ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

Date:

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಓಲಾ, ಉಬರ್ ಮತ್ತು ರ‍್ಯಾಪಿಡೊ ಸೇರಿದಂತೆ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ದೆಹಲಿ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರ ವಿಭಾಗೀಯ ಪೀಠವು ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಂಬಂಧಪಟ್ಟ ಎಲ್ಲರಿಗೂ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 16ಕ್ಕೆ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ಖಾಸಗಿ ಟ್ಯಾಕ್ಸಿ ಆ್ಯಪ್‌ ನಿರ್ವಹಣಾ ಸಂಸ್ಥೆಗಳನ್ನು ಹೊಣೆಗಾರರನ್ನಾಗಿ ಮಾಡಲು ನಾವು ಬಯಸುತ್ತೇವೆ. ಅದಕ್ಕಾಗಿಯೇ ನೋಟಿಸ್ ಜಾರಿ ಮಾಡುತ್ತಿದ್ದೇವೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಅದಿತ್ಯ ಸೆಹಗಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ.

ಅರ್ಜಿದಾರರ ಪರ ವಕೀಲರು ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಆ್ಯಪ್ ಆಧಾರಿತ ಕಂಪನಿಗಳು 2 ಲಕ್ಷಕ್ಕೂ ಹೆಚ್ಚು ಕ್ಯಾಬ್‌ಗಳನ್ನು ನಿರ್ವಹಿಸುತ್ತಿವೆ. ಆದರೆ ರಾತ್ರಿ ವೇಳೆ ಚಾಲಕರ ತಪಾಸಣೆ ಸಮರ್ಪಕವಾಗಿ ನಡೆಯುತ್ತಿಲ್ಲ . ರಾತ್ರಿ 8 ಅಥವಾ 9 ಗಂಟೆಯ ನಂತರ ಚಾಲಕರು ಕ್ಯಾಬ್‌ ಚಲಾಯಿಸುತ್ತಿದ್ದಾರೆಯೇ, ಅವರು ವಿಮಾನ ನಿಲ್ದಾಣ ಅಥವಾ ಇತರ ಪ್ರಮುಖ ಸ್ಥಳಗಳಿಗೆ ತೆರಳುತ್ತಿದ್ದಾರೆಯೇ, ಚಾಲಕ ಮದ್ಯಪಾನ ಮಾಡಿದ್ದಾನೆಯೇ ಎಂಬುದನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ಆರೋಪಿಸಿದರು.

ಮಹಿಳೆಯರು ಬಳಸುವ ಆ್ಯಪ್ ಆಧಾರಿತ ಕ್ಯಾಬ್‌, ಬೈಕ್‌ ಟ್ಯಾಕ್ಸಿ ಹಾಗೂ ಇತರ ರೈಡ್‌ ಹೈಲಿಂಗ್‌ ಸೇವೆಗಳ ಸುರಕ್ಷತಾ ವ್ಯವಸ್ಥೆಯನ್ನು ಸಮಗ್ರವಾಗಿ ಪರಿಷ್ಕರಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಪ್ರಯಾಣದ ಸಂದರ್ಭದಲ್ಲಿ ಆ್ಯಪ್‌ನಲ್ಲಿ ತೋರಿಸುವ ಚಾಲಕ ಮತ್ತು ವಾಹನವೇ ನಿಜವಾಗಿ ಪ್ರಯಾಣಕ್ಕೆ ನಿಯೋಜನೆಯಾಗಿರುವುದನ್ನು ಖಚಿತಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಆ್ಯಪ್‌ನಲ್ಲಿ ತೋರಿಸಿರುವ ಚಾಲಕ ಅಥವಾ ವಾಹನದ ಬದಲಿಗೆ ಅನಧಿಕೃತವಾಗಿ ಬೇರೊಬ್ಬ ಚಾಲಕ ಅಥವಾ ವಾಹನ ಬಂದರೆ, ಪ್ರಯಾಣಿಕರು ಯಾವುದೇ ದಂಡವಿಲ್ಲದೆ ರೈಡ್‌ ರದ್ದುಪಡಿಸಲು ಅವಕಾಶ ನೀಡಬೇಕು. ಇಂತಹ ಬದಲಾವಣೆಗಳನ್ನು ಸುರಕ್ಷತಾ ಘಟನೆಗಳಾಗಿ ದಾಖಲಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮಹಿಳೆಯರು ತುರ್ತು ಪರಿಸ್ಥಿತಿಯಲ್ಲಿ SOS ಸಂದೇಶ ಕಳುಹಿಸಿದಾಗ ತಕ್ಷಣ ಪ್ರತಿಕ್ರಿಯಿಸಲು 24×7 ಕಮಾಂಡ್‌ ಮತ್ತು ಕಂಟ್ರೋಲ್‌ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. SOS ಬಂದ ಸಂದರ್ಭದಲ್ಲಿ ಪ್ರಯಾಣದ ಬುಕಿಂಗ್ ವಿವರಗಳು, ಚಾಲಕನ ಗುರುತು, ವಾಹನ ನೋಂದಣಿ ಸಂಖ್ಯೆ ಮತ್ತು ವಾಹನದ ನೈಜ-ಸಮಯದ ಸ್ಥಳ ಮಾಹಿತಿಯನ್ನು ಅಗತ್ಯವಿರುವ ಸಂದರ್ಭಗಳಲ್ಲಿ ತುರ್ತು ಸೇವೆಗಳು ಮತ್ತು ಪೊಲೀಸರೊಂದಿಗೆ ಹಂಚಿಕೊಳ್ಳುವ ವ್ಯವಸ್ಥೆ ಇರಬೇಕು ಎಂದು ಅರ್ಜಿದಾರರು ಹೇಳಿದ್ದಾರೆ. ಇದನ್ನು ಗೌಪ್ಯತಾ ನಿಯಮಗಳಿಗೆ ಒಳಪಡಿಸಬೇಕು ಎಂದೂ ಮನವಿ ಮಾಡಲಾಗಿದೆ.

ಪ್ರಯಾಣದ ವೇಳೆ ಚಾಲಕ ನಿಗದಿತ ಮಾರ್ಗದಿಂದ ಗಮನಾರ್ಹವಾಗಿ ಬೇರೆಡೆಗೆ ತಿರುಗಿದರೆ ಪ್ರಯಾಣಿಕರಿಗೆ ಸ್ವಯಂಚಾಲಿತ ಎಚ್ಚರಿಕೆ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ಜೊತೆಗೆ ಚಾಲಕರಿಗೆ ನಿಯಮಿತವಾಗಿ ಲಿಂಗ ಸಂವೇದನೆ ಮತ್ತು ಮಹಿಳಾ ಸುರಕ್ಷತೆ ಕುರಿತ ತರಬೇತಿ ನೀಡಬೇಕು ಹಾಗೂ ಮಹಿಳೆಯರಿಗೆ ಅಪಾಯಕಾರಿಯಾಗಬಹುದಾದ ಸ್ಥಳಗಳಲ್ಲಿ ಮೇಲ್ವಿಚಾರಣಾ ವ್ಯವಸ್ಥೆ ಬಲಪಡಿಸಬೇಕು ಎಂದು ಕೋರಲಾಗಿದೆ.

ಏಕಾಂಗಿಯಾಗಿ ಪ್ರಯಾಣಿಸುವ ಮಹಿಳೆಯರಿಗಾಗಿ ಪರಿಶೀಲನೆಗೊಳಗಾದ ಮಹಿಳಾ ಚಾಲಕರ ಪ್ರತ್ಯೇಕ ಬಳಗ ನಿರ್ಮಿಸುವಂತೆಯೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಲಭ್ಯತೆ ಇರುವ ಸಂದರ್ಭದಲ್ಲಿ ಒಂಟಿಯಾಗಿ ಪ್ರಯಾಣಿಸುವ ಮಹಿಳೆಯರು ಮಹಿಳಾ ಚಾಲಕರನ್ನು ಆಯ್ಕೆ ಮಾಡಿಕೊಳ್ಳಲು ಅಥವಾ ಅಂತಹ ಚಾಲಕರಿಗೆ ಆದ್ಯತೆ ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಈ ಎಲ್ಲಾ ಬೇಡಿಕೆಗಳ ಕುರಿತು ಓಲಾ, ಉಬರ್, ರ‍್ಯಾಪಿಡೊ ಹಾಗೂ ಕೇಂದ್ರ ಮತ್ತು ದೆಹಲಿ ಸರ್ಕಾರಗಳ ಪ್ರತಿಕ್ರಿಯೆಯನ್ನು ಹೈಕೋರ್ಟ್ ಕೇಳಿದೆ.

ಇದನ್ನೂ ಓದಿ:

ರಾತ್ರಿ ವೇಳೆ ಕ್ಯಾಬ್‌ ಸೇವೆ ಬಳಸುವ ಮಹಿಳೆಯರ ಸುರಕ್ಷತೆಯೂ ಅರ್ಜಿಯ ಪ್ರಮುಖ ವಿಚಾರವಾಗಿದೆ. ರಾತ್ರಿ 8 ಅಥವಾ 9 ಗಂಟೆಯ ನಂತರ, ವಿಶೇಷವಾಗಿ ವಿಮಾನ ನಿಲ್ದಾಣಗಳು ಹಾಗೂ ಪ್ರಮುಖ ಸಾರಿಗೆ ಸ್ಥಳಗಳಿಂದ ಸಂಚರಿಸುವ ಕ್ಯಾಬ್‌ಗಳ ಮೇಲೆ ಹೆಚ್ಚುವರಿ ಸುರಕ್ಷತಾ ಪರಿಶೀಲನೆ ನಡೆಸಬೇಕು ಎಂಬ ಬೇಡಿಕೆ ಮುಂದಿಡಲಾಗಿದೆ. ಚಾಲಕರು ಮದ್ಯ ಅಥವಾ ಇತರ ಮಾದಕ ವಸ್ತುಗಳ ಪ್ರಭಾವದಲ್ಲಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವ ತಪಾಸಣೆ ಸೇರಿದಂತೆ, ರಾತ್ರಿ ಪ್ರಯಾಣಕ್ಕೆ ಸಂಬಂಧಿಸಿದ ಸುರಕ್ಷತಾ ಕ್ರಮಗಳನ್ನು ಬಲಪಡಿಸುವ ಅಗತ್ಯವನ್ನೂ ಅರ್ಜಿ ಪ್ರಸ್ತಾಪಿಸಿದೆ. ಚಾಲಕರಿಗೆ ನಿಯಮಿತವಾಗಿ ಲಿಂಗ ಸಂವೇದನೆ ಹಾಗೂ ಮಹಿಳಾ ಪ್ರಯಾಣಿಕರೊಂದಿಗೆ ಸುರಕ್ಷಿತವಾಗಿ ವರ್ತಿಸುವ ಕುರಿತು ತರಬೇತಿ ನೀಡುವ ಪ್ರಸ್ತಾಪವೂ ಇದೆ. ಜತೆಗೆ, ಪರಿಶೀಲನೆಗೊಂಡ ಮಹಿಳಾ ಚಾಲಕರ ಪ್ರತ್ಯೇಕ ಸಮೂಹವನ್ನು ರೂಪಿಸಿ, ಮಹಿಳೆಯರು ಏಕಾಂಗಿಯಾಗಿ ಪ್ರಯಾಣಿಸುವಾಗ ಲಭ್ಯತೆಯ ಆಧಾರದ ಮೇಲೆ ಮಹಿಳಾ ಚಾಲಕರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಕಲ್ಪಿಸುವ ಕುರಿತೂ ಅರ್ಜಿಯಲ್ಲಿ ಸಲಹೆ ನೀಡಲಾಗಿದೆ. ಆ್ಯಪ್‌ ಆಧಾರಿತ ಸಾರಿಗೆ ವ್ಯವಸ್ಥೆಯಲ್ಲಿ ಸುರಕ್ಷತೆಯ ಹೊಣೆ ಕೇವಲ ಪ್ರಯಾಣಿಕರ ಮೇಲೆಯೇ ಇರಬಾರದು ಎಂಬುದೇ ಈ ಅರ್ಜಿಯ ಪ್ರಮುಖ ಅಂಶವಾಗಿದೆ. ಚಾಲಕನ ಪರಿಶೀಲನೆ, ವಾಹನದ ದೃಢೀಕರಣ, ತುರ್ತು ಪ್ರತಿಕ್ರಿಯೆ, ಮಾರ್ಗದ ಮೇಲ್ವಿಚಾರಣೆ, ಸುರಕ್ಷತಾ ದೂರುಗಳ ದಾಖಲಾತಿ ಹಾಗೂ ಪೊಲೀಸ್‌ ಇಲಾಖೆಯೊಂದಿಗೆ ಸಮನ್ವಯ.. ಈ ಎಲ್ಲ ಹಂತಗಳಲ್ಲೂ ಸೇವೆ ಒದಗಿಸುವ ಕಂಪನಿಗಳ ಜವಾಬ್ದಾರಿಯನ್ನು ಸ್ಪಷ್ಟಪಡಿಸುವ ಅಗತ್ಯವಿದೆ. ದೆಹಲಿ ಹೈಕೋರ್ಟ್‌ನ ವಿಚಾರಣೆ ಈ ವ್ಯವಸ್ಥೆಯಲ್ಲಿ ಖಾಸಗಿ ಆ್ಯಪ್‌ ಆಧಾರಿತ ಸಾರಿಗೆ ಸಂಸ್ಥೆಗಳ ಹೊಣೆಗಾರಿಕೆಯ ವ್ಯಾಪ್ತಿಯ ಕುರಿತು ಮಹತ್ವದ ಚರ್ಚೆಗೆ ವೇದಿಕೆ ಕಲ್ಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶ ಹಾದಿ ತಪ್ಪಿದೆ; ಮತ್ತೆ ಸರಿ ದಾರಿಗೆ ಬರುವ ಶಕ್ತಿ ಭಾರತಕ್ಕಿದೆ: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ

"ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶ ತನ್ನ ಹಾದಿಯನ್ನು ಕಳೆದುಕೊಂಡಿದೆ ಎಂದು ನನಗೆ ಅನಿಸುತ್ತದೆ....

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...