‘ಅತ್ಯಾಚಾರಿ’ ಜ್ಯೋತಿಷಿಯೊಂದಿಗೆ ನಂಟು; ಮಹಿಳಾ ಆಯೋಗದ ಅಧ್ಯಕ್ಷೆ ರಾಜೀನಾಮೆ

Date:

ಅತ್ಯಾಚಾರದ ಆರೋಪ ಎದುರಿಸುತ್ತಿರುವ ಜ್ಯೋತಿಷಿ ಅಶೋಕ್ ಖರಾತ್ ಜೊತೆಗಿನ ನಂಟು ಮತ್ತು ಫೋಟೋಗಳು ಭಾರಿ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಾಕಣಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

‘ಕ್ಯಾಪ್ಟನ್’ ಎಂದೇ ಪರಿಚಿತರಾಗಿದ್ದ ನಿವೃತ್ತ ಮರ್ಚೆಂಟ್ ನೇವಿ ಅಧಿಕಾರಿಯಾದ ಖರಾತ್, ನಿವೃತ್ತಿಯ ಬಳಿಯ ಜ್ಯೋತಿಷಿಯಾಗಿ ನೆಲೆ ಕಂಡುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡು, ತನಗೆ ದೈವಿಕ ಶಕ್ತಿ ಇರುವುದಾಗಿ ಹೇಳಿಕೊಂಡಿದ್ದ ಆತ, ಮಹಿಳೆಯೊಬ್ಬರ ಮೇಲೆ ಮೂರು ವರ್ಷಗಳಲ್ಲಿ ಹಲವು ಬಾರಿ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣ ಸಂಬಂಧ ಆತನನ್ನು ನಾಸಿಕ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ತನಿಖೆಯ ವೇಳೆ ಪೊಲೀಸರು ಪೆನ್ ಡ್ರೈವ್‌ನಲ್ಲಿದ್ದ ಕೆಲವು ಆಕ್ಷೇಪಾರ್ಹ ದೃಶ್ಯಗಳು ಸೇರಿದಂತೆ ಒಟ್ಟು 58 ವಿಡಿಯೋಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಚರಣೆಗಳನ್ನು ಮಾಡುವ ನೆಪದಲ್ಲಿ ಖರಾತ್ ಮಹಿಳೆಯರನ್ನು ಶೋಷಿಸುತ್ತಿದ್ದನು. ಅಲ್ಲದೆ ತನ್ನ ಪ್ರಭಾವ ಮತ್ತು ಪ್ರಭಾವಿ ವ್ಯಕ್ತಿಗಳೊಂದಿಗಿನ ಸಂಬಂಧವನ್ನು ಬಳಸಿಕೊಂಡು ಸಂತ್ರಸ್ತೆಯರು ಬಾಯಿ ಬಿಡದಂತೆ ದಬ್ಬಾಳಿಕೆ ನಡೆಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಖರಾತ್, ನಾಸಿಕ್ ಜಿಲ್ಲೆಯ ಸಿನ್ನಾರ್ ತಾಲೂಕಿನ ಮಿರ್ಗಾಂವ್‌ನಲ್ಲಿರುವ ಈಶಾನೇಶ್ವರ ಮಹಾದೇವ ದೇವಾಲಯದ ಟ್ರಸ್ಟ್‌ನ ಅಧ್ಯಕ್ಷನೂ ಆಗಿದ್ದರು.

ಖರಾತ್ ಜೊತೆಗೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಾಕಣಕರ್ ಇರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿವೆ. ಖರಾತ್‌ನ ಟ್ರಸ್ಟ್‌ನೊಂದಿಗೆ ನಂಟು ಹೊಂದಿದ್ದಾರೆನ್ನಲಾದ ಚಾಕಣಕರ್ ಅವರು, ಜ್ಯೋತಿಷಿಯು ಇತರ ಜನರೊಂದಿಗೆ ಮಾತನಾಡುತ್ತಿರುವಾಗ ಆತನಿಗೆ ಛತ್ರಿ ಹಿಡಿದು ನಿಂತಿರುವ ಫೋಟೋವೊಂದು ವೈರಲ್ ಆಗಿದೆ. ಈ ಬೆನ್ನಲ್ಲೇ, ವಿರೋಧ ಪಕ್ಷಗಳು ರೂಪಾಲಿ ಅವರನ್ನು ಪ್ರಶ್ನಿಸಲಾರಂಭಿಸಿದ್ದವು. ಇದೀಗ, ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...