‘ಮಹಿಳೆಯರು ಭಾರತದ ಅತಿದೊಡ್ಡ ಆಸ್ತಿ, ಪುರುಷರೊಂದಿಗಿನ ಸಂಬಂಧದಿಂದಷ್ಟೇ ಗುರುತಿಸಿಕೊಳ್ಳಬಾರದು’: ರಾಹುಲ್ ಗಾಂಧಿ

Date:

“ಮಹಿಳೆಯರು ಭಾರತದ ಅತಿದೊಡ್ಡ ಶಕ್ತಿ ಮತ್ತು ಆಸ್ತಿ. ಅವರು ಕೇವಲ ಪುರುಷರೊಂದಿಗಿನ ಸಂಬಂಧಗಳ ಮೂಲಕ ಮಾತ್ರ ಗುರುತಿಸಿಕೊಳ್ಳಬಾರದು. ಬದಲಾಗಿ, ತಮಗಾಗಿ ತಾವು ನಿಲ್ಲುವ ಮೂಲಕ ತಮ್ಮದೇ ಆದ ಸ್ವತಂತ್ರ ಗುರುತನ್ನು ಹೊಂದಿರಬೇಕು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

- Advertisement -

​ಪುಣೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಯುವಜನ ಸಂಪರ್ಕ ಕಾರ್ಯಕ್ರಮ ‘ಛಾತ್ರೋಂ ಕಿ ಗೂಂಜ್’ ದಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿಗಳ ಆಚೆಗೂ ವೃತ್ತಿಪರರಾಗಿ, ಕ್ರೀಡಾಪಟುಗಳಾಗಿ ಹಾಗೂ ತಮ್ಮದೇ ಆದ ಕನಸುಗಳನ್ನು ಬೆನ್ನತ್ತುವ ಮೂಲಕ ಸ್ವತಂತ್ರರಾಗಿರಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಮಾಜದಲ್ಲಿ ಮಹಿಳೆಯರನ್ನು ನೋಡುವ ದೃಷ್ಟಿಕೋನದ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಹುಲ್ ಗಾಂಧಿ, “ಹೆಚ್ಚಿನ ಬಾರಿ ಮಹಿಳೆಯರನ್ನು ಕೇವಲ ಮಗಳು, ಪತ್ನಿ ಅಥವಾ ತಾಯಿ ಎಂಬ ಮೂರು ಪಾತ್ರಗಳಿಗೆ ಸೀಮಿತಗೊಳಿಸಲಾಗುತ್ತದೆ. ಈ ಪಾತ್ರಗಳಲ್ಲಿ ಯಾವುದೇ ತಪ್ಪಿಲ್ಲ. ಆದರೆ ಇದೊಂದೇ ನಿಮ್ಮ ಅಂತಿಮ ಗುರುತಾಗಬಾರದು ಎಂದು ಹೇಳಿದರು.

​ಮಹಿಳೆಯರ ಸ್ವಾತಂತ್ರ್ಯದ ಬಗ್ಗೆ ಮಾತನಾಡುವಾಗ ಮನುಸ್ಮೃತಿಯನ್ನು ಉಲ್ಲೇಖಿಸಿದ ಅವರು, “ಮಹಿಳೆ ಎಂದಿಗೂ ಸ್ವತಂತ್ರಳಾಗಿರಬಾರದು ಎಂದು ಅದರಲ್ಲಿ ಹೇಳಲಾಗಿದೆ. ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಮಹಿಳೆಯರು ತಮ್ಮನ್ನು ತಾವು ನಂಬಬೇಕು. ನೀವು ಯಾರಿಗೂ ಸೇರಿದವರಲ್ಲ, ನಿಮ್ಮ ಮೇಲೆ ಕೇವಲ ನಿಮಗೆ ಮಾತ್ರ ಹಕ್ಕಿದೆ” ಎಂದು ಕಿವಿಮಾತು ಹೇಳಿದರು. ತಂದೆ, ಸಹೋದರ, ಪತಿ ಅಥವಾ ಮಕ್ಕಳೊಂದಿಗಿನ ಸಂಬಂಧಗಳು ಇರಲಿ, ಆದರೆ ಆ ಸಂಬಂಧಗಳು ಮಹಿಳೆಯೊಬ್ಬಳ ಸ್ವಾತಂತ್ರ್ಯ ಅಥವಾ ಆಕೆಯ ಅಸ್ತಿತ್ವವನ್ನು ಎಂದಿಗೂ ನಿರ್ಧರಿಸಬಾರದು ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...