಿದ ದೂರಿನ ಪ್ರಕಾರ ಆಕೆ ಕೋಚಿಂಗ್ ಸೆಂಟರ್ ಬಳಿ ಕಾಯುತ್ತಿದ್ದಾಗ, ಆಕೆಯ ನೆರೆಯ ದಶರಥ್ ಪಟೇಲ್ ಎಂಬಾತ ಮನೆಗೆ ಕರೆದೊಯ್ಯುವುದಾಗಿ ಹೇಳಿ ಆತನ ನಡೆಸುತ್ತಿದ್ದ ರೋಗಶಾಸ್ತ್ರ ಕೇಂದ್ರಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. 2019ರಲ್ಲಿ ಈ ಘಟನೆ ನಡೆದಿದ್ದು, ದುರುಳ ಬ್ಲ್ಯಾಕ್‌ಮೇಲ್ ಮಾಡಿ 2025ರವರೆಗೆ ಹೀಗೆಯೇ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಮಹಿಳೆ 2026ರ ಏಪ್ರಿಲ್‌ನಲ್ಲಿ ವಿವಾಹವಾಗಿದ್ದು, ತನ್ನ ಬಾಲ್ಯದ ಈ ಕಹಿ ಘಟನೆಯನ್ನು, ತನಗಾದ ದೌರ್ಜನ್ಯವನ್ನು ಹೇಳಿದ್ದಾಳೆ. ಈ ವೇಳೆ ನ್ಯಾಯಕ್ಕಾಗಿ ಜತೆಯಾಗಿ ಹೋರಾಡೋಣ ಎಂದು ಧೈರ್ಯ ತುಂಬಿದ ಪತಿ, ಪತ್ನಿಯಿಂದ ದೂರು ಕೊಡಿಸಿದ್ದಾನೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಿರ್ಜಾಮುರಾದ್ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಗೋಪಾಲ್‌ಜಿ ಕುಶ್ವಾಹ, “ಆರೋಪಿ ದಶರಥ್ ಪಟೇಲ್ (60) ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಸದ್ಯ ಆರೋಪಿಯ ಬಂಧನಕ್ಕೆ ತಂಡ ಮುಂದಾಗಿದೆ. ಶೀಘ್ರವೇ ಬಂಧಿಸಲಾಗುವುದು ಎಂದು ಎಸ್ಎಚ್‌ಒ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...