ಆಂಧ್ರ ಸಿಎಂ ನಾಯ್ಡು ಕ್ಷೇತ್ರದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಚಿತ್ರಹಿಂಸೆ: ವ್ಯಾಪಕ ಆಕ್ರೋಶ

Date:

ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ, ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿರುವ ಘಟನೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಕ್ಷೇತ್ರ ಕುಪ್ಪಂನಲ್ಲಿ ನಡೆದಿದೆ.

- Advertisement -

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಮಂಡಲದ ನಾರಾಯಣಪುರ ಗ್ರಾಮದಲ್ಲಿ ಘಟನೆ ನಡೆದಿದೆ. ದೌರ್ಜನ್ಯ ಎಸಗಿರುವ ಆರೋಪಿಯನ್ನು ನಾಯ್ಡು ಅವರ ಪಕ್ಷ ‘ತೆಲುಗು ದೇಶಂ ಪಕ್ಷ’ದ ಕಾರ್ಯಕರ್ತ ಮಣಿಕಣ್ಣಪ್ಪ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೂರು ವರ್ಷಗಳ ಹಿಂದೆ ಮಣಿಕಣ್ಣಪ್ಪ ಬಳಿ ಸಂತ್ರಸ್ತ ಮಹಿಳೆಯ ಕುಟುಂಬವು 80,000 ರೂ. ಸಾಲ ಪಡೆದಿತ್ತು. ಆ ಸಾಲದ ಹಣವನನ್ಉ ಮರುಪಾವತಿ ಮಾಡುವಲ್ಲಿ ವಿಳಂಬವಾದ ಕಾರಣಕ್ಕೆ, ಮಹಿಳೆಯಯನ್ನು ಮರಕ್ಕೆ ಕಟ್ಟಿ ಚಿತ್ರಹಿಂಸೆ ನೀಡಿದ್ದಾರೆ. ಅವಮಾನಿಸಿದ್ದಾರೆ ಎಂದು ವರದಿಯಾಗಿದೆ.

ಸಾಲ ತೀರಿಸಲಾಗದೆ ಸಂತ್ರಸ್ತೆಯ ಪತಿ ತಿಮ್ಮರಾಯಪ್ಪ ಇತ್ತೀಚೆಗೆ ಗ್ರಾಮ ತೊರೆದಿದ್ದರು.ಹೀಗಾಗಿ, ಸಂತ್ರಸ್ತೆ ಶಿರೇಶ ಅವರು ಶಾಂತಿಪುರಂನಲ್ಲಿದ್ದ ತನ್ನ ತಾಯಿಯ ಮನೆಯಲ್ಲಿ ಉಳಿದುಕೊಂಡಿದ್ದರು. ಸೋಮವಾರ, ನಾರಾಯಣಪುರ ಶಾಲೆಯಲ್ಲಿ ತನ್ನ ಮಗ ವರ್ಗಾವಣೆ ಪತ್ರವನ್ನು ಪಡೆಯಲು ಗ್ರಾಮಕ್ಕೆ ಬಂದಾಗ, ಆಕೆಯನ್ನು ಸಾಲದಾತ ಮಣಿಕಣ್ಣಪ್ಪ ಮತ್ತು ಕುಟುಂಬಸ್ಥರು ಅಡ್ಡಗಟ್ಟಿದ್ದಾರೆ. ಅಮಾನವೀಯವಾಗಿ ನಿಂದಿಸಿ, ಮರಕ್ಕೆ ಕಟ್ಟಿ ದೌರ್ಜನ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಘಟನೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕುಪ್ಪಂ ವಿಧಾನಸಭಾ ಕ್ಷೇತ್ರವನ್ನು ಸ್ವತಃ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೇ ಪ್ರತಿನಿಧಿಸುತ್ತಿದ್ದು, ಘಟನೆಯು ನಾಯ್ಡು ಅವರನ್ನು ಮುಜುಗರಕ್ಕೆ ಸಿಲುಕಿಸಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ನಾಯ್ಡು, ಸಂತ್ರಸ್ತೆಯ ಮೇಲೆ ಅಮಾನವೀಯ ದೌರ್ಜನ್ಯ ಎಸಗಿದ ಮಣಿಕಣ್ಣಪ್ಪ ಮತ್ತು ಅವರ ಕುಟುಂಬದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

“ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 323, 324, 506 ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...