ಮಹಿಳಾ ಮೀಸಲಾತಿ: ಚುನಾವಣಾ ತಂತ್ರವಾಗಿಸಿಕೊಂಡಿತೇ ಮೋದಿ ಸರ್ಕಾರ?

Date:

ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಯ ಕುರಿತು ಮೂರು ದಿನಗಳ ವಿಶೇಷ ಅಧಿವೇಶನ ನಡೆಸಲು ಕೇಂದ್ರ ತೀರ್ಮಾನಿಸಿದೆ. ಏಪ್ರಿಲ್‌ 15 ರಿಂದ ಅಧಿವೇಶನ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದ್ದು ನಿಖರ ದಿನಾಂಕ ತಿಳಿದು ಬಂದಿಲ್ಲ.

- Advertisement -

ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ 33% ಮೀಸಲಾತಿ ನೀಡುವ ಮಸೂದೆಯನ್ನು ಜಾರಿಗೆ ತರಲು ಕೇಂದ್ರ ಏಪ್ರಿಲ್‌ ಮೂರು ಅಥವಾ ನಾಲ್ಕನೆ ವಾರದಲ್ಲಿ ಈ ಕುರಿತು ಸಂಸತ್‌ ಅಧಿವೇಶನ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇದನ್ನು ಓದಿ>>ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಅವಸರ: ಮೋದಿ ‘ಯು ಟರ್ನ್ ಉಸ್ತಾದ್’ ಎಂದ ಕಾಂಗ್ರೆಸ್

2023ರಲ್ಲಿ ಅಂಗೀಕರಿಸಲಾದ ಮಸೂದೆ ಜಾರಿಗೆ ವಿಳಂಬ ಅನುಸರಿಸಿದ್ದು ಯಾಕೆ? ಕಳೆದ ಮೂರು ವರ್ಷಗಳಲ್ಲಿ ಸರ್ಕಾರಕ್ಕೆ ಮೀಸಲಾತಿ ಮಸೂದೆಯ ಕುರಿತ ಯಾವುದೇ ಆಲೋಚನೆಗಳು ಯಾಕೆ ಇರಲಿಲ್ಲ ಎಂದು ವಿರೋಧ ಪಕ್ಷಗಳು ಪ್ರಶ್ನಿಸಿವೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ವಿಶೇಷ ಅಧಿವೇಶನದ ಘೋಷಣೆ ಮಾಡಿದ ತರುವಾಯ ವಿರೋಧ ಪಕ್ಷಗಳಿಂದ ಚುನಾವಣೆಯ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಈ ತರಾತುರಿಯ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟೀಕೆ ಮಾಡಲಾಗಿದೆ.

1996 ಎಚ್.ಡಿ. ದೇವೇಗೌಡರ ನೇತೃತ್ವದ ಸರ್ಕಾರವು ಮೊದಲ ಬಾರಿಗೆ ಈ ಮಸೂದೆಯನ್ನು ಮಂಡಿಸಿತು. ಆದರೆ ರಾಜಕೀಯ ಒಮ್ಮತದ ಕೊರತೆಯಿಂದ ಅದು ಅಂಗೀಕಾರವಾಗಲಿಲ್ಲ.

1998 ಅಟಲ್ ಬಿಹಾರಿ ವಾಜಪೇಯಿ ಮತ್ತು 2014 ಮನಮೋಹನ್ ಸಿಂಗ್ ಅವರ ಸರ್ಕಾರಗಳ ಅವಧಿಯಲ್ಲಿ ಹಲವಾರು ಬಾರಿ ಮಸೂದೆಯನ್ನು ಮಂಡಿಸಲಾಯಿತು. 2010ರಲ್ಲಿ ರಾಜ್ಯಸಭೆಯಲ್ಲಿ ಇದು ಅಂಗೀಕಾರಗೊಂಡರೂ, ಲೋಕಸಭೆಯಲ್ಲಿ ಅಂಗೀಕಾರವಾಗದೆ ರದ್ದಾಯಿತು.

ಸಪ್ಟೆಂಬರ್ 2023ರಲ್ಲಿ ನಡೆದ ವಿಶೇಷ ಸಂಸತ್ ಅಧಿವೇಶನದಲ್ಲಿ ಈ ಮಸೂದೆಯನ್ನು ಬಹುಮತದೊಂದಿಗೆ ಅಂಗೀಕರಿಸಲಾಯಿತು. ಈ ಮೀಸಲಾತಿಯು ತಕ್ಷಣವೇ ಜಾರಿಗೆ ಬರುವುದಿಲ್ಲ. ಮುಂದಿನ ಜನಗಣತಿ ಮತ್ತು ಅದರ ನಂತರ ನಡೆಯುವ ಕ್ಷೇತ್ರಪುನರ್ ವಿಂಗಡಣೆ ಪ್ರಕ್ರಿಯೆಯ ನಂತರವಷ್ಟೇ ಇದು ಜಾರಿಯಾಗಲಿದೆ. ತಜ್ಞರ ಪ್ರಕಾರ, ಇದು ಬಹುಶಃ 2029ರ ಲೋಕಸಭಾ ಚುನಾವಣೆಯ ವೇಳೆಗೆ ಜಾರಿಗೆ ಬರಬಹುದು ಎನ್ನಲಾಗಿತ್ತು.

ಪರಿಶಿಷ್ಟ ಜಾತಿ  ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಈ 33% ಕೋಟಾದಲ್ಲಿ ಒಳ ಮೀಸಲಾತಿ ಇರುತ್ತದೆ. ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟ ಇರದಿರುವ ಕಾರಣ ಪ್ರತಿಪಕ್ಷಗಳು ಈ ಮಸೂದೆಯನ್ನು ವಿರೋಧಿಸುತ್ತಲೇ ಬಂದಿವೆ.

2023ರಲ್ಲಿ ನಾರಿ ಶಕ್ತಿ ವಂದನಾ  ಹೆಸರಿನಲ್ಲಿ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿತ್ತು. ತದನಂತರ ಮಸೂದೆಯ ಜಾರಿಯ ಕುರಿತು ಯಾವುದೇ ಚರ್ಚೆಗಳು ನಡೆದಿರಲಿಲ್ಲ. ಬಜೆಟ್‌ ಅಧಿವೇಶನದಲ್ಲಿ ಅಥವಾ ಬಜೆಟ್‌ ಅಧಿವೇಶನ ಮುಗಿದ ನಂತರ ಈ ಮಸೂದೆ ಮಂಡಿಸಲು ವಿಶೇಷ ಅಧಿವೇಶನ ನಡೆಸಲಾಗುತ್ತದೆ ಎಂದು ಸರ್ಕಾರ ಈ ಹಿಂದೆ ತಿಳಿಯ ಪಡಿಸಿತ್ತು.

ವಿರೋಧ ಪಕ್ಷಗಳ ವಿರೋಧದ ನಡುವೆಯು ಸರ್ಕಾರ ತೆಗೆದುಕೊಂಡ ಈ ತೀರ್ಮಾನ ಚುನಾವಣಾ ಸಮಯದ ಅದರಲ್ಲೂ ವಿಶೇಷವಾಗಿ ಪಶ್ಚಿಮ ಬಂಗಾಳ ಚುನಾವಣೆಯ ರಾಜಕೀಯ ಲಾಭದ ದಾಳವನ್ನಾಗಿ ಬಳಸಲಾಗುತ್ತಿದೆ ಎಂಬ ತೀವ್ರ ಟೀಕೆಗೆ ಗುರಿಯಾಗಿದೆ.

ಸರ್ಕಾರ ರಾಜಕೀಯ ಲಾಭಕ್ಕೆ ಈ ನಿರ್ಧಾರ ಕೈಗೊಂಡಿದೆ ಎಂಬ ವಾದವನ್ನು ತಳ್ಳಿ ಹಾಕಿರುವ ರಿಜಿಜು ಮುಂದಿನ ಎರಡು ಮೂರು ವಾರಗಳಲ್ಲಿ ನಾವು ಬಹುಮುಖ್ಯ ಮಸೂದೆಯನ್ನು ಮಂಡಿಸಲಿದ್ದೇವೆ ಮತ್ತು ಈ ತಿದ್ದುಪಡಿಯ ಶೀಘ್ರ ಅಂಗೀಕಾರದ ಮೂಲಕ ಮಹಿಳಾ ಮೀಸಲಾತಿ ಕಾಯ್ದೆಯನ್ನು ಆದಷ್ಟು ಶೀಘ್ರವಾಗಿ ಜಾರಿ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

ರಿಜಿಜುಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ʼಸರ್ಕಾರಕ್ಕೆ ಮಹಿಳೆಯರ ಕುರಿತು ಇಷ್ಟು ಬದ್ಧತೆ ಇದ್ದರೆ ಮಸೂದೆ ಮಂಡಿಸಿ ಮೂರು ವರ್ಷಗಳು ಕಳೆದ ಮೇಲೂ ಜಾರಿಗೆ ತರದಿರಲು ಕಾರಣವೇನು? ಕಾಯ್ದೆ ತರುವ ಉದ್ದೇಶ ಇದ್ದಿದ್ದರೆ ಅಧಿವೇಶನದ ಶುರುವಾತಿನಲ್ಲಿ ಈ ಕುರಿತು ಪ್ರಸ್ತಾಪಿಸುತ್ತಿದ್ದಿರಿʼ ಎಂದು ಛೀಮಾರಿ ಹಾಕಿದ್ದಾರೆ. ರಾಜ್ಯಗಳು ಚುನಾವಣೆಯ ಹೊಸ್ತಿಲಿನಲ್ಲಿ ನಿಂತಾಗ ಮಸೂದೆಯನ್ನು ಜಾರಿಗೆ ತರುವ ಕುರಿತು ಮಾತನಾಡುತ್ತಿರುವುದು ರಾಜಕೀಯ ಲಾಭ ಗಳಿಸುವ ಹುನ್ನಾರ ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...

ಬೀದರ್‌ | ಮೊಬೈಲ್‌ಗಿಂತ ಕಲೆಯತ್ತ ಮಕ್ಕಳ ಆಸಕ್ತಿ ಹೆಚ್ಚಲಿ: ಸಿದ್ರಾಮ ಸಿಂಧೆ

ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ...

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...