ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಕೃತ್ಯವನ್ನು ವೀಕ್ಷಿಸುತ್ತಿದ್ದ ಸಂತ್ರಸ್ತೆಯ ವಿಕೃತ ಪತಿ

Date:

ತನ್ನ ಮೇಲೆ ತನ್ನ ಪತಿಯ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆ ಕೃತ್ಯವನ್ನು ತನ್ನ ಪತಿ ಸೌದಿಯಿಂದ ಆನ್‌ಲೈನ್‌ನಲ್ಲಿ ನೋಡುತ್ತಿದ್ದನು ಎಂದು ಉತ್ತರ ಪ್ರದೇಶದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

- Advertisement -

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಮಹಿಳೆಯು ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ತನ್ನ ಪತಿಯೇ ಪ್ರಮುಖ ಆರೋಪಿಯೆಂದು ಉಲ್ಲೇಖಿಸಿದ್ದಾರೆ. ತನ್ನ ಪತಿ ಸೌದಿ ಅರೆಬಿಯಾದಲ್ಲಿದ್ದು, ತನ್ನ ಮೇಲೆ ಅತ್ಯಾಚಾರ ಎಸಗಲು ಆತನ ಸ್ನೇಹಿತರಿಗೆ ಆತನೇ ಅವಕಾಶ ಮಾಡಿಕೊಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನನ್ನ ಮೇಲೆ ಪತಿಯ ಸ್ನೇಹಿತರು ಮೂರು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದಾರೆ. ನನ್ನ ಪತಿ ಹಣಕ್ಕಾಗಿ ನನ್ನ ಮೇಲೆ ಅತ್ಯಾಚಾರ ಎಸಗಲು ತನ್ನ ಸ್ನೇಹಿತರಿಗೆ ಅವಕಾಶ ನೀಡುತ್ತಿದ್ಧಾನೆ. ಅಲ್ಲದೆ, ನನ್ನ ಮೇಲಾಗುವ ಅತ್ಯಾಚಾರ ಕೃತ್ಯವನ್ನು ಸೌದಿ ಅರೇಬಿಯಾದಿಂದ ಆನ್‌ಲೈನ್‌ನಲ್ಲಿ ವೀಕ್ಷಿಸಿದ್ದಾನೆ” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಮಣಿಪುರ ಹೊತ್ತಿ ಉರಿದಿದ್ದಕ್ಕೆ ಪ್ರಧಾನಿ ಮೋದಿ ಏಕೆ ಕ್ಷಮೆ ಕೇಳಬೇಕು?

ಸಂತ್ರಸ್ತೆಯು 2010ರಲ್ಲಿ ಬುಲಂದ್‌ಶಹರ್‌ನ ಗುಲಾತಿ ಮೂಲದ ವ್ಯಕ್ತಿಯನ್ನು ವಿವಾಹವಾಗಿದ್ದರು. ಆರಂಭದಲ್ಲಿ ದಾಂಪತ್ಯ ಜೀವನ ಚೆನ್ನಾಗಿತ್ತು. ದಂಪತಿಗಳು ನಾಲ್ಕು ಮಕ್ಕಳನ್ನು ಮಾಡಿಕೊಂಡಿದ್ದರು. ಮಹಿಳೆಯ ಪತಿ ಸೌದಿ ಅರೇಬಿಯಾದಲ್ಲಿ ಆಟೋಮೊಬೈಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಆದರೆ, ಎರಡು ವರ್ಷಗಳ ಹಿಂದೆ ತನ್ನ ಪತಿ ಇಬ್ಬರು ಸ್ನೇಹಿತರೊಂದಿಗೆ ಮನೆಗೆ ಬಂದಿದ್ದನು. ಅವರಿಗೆ ತನ್ನ ಮೇಲೆ ಅತ್ಯಾಚಾರ ಎಸಗಲು ಆಕೆಯ ಪತಿಯೇ ಅವಕಾಶ ನೀಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತನ್ನ ಪತಿಯ ಆ ಇಬ್ಬರೂ ಪುರುಷರು ತಾನು ವಾಸವಾಗಿರುವ ಪ್ರದೇಶದಲ್ಲಿಯೇ ನೆಲೆಸಿದ್ದು, ಆಗ್ಗಾಗ್ಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಕೃತ್ಯದಲ್ಲಿ ತನ್ನ ಪತಿಯ ಕುಮ್ಮಕ್ಕು ಇದೆ ಎಂದು ಸಂತ್ರಸ್ತೆ ವಿವರಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...