ಮಹಿಳಾ ಮೀಸಲಾತಿ ವಿವಾದ: ಅಮಿತ್ ಶಾ ಅವರಿಗೆ ‘ನೆನಪಿನ ಶಕ್ತಿ ಕುಂದಿದೆ’ ಎಂದ ಪಿ ಚಿದಂಬರಂ

Date:

ಮಹಿಳಾ ಮೀಸಲಾತಿ ಜಾರಿ ವಿಚಾರವಾಗಿ ಕಾಂಗ್ರೆಸ್ ನಿಲುವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಪ್ಪಾಗಿ ಬಿಂಬಿಸುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಶುಕ್ರವಾರ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. ಅಮಿತ್ ಶಾ ಅವರಿಗೆ ‘ನೆನಪಿನ ಶಕ್ತಿ ಕುಂದಿದೆ’ ಅಥವಾ ಅವರು ‘ಸತ್ಯವನ್ನು ಮರೆಮಾಚುತ್ತಿದ್ದಾರೆ’ ಎಂದು ಚಿದಂಬರಂ ಹೇಳಿದ್ದಾರೆ.

- Advertisement -

ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X)ನಲ್ಲಿ ಕಾಂಗ್ರೆಸ್ ನಾಯಕ ಚಿದಂಬರಂ ಪೋಸ್ಟ್ ಮಾಡಿದ್ದಾರೆ. “ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಸಂವಿಧಾನದ 106ನೇ ತಿದ್ದುಪಡಿ ಕಾಯ್ದೆಯನ್ನು 2023ರ ಸೆಪ್ಟೆಂಬರ್‌ನಲ್ಲಿಯೇ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿತ್ತು ಎಂದು ಚಿದಂಬರಂ ನೆನಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಯುದ್ಧದ ನೆಪ, ಬೆಲೆ ಏರಿಕೆಯ ತಾಪ: ಅಸಲಿ ಕಾರಣಗಳೇನು?

ದೇಶವು ಚಿನ್ನ-ಬೆಳ್ಳಿಯಂತಹ ಲೋಹಗಳಿಗೆ ಆಮದನ್ನೇ ಹೆಚ್ಚಾಗಿ ನಂಬಿಕೊಂಡಿದೆ. ಒಂದೆಡೆ ಕಚ್ಚಾ ತೈಲ, ಇನ್ನೊಂದೆಡೆ ಬೆಲೆಬಾಳುವ ಲೋಹಗಳು- ಹೀಗೆ ಎರಡೂ ಕಡೆಯಿಂದ ಬೆಲೆ ಏರಿಕೆಯ ಒತ್ತಡ ಶುರುವಾಗಿದೆ. ಹಿಂದಿನ ರಷ್ಯಾ-ಉಕ್ರೇನ್ ಯುದ್ಧದ ಕಾಲಕ್ಕಿಂತ ಈಗಿನ...

ಸಮಾಜಕ್ಕೆ ಪ್ರಕೃತಿಯ ಸಮಾನತೆಯ ಪಾಠ ಹೇಳಿದ ಕನಕದಾಸರು ಮತ್ತವರ...

ಜನ್ಮದ ಆಧಾರದ ಮೇಲೆ ಮನುಷ್ಯನನ್ನು ತೂಗುವ ಸಮಾಜಕ್ಕೆ ಪ್ರಕೃತಿಯ ಸಮಾನತೆಯ ಪಾಠ ಹೇಳುತ್ತ, ಮನುಷ್ಯನ ವ್ಯಕ್ತಿಗತ ಅಹಂಕಾರವೇ ಸಮಸ್ತ ಅಧರ್ಮದ ಮೂಲವೆಂದು ಎಚ್ಚರಿಸುವ ಕನಕದಾಸರು, 'ಕುಲಕುಲಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ?'...

ಇದನ್ನೂ ಓದಿ: ಇತಿಹಾಸ ತಿರುಚಿದ ಮೋದಿ: ಪಟೇಲ್-ನೆಹರೂ ಇಬ್ಬರೂ ದೇಶಭಕ್ತರು ಎಂದು ಚಿದಂಬರಂ ಸ್ಪಷ್ಟನೆ

ಈಗಾಗಲೇ ಕಾನೂನು ಜಾರಿಯಲ್ಲಿದ್ದರೂ, ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಹೊಸ ಮಸೂದೆಯನ್ನು ತರುವ ಅಗತ್ಯವೇನಿದೆ ಎಂದು ಕೇಂದ್ರ ಸರ್ಕಾರವನ್ನು ಚಿದಂಬರಂ ಪ್ರಶ್ನಿಸಿದ್ದಾರೆ.

106ನೇ ಸಂವಿಧಾನ ತಿದ್ದುಪಡಿಯ ಮೂಲಕ ಸೇರ್ಪಡೆಗೊಳಿಸಲಾದ ‘ವಿಧಿ 334A’ (Article 334A), ಮಹಿಳಾ ಮೀಸಲಾತಿಯ ಜಾರಿಯನ್ನು ಮುಂದಿನ ಜನಗಣತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಗೆ ತಳುಕು ಹಾಕಿದೆ ಎಂದು ಮಾಜಿ ಕೇಂದ್ರ ಸಚಿವರು ವಿವರಿಸಿದ್ದಾರೆ.

ಸಂಸತ್ತಿನ ಚರ್ಚೆಯ ಸಮಯದಲ್ಲಿಯೇ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಈ ವಿಧಿಯನ್ನು ವಿರೋಧಿಸಿದ್ದವು. ಆದರೆ ಬಿಜೆಪಿ ಸರ್ಕಾರವು ಉದ್ದೇಶಪೂರ್ವಕವಾಗಿ ಈ ಅಡೆತಡೆಗಳನ್ನು ಸೃಷ್ಟಿಸಿತು. ಕೇವಲ ‘ವಿಧಿ 334A’ ಅನ್ನು ರದ್ದುಗೊಳಿಸುವ ತಿದ್ದುಪಡಿಯನ್ನು ತಂದರೆ ಮಹಿಳಾ ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತರಬಹುದು ಎಂದು ಸಲಹೆ ನೀಡಿದ್ದಾರೆ.

ಈ ನಡುವೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸಾರ್ವಜನಿಕರ ದಾರಿ ತಪ್ಪಿಸುತ್ತಿದ್ದಾರೆ ಹಾಗೂ ವಿಶೇಷ ಅಧಿವೇಶನದ ಮೂಲಕ ಕ್ಷೇತ್ರ ಪುನರ್ವಿಂಗಡಣೆಯ ಕಾರ್ಯಸೂಚಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದ ನೆಪ, ಬೆಲೆ ಏರಿಕೆಯ ತಾಪ: ಅಸಲಿ ಕಾರಣಗಳೇನು?

ದೇಶವು ಚಿನ್ನ-ಬೆಳ್ಳಿಯಂತಹ ಲೋಹಗಳಿಗೆ ಆಮದನ್ನೇ ಹೆಚ್ಚಾಗಿ ನಂಬಿಕೊಂಡಿದೆ. ಒಂದೆಡೆ ಕಚ್ಚಾ ತೈಲ,...

ಪಶ್ಚಿಮ ಬಂಗಾಳ| ಟ್ರೈಬ್ಯುನಲ್‌ಗೆ ಮೇಲ್ಮನವಿ ಸಲ್ಲಿಸಿದ ಮತದಾರರ ಮನೆಗೆ ಪೊಲೀಸರು: ಯಾವ ಕಾನೂನು ಎಂದು ವಿಪಕ್ಷಗಳ ಪ್ರಶ್ನೆ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು...

ಔರಾದ್ | ಎಸ್‌ಡಿಎಂಸಿ ಅಧ್ಯಕ್ಷರಾಗಿ ಚನ್ನಬಸವ ಭೂರೆ ಅವಿರೋಧ ಆಯ್ಕೆ

ಔರಾದ್ ತಾಲ್ಲೂಕಿನ ಜೋಜನಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ: ಸಂಸತ್ತಿನ ಎರಡೂ ಸದನಗಳಲ್ಲಿ ಪರ ವಿರೋಧದ ಬಲಾಬಲ

ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಶೇ 33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ...