ಶಬರಿಮಲೆ ಪ್ರವೇಶ | ಮಾಸಿಕ ಮೂರು ದಿನ ಮಹಿಳೆಯರನ್ನು ಅಸ್ಪೃಶ್ಯರಂತೆ ಕಾಣುವುದು ಸಲ್ಲದು: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

Date:

ಮುಟ್ಟಾದ ಮಹಿಳೆಯರನ್ನು ಅಶುದ್ಧರು ಎಂದು ಪರಿಗಣಿಸುವುದರ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ ವಿ ನಾಗರತ್ನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಮಹಿಳೆಯರನ್ನು ಒಂದು ತಿಂಗಳಲ್ಲಿ ಮೂರು ದಿನಗಳವರೆಗೆ ಅಸ್ಪೃಶ್ಯರು ಎಂದು ಪರಿಗಣಿಸುವುದು ಮತ್ತು ನಾಲ್ಕನೇ ದಿನದಿಂದ ಸ್ಪೃಶ್ಯರಂತೆ ಕಾಣುವುದು ಸಲ್ಲದು” ಎಂದು ಹೇಳಿದ್ದಾರೆ.

- Advertisement -

ಕೇರಳದಲ್ಲಿರುವ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರುವಂತೆ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಒಂದೆಡೆ ಲೋಕಸಭೆ, ರಾಜ್ಯಸಭೆಯಲ್ಲಿ ಶೇ. 33 ಮೀಸಲಾತಿ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಕೇಂದ್ರ ಸರ್ಕಾರವು ಮಹಿಳಾ ವಿರೋಧಿ ನಿಲುವನ್ನು ತಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಇದನ್ನು ಓದಿದ್ದೀರಾ? ಶಬರಿಮಲೆಗೆ ಮಹಿಳೆಯರ ಪ್ರವೇಶ; ನಿರ್ಬಂಧ ಹೇರುವಂತೆ ಸುಪ್ರೀಂಗೆ ಕೇಂದ್ರ ಸರ್ಕಾರ ಮನವಿ

ಕೇಂದ್ರದ ಈ ಅರ್ಜಿ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ಮಾಡುವುದಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್ 7ರಂದು ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ನಡೆಸಿದೆ. ಮಹಿಳೆಯರಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಈ ಒಂಬತ್ತು ನ್ಯಾಯಮೂರ್ತಿಗಳ ಪೀಠದಲ್ಲಿರುವ ಏಕೈಕ ಮಹಿಳಾ ನ್ಯಾಯಮೂರ್ತಿ ಬಿ ವಿ ನಾಗರತ್ನ. ಈ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್, ಅಹ್ಸಾನುದ್ದೀನ್ ಅಮಾನುಲ್ಲಾ, ಅರವಿಂದ್ ಕುಮಾರ್, ಆಗಸ್ಟೀನ್ ಜಾರ್ಜ್ ಮಸಿಹ್, ಪ್ರಸನ್ನ ಬಿ ವರಾಳೆ, ಆರ್. ಮಹಾದೇವನ್ ಮತ್ತು ಜೋಯ್ಮಲ್ಯ ಬಾಗ್ಚಿ ಕೂಡ ಇದ್ದಾರೆ.

ಈ ಪೀಠವು ಶಬರಿಮಲೆ ಮಾತ್ರವಲ್ಲದೆ, ಮಸೀದಿಗಳಿಗೆ ಮಹಿಳೆಯರ ಪ್ರವೇಶ ಮತ್ತು ಪಾರ್ಸಿ ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದ ಧಾರ್ಮಿಕ ಸ್ವಾತಂತ್ರ್ಯದ ವಿಷಯಗಳ ಬಗ್ಗೆಯೂ ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆ ವೇಳೆ ಮುಂದಿನ ವರ್ಷ ಭಾರತದ ಮೊದಲ ಮುಖ್ಯ ನ್ಯಾಯಮೂರ್ತಿಯಾಗಲಿರುವ ಜಸ್ಟೀಸ್ ಬಿ ವಿ ನಾಗರತ್ನ ಅವರು ಈ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

“ನಾನು ಮಹಿಳೆಯಾಗಿ ಹೇಳುವುದಾದರೆ, ಪ್ರತಿ ತಿಂಗಳು ಮೂರು ದಿನಗಳ ಅಸ್ಪೃಶ್ಯರಾಗಿರಲು ಇರಲು ಸಾಧ್ಯವಿಲ್ಲ. ನಾಲ್ಕನೇ ದಿನ, ಅಸ್ಪೃಶ್ಯತೆ ಇಲ್ಲ” ಎಂದು ಆಶ್ಚರ್ಯ ವ್ಯಕ್ತಪಡಿಸಿದರು. ಮುಟ್ಟಿನ ಆಧಾರದ ಮೇಲೆ ಮಹಿಳೆಯರನ್ನು ಅಸ್ಪೃಶ್ಯರಂತೆ ಕಾಣುವುದು ಸಂವಿಧಾನದ 17ನೇ ವಿಧಿಯ (ಅಸ್ಪೃಶ್ಯತೆ ನಿವಾರಣೆ) ಅಡಿಯಲ್ಲಿ ಹೇಗೆ ಬರುತ್ತದೆ ಎಂಬ ಬಗ್ಗೆ ಚರ್ಚೆ ನಡೆಯುವಾಗ ನಾಗರತ್ನ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

“ಭಾರತದ ಜಾತಿ ಆಧಾರಿತ ಅಸ್ಪೃಶ್ಯತೆಯ ದೀರ್ಘ ಇತಿಹಾಸದ ಹಿನ್ನೆಲೆಯಲ್ಲಿ ಆರ್ಟಿಕಲ್ 17 ಅನ್ನು ಮೂಲಭೂತ ಹಕ್ಕಾಗಿ ಸೇರಿಸಲಾಗಿದೆ. ಶಬರಿಮಲೆಯ ಸಂದರ್ಭದಲ್ಲಿ ಆರ್ಟಿಕಲ್ 17 ಅನ್ನು ಹೇಗೆ ವಾದಿಸುವುದು ಎಂದು ತಿಳಿದಿಲ್ಲ. ಆದರೆ ಓರ್ವ ಮಹಿಳೆಯಾಗಿ ಮಾತನಾಡುವಾಗ ಆರ್ಟಿಕಲ್ 17 ಮೂರು ದಿನಗಳವರೆಗೆ ಅನ್ವಯಿಸುವುದಿಲ್ಲ ಮತ್ತು ನಾಲ್ಕನೇ ದಿನ ಅಸ್ಪೃಶ್ಯತೆ ಇಲ್ಲ” ಎಂದು ಪುನರುಚ್ಚರಿಸಿದರು.

ಹಾಗೆಯೇ, “ಧರ್ಮದ ಹೆಸರಿನಲ್ಲಿ ನಡೆಯುವ ಇಂತಹ ಸಾಮಾಜಿಕ ಕೆಡುಕುಗಳನ್ನು ನ್ಯಾಯಾಲಯವು ಪ್ರತ್ಯೇಕವಾಗಿ ಗುರುತಿಸಿ ಕ್ರಮ ಕೈಗೊಳ್ಳಬಹುದು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಚುನಾವಣಾ ಆಯೋಗವು ಸಂಪೂರ್ಣವಾಗಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು: ಸುಪ್ರೀಂ ನ್ಯಾಯಮೂರ್ತಿ ಬಿ ವಿ ನಾಗರತ್ನ

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ 2018ರ ಶಬರಿಮಲೆ ತೀರ್ಪಿನಲ್ಲಿ ತಾರ್ಕಿಕತೆಯನ್ನು ಬಲವಾಗಿ ಆಕ್ಷೇಪಿಸಿದರು. “ಶಬರಿಮಲೆಯಲ್ಲಿ ಒಂದು ಅಭಿಪ್ರಾಯವು ಆರ್ಟಿಕಲ್ 17 ಮಹಿಳೆಯರಿಗೆ ಅನ್ವಯಿಸುತ್ತದೆ ಎಂದು ಹೇಳುತ್ತದೆ. ನೀವು ಅವರನ್ನು ಅಸ್ಪೃಶ್ಯರೆಂದು ಪರಿಗಣಿಸುತ್ತಿದ್ದೀರಿ. ಇದಕ್ಕೆ ನನ್ನ ಬಲವಾದ ಆಕ್ಷೇಪಣೆ ಇದೆ. ಭಾರತವನ್ನು ಪಾಶ್ಚಿಮಾತ್ಯ ದೃಷ್ಟಿಕೋನದಿಂದ ನೋಡಬಾರದು” ಎಂದು ಮೆಹ್ತಾ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠಕ್ಕೆ ತಿಳಿಸಿದರು.

10ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಅಂದರೆ ಮುಟ್ಟಾಗುವ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅಯ್ಯಪ್ಪ ‘ನೈಷ್ಠಿಕ ಬ್ರಹ್ಮಚಾರಿ’ ಎಂಬ ಧಾರ್ಮಿಕ ನಂಬಿಕೆಯ ಆಧಾರದಲ್ಲಿ ಈ ಸಂಪ್ರದಾಯವನ್ನು ಪಾಲಿಸಲಾಗುತ್ತಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. 2018ರ ಸೆಪ್ಟೆಂಬರ್ 28ರಂದು ಸುಪ್ರೀಂ ಕೋರ್ಟ್ ಎಲ್ಲ ವಯಸ್ಸಿನ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡುವ ಮಹತ್ವದ ತೀರ್ಪು ನೀಡಿತು. ಈ ಮೂಲಕ ಸಂವಿಧಾನದ ಸಮಾನತೆಯ ಹಕ್ಕನ್ನು ಎತ್ತಿಹಿಡಿಯಿತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾದ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಯುತ್ತಿದೆ.

ಇನ್ನು ಇತ್ತೀಚೆಗೆ ಚುನಾವಣಾ ಆಯೋಗದ ಪಾರದರ್ಶಕತೆ ಬಗ್ಗೆಯೂ ಬಿ ವಿ ನಾಗರತ್ನ ಅವರು ಹೇಳಿಕೆ ನೀಡಿದ್ದರು. ಶನಿವಾರ ಪಟನಾದ ಚಾಣಕ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ರಾಜೇಂದ್ರ ಪ್ರಸಾದ್ ಸ್ಮಾರಕ ಉಪನ್ಯಾಸ ನಡೆಸಿದ ನಾಗರತ್ನ ಅವರು ಮತದಾನದ ಮೇಲ್ವಿಚಾರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಚುನಾವಣಾ ಆಯೋಗವು ಚುನಾವಣೆಗಳ ಸಮಗ್ರತೆಯನ್ನು ಕಾಪಾಡಿಕೊಳ್ಳುವ ಪ್ರಾಥಮಿಕ ಸಂಸ್ಥೆಯಾಗಿದೆ. ಚುನಾವಣಾ ಆಯೋಗವು ಸಂಪೂರ್ಣವಾಗಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಚುನಾವಣೆಗಳನ್ನು ನಡೆಸುವವರು ಸ್ಪರ್ಧಿಸುವವರ ಮೇಲೆ ಅವಲಂಬಿತರಾಗಿದ್ದರೆ, ಪ್ರಕ್ರಿಯೆಯ ತಟಸ್ಥತೆಯನ್ನು ಖಚಿತಪಡಿಸಿಕೊಳ್ಳಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ ವಿ ನಾಗರತ್ನ ಹೇಳಿದ್ದರು.

ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ಈ ತಿಂಗಳಲ್ಲೇ ನಡೆಯಲಿದೆ. ಈಗಾಗಲೇ ಚುನಾವಣಾ ಆಯೋಗವು ಬಿಜೆಪಿಗಾಗಿ ಕೆಲಸ ಮಾಡುತ್ತಿದೆ ಎಂದು ಹಲವು ವಿಪಕ್ಷಗಳು ಆರೋಪಿಸುತ್ತಿದೆ. ಈ ಆರೋಪಗಳ ನಡುವೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಚುನಾವಣಾ ಆಯೋಗದ ಬಗ್ಗೆ ನೀಡಿರುವ ಹೇಳಿಕೆಗೂ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...

ಪದೇ ಪದೇ ಬಂಧನವಾದರೂ ಹಿಂಜರಿಯದ ವಿಪಕ್ಷಗಳು: ಮತ್ತೆ ಜಂತರ್ ಮಂತರ್‌ನತ್ತ ಹೆಜ್ಜೆಯಿಟ್ಟ ಇಂಡಿಯಾ ಒಕ್ಕೂಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ...