ಭಾರತೀಯರ ಗೌಪ್ಯತೆಯ ಜೊತೆ ಚೆಲ್ಲಾಟ ಸಲ್ಲದು: ಮೆಟಾಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

Date:

ಭಾರತೀಯ ಬಳಕೆದಾರರ ಮಾಹಿತಿಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿರುವ ವಾಟ್ಸಾಪ್‌ ಮತ್ತು ಅದರ ಮಾತೃಸಂಸ್ಥೆ ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, “ನಮ್ಮ ದೇಶದ ಗೌಪ್ಯತಾ ನೀತಿಯೊಂದಿಗೆ ಆಟವಾಡಲು ನಿಮಗೆ ಅವಕಾಶ ನೀಡುವುದಿಲ್ಲ” ಎಂದು ಎಚ್ಚರಿಕೆ ನೀಡಿದೆ.

- Advertisement -

​ಮಾಹಿತಿ ಹಂಚಿಕೆ ಮತ್ತು ಮಾರುಕಟ್ಟೆ ಪ್ರಭುತ್ವಕ್ಕೆ ಸಂಬಂಧಿಸಿದಂತೆ ಜನವರಿ 2025ರ ಎನ್‌ಸಿಎಲ್‌ಎಟಿ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠ, ಅಮೆರಿಕದ ದಿಗ್ಗಜ ತಂತ್ರಜ್ಞಾನ ಕಂಪನಿಗೆ ಕಟು ಶಬ್ದಗಳಲ್ಲಿ ಎಚ್ಚರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವಿಚಾರಣೆಯ ವೇಳೆ ಮುಖ್ಯ ನ್ಯಾಯಮೂರ್ತಿಗಳು, “ನಮ್ಮ ದೇಶದ ಜನರ ಗೌಪ್ಯತೆಯ ಜೊತೆ ಚೆಲ್ಲಾಟವಾಡಲು ನಾವು ಬಿಡುವುದಿಲ್ಲ. ನಮ್ಮ ಡೇಟಾದ ಒಂದೇ ಒಂದು ಅಂಕಿಯನ್ನೂ ನೀವು ಹಂಚಿಕೊಳ್ಳುವಂತಿಲ್ಲ. ಒಂದು ವೇಳೆ ದೇಶದ ಕಾನೂನುಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ, ನೀವು ಭಾರತವನ್ನು ತೊರೆಯಬಹುದು” ಎಂದು
ಹೇಳಿದರು.

ಬಳಕೆದಾರರ ಒಪ್ಪಿಗೆಯ ಬಗ್ಗೆ ಮೆಟಾ ನೀಡಿದ ಸಮಜಾಯಿಷಿಯನ್ನು ತಳ್ಳಿಹಾಕಿದ ಕೋರ್ಟ್, “ಇದು ಸಿಂಹ ಮತ್ತು ಕುರಿಮರಿಯ ನಡುವಿನ ಆಯ್ಕೆಯಂತಿದೆ. ಬೀದಿಬದಿಯ ವ್ಯಾಪಾರಿಗಳು ಮತ್ತು ಗ್ರಾಮೀಣ ಭಾಗದ ಜನರಿಗೆ ನಿಮ್ಮ ಸಂಕೀರ್ಣವಾದ ತಾಂತ್ರಿಕ ನಿಯಮಗಳು ಅರ್ಥವಾಗುವುದಿಲ್ಲ. ನೀವು ಮಾಹಿತಿ ಹಂಚಿಕೊಳ್ಳುವುದಿಲ್ಲ ಎಂದು ಲಿಖಿತ ಮುಚ್ಚಳಿಕೆ ನೀಡಿ, ಇಲ್ಲವೇ ನಾವು ನಿಮ್ಮ ಅರ್ಜಿಯನ್ನು ವಜಾಗೊಳಿಸುತ್ತೇವೆ” ಎಂದು ಎಚ್ಚರಿಸಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ| ₹100 ತೆರಿಗೆಯಲ್ಲಿ ₹5 ಕೂಡ ವಾಪಸು ಸಿಗ್ತಿಲ್ಲ; ರಾಜ್ಯಕ್ಕೆ ಮೋದಿ ಮುಂದುವರೆಸಿದ ಅಗಾಧ ಅನ್ಯಾಯ!

ಬಳಕೆದಾರರ ಖಾಸಗಿ ಮಾಹಿತಿಯನ್ನು ವಾಣಿಜ್ಯ ಲಾಭಕ್ಕಾಗಿ ಬಳಸಲಾಗುತ್ತಿದೆ ಎಂಬುದಕ್ಕೆ ಉದಾಹರಣೆ ನೀಡಿದ ಪೀಠ, “ಒಬ್ಬ ವ್ಯಕ್ತಿ ವೈದ್ಯರೊಂದಿಗೆ ಖಾಸಗಿಯಾಗಿ ಚಾಟ್ ಮಾಡಿದ ಕೆಲವೇ ಕ್ಷಣಗಳಲ್ಲಿ, ಅವರಿಗೆ ಔಷಧಿಯ ಜಾಹೀರಾತುಗಳು ಮೊಬೈಲ್‌ನಲ್ಲಿ ಕಾಣಿಸಿಕೊಳ್ಳುತ್ತವೆ. ಇದರರ್ಥ ನೀವು ಜನರ ವರ್ತನೆಯನ್ನು ಟ್ರ್ಯಾಕ್ ಮಾಡುತ್ತಿದ್ದೀರಿ ಮತ್ತು ಅದನ್ನು ಹಣಗಳಿಸಲು ಬಳಸುತ್ತಿದ್ದೀರಿ” ಎಂದು ಆತಂಕ ವ್ಯಕ್ತಪಡಿಸಿತು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಸಿಸಿಐ ಪರ ವಕೀಲರು ವಾದ ಮಂಡಿಸಿ, “ಮಾಹಿತಿಯು ಎನ್‌ಕ್ರಿಪ್ಟ್ ಆಗಿದ್ದರೂ, ಮೆಟಾ ಡೇಟಾವನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಲಾಗುತ್ತಿದೆ. ಡಿಪಿಡಿಪಿ ಕಾಯ್ದೆಯಡಿ ಬಳಕೆದಾರರ ಹಕ್ಕುಗಳನ್ನು ರಕ್ಷಿಸಬೇಕಿದೆ” ಎಂದು ಪ್ರತಿಪಾದಿಸಿದರು.

ಈ ಪ್ರಕರಣವನ್ನು ಮೂವರು ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಲಾಗಿದ್ದು, ಜನವರಿ 9 ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದ್ದು, ಡೇಟಾ ಗೌಪ್ಯತೆ ಮತ್ತು ವರ್ತನೆಯ ವಿಶ್ಲೇಷಣೆಯ ಬಗ್ಗೆ ವಿವರವಾದ ಉತ್ತರ ನೀಡಲು ಕೋರ್ಟ್ ಸೂಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...