ಮಹಿಳಾ ಶಿಕ್ಷಕರನ್ನು ಹುಡುಗರ ಶಾಲೆಗೆ ನೇಮಿಸಲು ನಿರಾಕರಿಸುವಂತಿಲ್ಲ: ಮದ್ರಾಸ್ ಹೈಕೋರ್ಟ್

Date:

“ಮೂಲಸೌಕರ್ಯಗಳ ಕೊರತೆಯಿದೆ ಎಂಬ ಕಾರಣ ನೀಡಿ ಮಹಿಳಾ ಶಿಕ್ಷಕರೊಬ್ಬರನ್ನು (ಶಿಕ್ಷಕಿ) ಹುಡುಗರ ಶಾಲೆಗೆ ನೇಮಕ ಮಾಡುವುದನ್ನು ತಡೆಯಲು ಸಾಧ್ಯವಿಲ್ಲ” ಎಂದು ಮದ್ರಾಸ್ ಹೈಕೋರ್ಟ್ ಸ್ಪಷ್ಟಪಡಿಸಿದೆ. ತಮಿಳುನಾಡು ಖಾಸಗಿ ಶಾಲೆಗಳ ಕಾಯ್ದೆ ಅಥವಾ ನಿಯಮಗಳಲ್ಲಿ ಇಂತಹ ಯಾವುದೇ ನಿಷೇಧವಿಲ್ಲ ಎಂದು ನ್ಯಾಯಾಲಯ ಹೇಳಿದೆ.

- Advertisement -

ವಿರುದುನಗರ್ ಜಿಲ್ಲೆಯ ಶ್ರೀ ರೇಣುಗಾ ಹಿಂದೂ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕಿಯಾಗಿದ್ದ ಅರ್ಜಿದಾರರನ್ನು 2024-2025ರ ಶೈಕ್ಷಣಿಕ ವರ್ಷದಲ್ಲಿ ‘ಹೆಚ್ಚುವರಿ ಶಿಕ್ಷಕಿ’ ಎಂದು ಗುರುತಿಸಲಾಗಿತ್ತು. 2025ರ ಮೇ 28ರಂದು ಅವರನ್ನು ಸರ್ಕಾರಿ ಅನುದಾನಿತ ಖಾಸಗಿ ಶಾಲೆಯಾದ ಗುರುಜ್ಞಾನ ಸಂಪಂದರ್ ಹಿಂದೂ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನೂ ಓದಿ: ಸ್ವಂತ ಮಗಳಿಗೆ ಮದುವೆ- ಹೆರವರ ಹೆಣ್ಣುಮಕ್ಕಳ ಮೇಲೆ ಸನ್ಯಾಸ ಹೇರಿಕೆ ಯಾಕೆ?: ಜಗ್ಗಿಗೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

ಆದರೆ ಅದು ಕೇವಲ ಹುಡುಗರಿಗಿರುವ ಶಾಲೆಯಾಗಿದ್ದರಿಂದ ಮತ್ತು ಅಲ್ಲಿ ಯಾವುದೇ ಮಹಿಳಾ ಸಿಬ್ಬಂದಿ ಇಲ್ಲದ ಕಾರಣ, ಮಹಿಳೆಯರಿಗೆ ಬೇಕಾದ ಸೂಕ್ತ ಮೂಲಸೌಕರ್ಯಗಳಿಲ್ಲ ಎಂದು ಹೇಳಿ ಆ ಶಾಲೆಯು ಶಿಕ್ಷಕಿಯನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿತ್ತು.

ಶಾಲೆಯ ಈ ಆಕ್ಷೇಪಣೆಯನ್ನು ಆಧಾರವಾಗಿಟ್ಟುಕೊಂಡು ಶಿಕ್ಷಣ ಇಲಾಖೆಯ ಅಧಿಕಾರಿಗಳು ವರ್ಗಾವಣೆ ಆದೇಶವನ್ನು ಜಾರಿಗೊಳಿಸದೆ, ಶಿಕ್ಷಕಿಯನ್ನು ಬೇರೆಡೆಗೆ ವರ್ಗಾಯಿಸಲು ಮುಂದಾಗಿದ್ದರು. ಇದನ್ನು ಪ್ರಶ್ನಿಸಿ ಶಿಕ್ಷಕಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ. ಪುಗಲೇಂದಿ ಅವರ ಪೀಠವು, ಮಹಿಳಾ ಶಿಕ್ಷಕರನ್ನು ಹುಡುಗರ ಶಾಲೆಗೆ ನೇಮಿಸಲು ನಿರಾಕರಿಸುವಂತಿಲ್ಲ ಎಂದು ಹೇಳಿದ್ದಾರೆ. ಹಾಗೆಯೇ ಕಾನೂನಿನಲ್ಲಿ ನಿಷೇಧವಿಲ್ಲದಿರುವಾಗ ಶಾಲೆಯ ಆಕ್ಷೇಪಣೆಗೆ ಯಾವುದೇ ಕಾನೂನುಬದ್ಧ ಆಧಾರವಿಲ್ಲ ಎಂದಿದ್ದಾರೆ.

ಶಾಲೆಯ ನಿರಾಕರಣೆಯ ನಂತರ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳದ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡವಳಿಕೆಯನ್ನೂ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಈ ವರ್ಗಾವಣೆ ಪ್ರಕ್ರಿಯೆಯನ್ನು ಮರುಪರಿಶೀಲಿಸುವಂತೆ ಮತ್ತು ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳುವಂತೆ ವಿರುದುನಗರ್ ಜಿಲ್ಲಾ ಮುಖ್ಯ ಶಿಕ್ಷಣಾಧಿಕಾರಿ ಹಾಗೂ ಶಾಲೆಗೆ ಹೈಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಇನ್ನು “ನಾನು ಮಹಿಳೆ ಎಂಬ ಕಾರಣಕ್ಕೆ ಶಾಲೆಯಲ್ಲಿ ಯಾವುದೇ ವಿಶೇಷ ಸವಲತ್ತು ಅಥವಾ ಹೆಚ್ಚುವರಿ ಸೌಲಭ್ಯಗಳನ್ನು ಕೇಳುವುದಿಲ್ಲ” ಎಂದು ಶಿಕ್ಷಕಿ ಈಗಾಗಲೇ ನ್ಯಾಯಾಲಯಕ್ಕೆ ಮುಚ್ಚಳಿಕೆ ನೀಡಿದ್ದಾರೆ.

“ಶಿಕ್ಷಕರ ಸಂಬಳಕ್ಕಾಗಿ ಸರ್ಕಾರ ಪ್ರತಿವರ್ಷ ನೂರಾರು ಕೋಟಿ ರೂಪಾಯಿಗಳ ಸಾರ್ವಜನಿಕ ಹಣವನ್ನು ಖರ್ಚು ಮಾಡುತ್ತದೆ. ಹೀಗಿರುವಾಗ ಶಿಕ್ಷಕರ ಸೇವೆ ಎಲ್ಲಿ ಅಗತ್ಯವಿದೆಯೋ ಅಲ್ಲಿ ಅವರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಸರ್ಕಾರದ ಕರ್ತವ್ಯ” ಎಂದು ನ್ಯಾಯಾಲಯ ಒತ್ತಿ ಹೇಳಿದೆ. ಒಂದು ಶಾಲೆಯಲ್ಲಿ ಹೆಚ್ಚುವರಿ ಶಿಕ್ಷಕರು ಉಳಿದುಕೊಂಡು, ಮತ್ತೊಂದು ಶಾಲೆಯಲ್ಲಿ ಹುದ್ದೆ ಖಾಲಿ ಇರುವುದು ವ್ಯವಸ್ಥೆಯ ಉದ್ದೇಶವನ್ನೇ ಹಾಳು ಮಾಡುತ್ತದೆ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬೀದರ್‌ | ಜಿಲ್ಲಾ ಪಂಚಾಯತಿ 34, ತಾಲೂಕು ಪಂಚಾಯತಿ 123 ಸ್ಥಾನಗಳಿಗೆ ಮೀಸಲಾತಿ ಪ್ರಕಟ

ರಾಜ್ಯ ಸರ್ಕಾರವು ಬೀದರ್ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು...