ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಮೂವರು ಕಾಮುಕರ ಬಂಧನ

Date:

ಚಲಿಸುತ್ತಿದ್ದ ಕಾರಿನಲ್ಲೇ ಯುವತಿಯೊಬ್ಬರ ಮೇಲೆ ಕಾಮುಕರ ಗುಂಪೊಂದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಹಾರಾಷ್ಟ್ರ ಪುಣೆಯಲ್ಲಿ ನಡೆದಿದೆ. ಪುಣೆಯ ಪ್ರತಿಷ್ಠಿತ ಪ್ರದೇಶವಾದ ಕೋರೆಗಾಂವ್ ಪಾರ್ಕ್‌ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರಕರಣದಲ್ಲಿ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಪ್ರಕರಣದ ಕುರಿತು ಪೊಲೀಸ್ ಕಮಿಷನರ್ ಮನೋಜ್ ಪಾಟೀಲ್ ಮಾಹಿತಿ ನೀಡಿದ್ದು, “ಘಟನೆ ನಡೆದ ದಿನದಂದು ಸಂತ್ರಸ್ತ ಯುವತಿ ತನ್ನ ಸ್ನೇಹಿತರೊಂದಿಗೆ ಕೋರೆಗಾಂವ್ ಪಾರ್ಕ್‌ನ ಹೋಟೆಲೊಂದಕ್ಕೆ ಊಟಕ್ಕೆ ತೆರಳಿದ್ದರು. ಊಟ ಮುಗಿದ ಬಳಿಕ ಸ್ನೇಹಿತರೆಲ್ಲರೂ ಅಲ್ಲಿಂದ ನಿರ್ಗಮಿಸಿದ್ದರು. ಆದರೆ, ಸಂತ್ರಸ್ತೆ ಕೆಲ ಸಮಯದವರೆಗೆ ಹೋಟೆಲ್‌ನ ಟೇಬಲ್ ಬಳಿ ಒಬ್ಬರೇ ಕುಳಿತಿದ್ದರು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಆಕೆ ಒಬ್ಬರೇ ಕುಳಿತಿದ್ದ ಸಂದರ್ಭವನ್ನು ಬಳಸಿಕೊಂಡ ಪಕ್ಕದ ಟೇಬಲ್‌ನಲ್ಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಯುವತಿಯ ಬಳಿ ಬಂದು ಅತಿಯಾದ ಆಪ್ತತೆ ಪ್ರದರ್ಶಿಸಿ, ಮಾತನಾಡಲು ಆರಂಭಿಸಿದ್ದಾರೆ. ಮಾತುಕತೆಯ ನಡುವೆಯೇ, ಅವರೆಲ್ಲರೂ ಸೇರಿ ಮತ್ತೊಂದು ಹೋಟೆಲ್‌ಗೆ ಹೋಗೋಣ ಎಂದು ಯುವತಿಯನ್ನು ಒಪ್ಪಿಸಿ, ತಮ್ಮ ಕಾರಿನಲ್ಲಿ ಕರೆದೊಯ್ದಿದ್ದಾರೆ” ಎಂದು ವಿವರಿಸಿದ್ದಾರೆ.

“ಕಾರು ಚಲಿಸುತ್ತಿದ್ದಾಗ ಪಕ್ಕದಲ್ಲಿದ್ದ ಇಬ್ಬರು ಕಾಮುಕರು ಯುವತಿಯ ಒಪ್ಪಿಗೆಯಿಲ್ಲದೆ ಆಕೆಗೆ ಲೈಂಗಿಕ ಕಿರುಕುಳ ನೀಡಿ, ದೌರ್ಜನ್ಯ ಎಸಗಿದ್ದಾರೆ. ಘಟನೆಯಿಂದ ಆಘಾತಕ್ಕೊಳಗಾದ ಯುವತಿ ತಕ್ಷಣವೇ ಕೋರೆಗಾಂವ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಲಿಖಿತ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು, ಕಾರ್ಯಾಚರಣೆ ನಡೆಸಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಮನೋಜ್ ಪಾಟೀಲ್ ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬೆಲೆ ಏರಿಕೆ | ಮೋದಿ ಪಡೆಯ ಸರಳತೆಯ ಸೋಗಲಾಡಿತನವೂ, ವಿಪಕ್ಷಗಳ ದೌರ್ಬಲ್ಯವೂ

ದೇಶದಾದ್ಯಂತ ಇಂತಹ ಮಹಿಳಾ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದೇ ಮೇ 14ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತ್ಯಂತ ಕ್ರೂರ ಘಟನೆಯೊಂದು ನಡೆದಿತ್ತು. ರಾತ್ರಿ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದ ಖಾಸಗಿ ಬಸ್‌ನ ಚಾಲಕ ಮತ್ತು ನಿರ್ವಾಹಕ, ಚಲಿಸುತ್ತಿದ್ದ ಬಸ್‌ನಲ್ಲೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಘಟನೆ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಮತ್ತೊಂದು ಪ್ರಕರಣದಲ್ಲಿ, ರಾಜಸ್ಥಾನದ ಜೋಧಪುರದಲ್ಲಿ ವ್ಯವಸ್ಥೆಯ ಬೇಜವಾಬ್ದಾರಿತನಕ್ಕೆ ಇಬ್ಬರು ಸಹೋದರಿಯರು ಬಲಿಯಾಗಿದ್ದಾರೆ. ತಮ್ಮ ಮೇಲಾದ ಸಾಮೂಹಿಕ ಅತ್ಯಾಚಾರದ ವಿರುದ್ಧ ಇಬ್ಬರು ಸಹೋದರಿಯರು ಪೊಲೀಸ್‌ ದೂರು ದಾಖಲಿಸಲು ಮತ್ತು ನ್ಯಾಯಕ್ಕಾಗಿ ಹಲವು ಬಾರಿ ಅಲೆದಾಡಿದ್ದರು. ಆದರೆ, ಪೊಲೀಸರು ಇವರ ದೂರುಗಳನ್ನು ಸತತವಾಗಿ ನಿರ್ಲಕ್ಷಿಸಿದ್ದರು. ಇದರಿಂದ ಬೇಸತ್ತ ಸಹೋದರಿಯರಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ತದನಂತರ ಎಚ್ಚೆತ್ತುಕೊಂಡ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...