ಮಹಿಳೆಯರು ದೇಶದ ಅತಿದೊಡ್ಡ ಅಲ್ಪಸಂಖ್ಯಾತರು: ಮೀಸಲಾತಿ ಸಂಬಂಧ ಕೇಂದ್ರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

Date:

“ಮಹಿಳೆಯರು ದೇಶದ ಅತಿದೊಡ್ಡ ಅಲ್ಪಸಂಖ್ಯಾತರು” ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಲೋಕಸಭೆ, ರಾಜ್ಯ ಶಾಸಕಾಂಗ ಸಭೆಗಳು ಮತ್ತು ದೆಹಲಿ ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

- Advertisement -

ಸಂಸತ್ತಿನಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಆದೇಶಿಸುವ ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿ ವಿಚಾರಣೆಯನ್ನು ಸೋಮವಾರ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠವು ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

“ಭಾರತದ ಸಂವಿಧಾನದ ಪೀಠಿಕೆ ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ಎಲ್ಲಾ ನಾಗರಿಕರು ಅರ್ಹರು ಎಂದು ಹೇಳುತ್ತದೆ. ಈ ದೇಶದಲ್ಲಿ ಅತಿ ದೊಡ್ಡ ಅಲ್ಪಸಂಖ್ಯಾತರು ಯಾರು? ಅದು ಮಹಿಳೆಯರು. ಬಹುತೇಕ ಶೇಕಡ 48ರಷ್ಟು. ಇದು ಮಹಿಳೆಯ ರಾಜಕೀಯ ಸಮಾನತೆಯ ವಿಚಾರ” ಎಂದು ನ್ಯಾಯಮೂರ್ತಿ ನಾಗರತ್ನ ಮೌಖಿಕವಾಗಿ ಹೇಳಿದರು.

ಅದಾದ ಬಳಿಕ ನ್ಯಾಯಾಲಯವು ಹೊಸ ಸೀಮಾ ನಿರ್ಣಯ ಪ್ರಕ್ರಿಯೆ ನಡೆಸುವವರೆಗೆ ಕಾಯದೆ ಮಹಿಳಾ ಮೀಸಲಾತಿ ಮಸೂದೆ 2024 ಅನ್ನು ಜಾರಿಗೆ ತರುವಂತೆ ಕೋರಿ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ನೋಟಿಸ್ ನೀಡಿದ. ಠಾಕೂರ್ ಪರವಾಗಿ ಹಿರಿಯ ವಕೀಲೆ ಶೋಭಾ ಗುಪ್ತಾ ವಾದ ಮಂಡಿಸಿದ್ದಾರೆ.

“ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ನಮ್ಮ ದೇಶ ಸ್ವಾತಂತ್ರ್ಯ ಪಡೆದ 75 ವರ್ಷಗಳ ನಂತರ, ನಾವು (ಮಹಿಳೆಯರು) ಪ್ರಾತಿನಿಧ್ಯಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಬೇಕಾಗಿರುವುದು ದುರದೃಷ್ಟಕರ. ಒಟ್ಟು ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಮಾತ್ರ ಮೀಸಲಿಡಬೇಕಾಗಿದೆ. ಆದರೆ ಇಂತಹ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವಾಗ ನ್ಯಾಯಾಲಯಕ್ಕೆ ಕೆಲವು ಮಿತಿಗಳಿವೆ” ಎಂದು ಗಮನಿಸಿದ ಪೀಠವು ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ.

ಮಹಿಳಾ ಮೀಸಲಾತಿ ಮಸೂದೆಯನ್ನು 2023ರ ಸೆಪ್ಟೆಂಬರ್ 20ರಂದು ಲೋಕಸಭೆ ಮತ್ತು ಆ ವರ್ಷ ಸೆಪ್ಟೆಂಬರ್ 21ರಂದು ರಾಜ್ಯಸಭೆ ಅಂಗೀಕರಿಸಿದೆ. 2023ರ ಸೆಪ್ಟೆಂಬರ್ 28ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...