ದೆಹಲಿಯ ಸಾಕೇತ್‌ ಕೋರ್ಟ್‌ನಲ್ಲಿ ಮಹಿಳೆ, ವಕೀಲರ ಮೇಲೆ ಗುಂಡಿನ ದಾಳಿ

Date:

ಅಮಾನತ್ತುಗೊಂಡಿದ್ದ ವಕೀಲನಿಂದ ಗುಂಡಿನ ದಾಳಿ

- Advertisement -

ಹಳೆಯ ವೈಷಮ್ಯದ ಹಿನ್ನೆಲೆ ದಾಳಿ ನಡೆಸಿರುವ ಶಂಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ದೆಹಲಿಯ ಸಾಕೇತ್‌ ಕೋರ್ಟ್‌ನಲ್ಲಿ ಮಹಿಳೆ ಮತ್ತು ಪ್ರಕರಣವೊಂದರಲ್ಲಿ ಆಕೆಯ ಪರ ವಾದ ಮಂಡಿಸುತ್ತಿದ್ದ ವಕೀಲರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ನ್ಯಾಯಾಲಯದ ಒಳಾಂಗಣದಲ್ಲಿಯೇ ಈ ಘಟನೆ ನಡೆದಿದೆ.

ಗುಂಡಿನ ದಾಳಿಗೆ ಒಳಗಾದ ಮಹಿಳೆಯನ್ನು ದೆಹಲಿಯ ನಿವಾಸಿ ರಾಧಾ ಎಂದು ಗುರುತಿಸಲಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ರಾಧಾ ಸಾಕೇತ್‌ ಕೋರ್ಟ್‌ಗೆ ಬಂದಿದ್ದಾರೆ. ರಾಧಾ ಅವರೊಂದಿಗೆ ಹಳೆಯ ವೈಷಮ್ಯ ಹೊಂದಿದ್ದ, ಇತ್ತೀಚೆಗೆ ಸೇವೆಯಿಂದ ಅಮಾನತ್ತುಗೊಂಡಿದ್ದ ವಕೀಲನೊಬ್ಬ ಇದೇ ವೇಳೆ ಕೋರ್ಟ್‌ ಆವರಣ ಪ್ರವೇಶಿಸಿ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಆರೋಪಿ ನಾಲ್ಕು ಸುತ್ತು ಗುಂಡು ಹಾರಿಸಿದ್ದು, ರಾಧಾ ಅವರ ಹೊಟ್ಟೆಯ ಭಾಗಕ್ಕೆ ಒಂದು ಗುಂಡು ತಗುಲಿದೆ. ಅವರ ಪರ ವಾದ ಮಂಡಿಸುತ್ತಿದ್ದ ವಕೀಲರ ಕುತ್ತಿಗೆ ಭಾಗಕ್ಕೆ ಮತ್ತೊಂದು ಗುಂಡು ತಾಗಿದೆ. ದಾಳಿಯ ಬಳಿಕ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸ್ಥಳದಲ್ಲಿದ್ದವರು ಇಬ್ಬರೂ ಗಾಯಾಳುಗಳನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ಎಂದು ವರದಿಯಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ದೆಹಲಿಯ ದಕ್ಷಿಣ ಭಾಗದ ಪೊಲೀಸ್‌ ಉಪ ಆಯುಕ್ತ ಚಂದನ್‌ ಚೌಧರಿ ತಿಳಿಸಿದ್ದಾರೆ.

ಗುಂಡೇಟು ತಿಂದ ರಾಧಾ ಅವರನ್ನು ಕೋರ್ಟ್‌ನಿಂದ ಆಸ್ಪತ್ರೆಗೆ ಕೊಂಡೊಯ್ಯುವ ದೃಶ್ಯ ಸ್ಥಳದಲ್ಲಿದ್ದ ಹಲವರ ಮೊಬೈಲ್‌ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂದರ್ಭದ ವಿಡಿಯೋಗಳು ವೈರಲ್‌ ಆಗಿದ್ದು, “ದೆಹಲಿ ಜನಸಾಮಾನ್ಯರು ಬದುಕುಲು ಸುರಕ್ಷಿತ ಸ್ಥಳವೇ?” ಎಂದು ನೆಟ್ಟಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಪಹರಣ, ಹಲ್ಲೆ ಆರೋಪ : ಹನಿಸಿಂಗ್‌ ವಿರುದ್ಧ ದೂರು ದಾಖಲು

ಕೆಲ ದಿನಗಳ ಹಿಂದೆ ಇದೇ ದೆಹಲಿಯ ʼರೋಹಿಣಿ ಕೋರ್ಟ್‌ʼನಲ್ಲಿ ನಡೆದಿದ್ದ ಗುಂಡಿನ ದಾಳಿ ಮತ್ತು ಗ್ಯಾಂಗ್‌ಸ್ಟರ್‌ ಹತ್ಯೆಯನ್ನು ಉಲ್ಲೇಖಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕೇಂದ್ರ ಮತ್ತು ದೆಹಲಿ ಸರ್ಕಾರಗಳು ವಿಫಲವಾಗಿವೆ ಎಂದು ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಕ್ಷಾಂತರ ಪರ್ವ: ಮೋದಿ ಸರ್ಕಾರದ ಅಧಿಕಾರದ ಆಸೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ

ಭಾರತದಲ್ಲಿ 2022 ಮತ್ತು 2026ರ ನಡುವಿನ ಅವಧಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಬಹುದೊಡ್ಡ...

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ...

ಅಭಿವೃದ್ಧಿ ಹೆಸರಲ್ಲಿ 23 ಲಕ್ಷ ಮರಗಳಿಗೆ ಕುತ್ತು; ಅರುಣಾಚಲದ ಜಲವಿದ್ಯುತ್‌ ಯೋಜನೆ ಅನುಮತಿ ಕೋರಿದ NHPC

ಅರುಣಾಚಲ ಪ್ರದೇಶದಲ್ಲಿ 1,720 ಮೆಗಾವ್ಯಾಟ್ ಸಾಮರ್ಥ್ಯದ ಕಮಲಾ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು...

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...