ನೋಟಿಸ್ ನೀಡದೇ ಬಿಹಾರದ ಮತದಾರರನ್ನು ಪಟ್ಟಿಯಿಂದ ತೆಗೆಯುವುದಿಲ್ಲ: ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

Date:

ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್)ಗೆ ಸಂಬಂಧಿಸಿದಂತೆ ಹೊಸ ಅಫಿಡವಿಟ್‌ ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದೆ. ಮತದಾರರಿಗೆ ಪೂರ್ವ ಸೂಚನೆ ನೀಡದೆ ಮತ್ತು ಅವರ ಅಹವಾಲು ಹೇಳಿಕೊಳ್ಳಲು ಅವಕಾಶ ನೀಡದೆ ಯಾವುದೇ ಹೆಸರನ್ನು ಪಟ್ಟಿಯಿಂದ ಅಳಿಸುವುದಿಲ್ಲ ಎಂದು ಆಯೋಗವು ಅಫಿಡವಿಟ್‌ನಲ್ಲಿ ತಿಳಿಸಿದೆ.

- Advertisement -

ಪರಿಷ್ಕರಣೆಗಳನ್ನು ಪ್ರಶ್ನಿಸಿರುವ ಅರ್ಜಿದಾರರು ನ್ಯಾಯಾಲಯವನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿರುವ ಆಯೋಗ, ಈ ಪ್ರಯತ್ನಕ್ಕಾಗಿ ಭಾರೀ ದಂಡವನ್ನು ವಿಧಿಸುವಂತೆ ಸರ್ವೋಚ್ಚ ನ್ಯಾಯಾಲಯವನ್ನು ಆಗ್ರಹಿಸಿದೆ. ಆದಾಗ್ಯೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನೈಸರ್ಗಿಕ ನ್ಯಾಯದ ತತ್ವಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಭರವಸೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಸ್‌ಐಆರ್‌ ಅನ್ನು ತೀವ್ರವಾಗಿ ವಿರೋಧಿಸಿರುವ ಪ್ರತಿಪಕ್ಷಗಳು ಇದು ಬಿಜೆಪಿ ಆಯೋಜಿಸಿರುವ ‘ಮತಗಳ್ಳತನ’ ಎಂದು ಬಣ್ಣಿಸಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್‌ಎಸ್‌ಎಸ್‌ ಕಗ್ಗಂಟು?

ಅರ್ಹ ಮತದಾರರು ಪಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೈಬಿಡಲಾಗಿರುವ ಮತದಾರರು ದಾಖಲಾತಿ ಅಗತ್ಯಗಳನ್ನು ಪೂರೈಸಲು ಮತ್ತು ತಮ್ಮ ಹೆಸರನ್ನು ಮತದಾರರ ಪಟ್ಟಿಗಳಲ್ಲಿ ಸೇರಿಸಿಕೊಳ್ಳಲು ಎರಡು ಹಂತಗಳ ಮೇಲ್ಮನವಿ ಕಾರ್ಯವಿಧಾನವು ಜಾರಿಯಲ್ಲಿದೆ ಎಂದು ಆಯೋಗವು ತಿಳಿಸಿದೆ. ಬಿಹಾರದ 7.89 ಕೋಟಿ ಮತದಾರರ ಪೈಕಿ 7.24 ಕೋಟಿಗೂ ಹೆಚ್ಚಿನ ಮತದಾರರು ತಮ್ಮ ಎಣಿಕೆ ನಮೂನೆಗಳನ್ನು ಸಲ್ಲಿಸಿದ್ದಾರೆ ಎಂದೂ ಅದು ಹೇಳಿದೆ.

ಮತದಾರರ ಪಟ್ಟಿಯಲ್ಲಿ ವ್ಯಕ್ತಿಗಳ ಹೆಸರುಗಳನ್ನು ಸೇರಿಸದಿರಲು ಕಾರಣಗಳನ್ನು ಹಂಚಿಕೊಳ್ಳುವುದನ್ನು ಅಥವಾ ಪ್ರಕಟಿಸುವುದನ್ನು ಯಾವುದೇ ಕಾನೂನು ಕಡ್ಡಾಯಗೊಳಿಸಿಲ್ಲ ಮತ್ತು ಅರ್ಜಿದಾರರು ಅಳಿಸಲಾದ ಮತದಾರರ ಹೆಸರುಗಳ ಪಟ್ಟಿಯನ್ನು ತಮ್ಮ ಹಕ್ಕಿನ ವಿಷಯವಾಗಿ ಪಡೆಯಲು ಸಾಧ್ಯವಿಲ್ಲ ಎಂದೂ ಚುನಾವಣಾ ಆಯೋಗವು ತನ್ನ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಈ ವರ್ಷದ ಅಕ್ಟೋಬರ್ ಅಥವಾ ನವಂಬರ್‌ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...