ಸಂವಿಧಾನದ ಮೇಲಿನ ದಾಳಿಗೆ ಅವಕಾಶ ನೀಡಲ್ಲ: ರಾಹುಲ್ ಗಾಂಧಿ

Date:

ಭಾರತದ ಸಂವಿಧಾನ ಬಡವರ ‘ರಕ್ಷಣಾ ಗುರಾಣಿ’ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅದರ ಮೇಲೆ ಯಾವುದೇ ದಾಳಿಗೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ದೇಶದ ಜನರನ್ನು ಒತ್ತಾಯಿಸಿದ್ದಾರೆ. ಜತೆಗೆ ಅಂತಹ ಯಾವುದೇ ದಾಳಿಯ ವಿರುದ್ಧ ಎದ್ದು ನಿಲ್ಲುವ ಮೊದಲಿಗ ನಾನೇ ಎಂದು ಹೇಳಿದ್ದಾರೆ.

- Advertisement -

ಸಂವಿಧಾನ ದಿನದಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಭಾರತದ ಸಂವಿಧಾನ ಕೇವಲ ಒಂದು ಪುಸ್ತಕವಲ್ಲ. ಇದು ದೇಶದ ಪ್ರತಿಯೊಬ್ಬ ನಾಗರಿಕರಿಗೂ ನೀಡಿದ ಪವಿತ್ರ ವಾಗ್ದಾನವಾಗಿದೆ. ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಾಗಿರಲಿ, ಯಾವುದೇ ಪ್ರದೇಶದಿಂದ ಬಂದವರಾಗಿರಲಿ, ಯಾವುದೇ ಭಾಷೆಯನ್ನು ಮಾತನಾಡುವವರಾಗಿರಲಿ, ಬಡವರಾಗಿರಲಿ ಅಥವಾ ಶ್ರೀಮಂತರಾಗಿರಲಿ, ಎಲ್ಲರಿಗೂ ಸಮಾನತೆ, ಗೌರವ ಮತ್ತು ನ್ಯಾಯ ಸಿಗುತ್ತದೆ ಎಂಬ ಭರವಸೆ. ಅದನ್ನು ರಕ್ಷಿಸುವುದು ನಮ್ಮ ಕರ್ತವ್ಯ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಂವಿಧಾನವು ಬಡವರು ಮತ್ತು ಸಮಾಜದ ಅಂಚಿನಲ್ಲಿರುವ ಪ್ರತಿಯೊಬ್ಬ ನಾಗರಿಕನ ರಕ್ಷಣಾ ಗುರಾಣಿ. ಅಲ್ಲದೇ ಅದು ಆ ಜನರ ಶಕ್ತಿ ಮತ್ತು ಧ್ವನಿಯಾಗಿದೆ ಎಂದೂ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್ ಹಿತಕ್ಕಾಗಿ ಕಾರ್ಮಿಕರ ಹಕ್ಕುಗಳ ಹತ್ತಿಕ್ಕುತ್ತಿರುವ ಮೋದಿ

ಜಾತ್ಯತೀತತೆ, ಸಮಾಜವಾದ ರಕ್ಷಿಸುವ ಅಗತ್ಯವಿದೆ: ಖರ್ಗೆ

ಸಂವಿಧಾನದ ಮೂಲಭೂತ ತತ್ವಗಳಾದ ನ್ಯಾಯ, ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ, ಜಾತ್ಯತೀತತೆ ಮತ್ತು ಸಮಾಜವಾದವನ್ನು ರಕ್ಷಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

‘ಸಂವಿಧಾನವು ವಕೀಲರಿಗೆ ಕೇವಲ ಒಂದು ದಾಖಲೆಯಲ್ಲ, ಬದಲಾಗಿ ಅದು ಜೀವನ ವಿಧಾನ’ ಎಂಬ ಡಾ. ಬಿ.ಆರ್‌ ಅಂಬೇಡ್ಕರ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ದೇಶದ ಏಕತೆ ಮತ್ತು ಸಮಗ್ರತೆಗಾಗಿ, ಪ್ರೀತಿ, ಸಹೋದರತ್ವ ಮತ್ತು ಸಾಮರಸ್ಯಕ್ಕಾಗಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಳ್ಳಲು ನಾವು ಮತ್ತೊಮ್ಮೆ ಪ್ರತಿಜ್ಞೆ ಮಾಡೋಣ ಎಂದಿದ್ದಾರೆ.

ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಅಂಬೇಡ್ಕರ್‌ ಅವರು 1949ರ ನವೆಂಬರ್‌ 26ರಂದು ಸಂವಿಧಾನವನ್ನು ಅಂಗೀಕರಿಸುವ ನಿರ್ಣಯವನ್ನು ಮಂಡಿಸಿದ್ದರು. ಸಂವಿಧಾನವನ್ನು ಸಭೆಯು ಅಂಗೀಕರಿಸಿದ ಇದೇ ದಿನವನ್ನು ‘ಸಂವಿಧಾನ ದಿನ’ವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...