‘ಶಾಂತಿ ಮರುಸ್ಥಾಪನೆಗಾಗಿ ಒಗ್ಗಟ್ಟಿನ ಕೆಲಸ’: ಯುಎಇ ಅಧ್ಯಕ್ಷರೊಂದಿಗೆ ಮೋದಿ ಮಾತುಕತೆ

Date:

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದು, ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರವನ್ನು ಖಾತ್ರಿಪಡಿಸಿಕೊಳ್ಳುವ ಕುರಿತು ಮಾತುಕತೆಗಳು ನಡೆದಿವೆ.

- Advertisement -

ತಮ್ಮ ಸಂಭಾಷಣೆಯ ಸಂದರ್ಭದಲ್ಲಿ, ಮೋದಿ ಅವರು ಗಲ್ಫ್ ರಾಷ್ಟ್ರದ ಮೇಲಿನ ಎಲ್ಲ ದಾಳಿಗಳನ್ನು ಬಲವಾಗಿ ಖಂಡಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಭದ್ರತೆ ಹಾಗೂ ಸ್ಥಿರತೆಯನ್ನು ಶೀಘ್ರವಾಗಿ ಮರುಸ್ಥಾಪಿಸಲು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ಯುಎಇ ನಾಯಕರೊಂದಿಗೆ ಅವರು ಸಹಮತ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಮಾತುಕತೆಯ ಕುರಿತು ಟ್ವೀಟ್‌ ಮಾಡಿರುವ ಮೋದಿ, “ನನ್ನ ಸಹೋದರ, ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿದೆ. ಈದ್ ಶುಭಾಶಯ ಕೋರಿದೆ. ನಾವು ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದೇವೆ. ಯುಎಇ ಮೇಲೆ ನಡೆದ ದಾಳಿಗಳು ಅಮಾಯಕ ಪ್ರಾಣಹಾನಿ ಮತ್ತು ನಾಗರಿಕ ಮೂಲಸೌಕರ್ಯಗಳಿಗೆ ಹಾನಿ ಉಂಟುಮಾಡಿವೆ. ಇಂತಹ ದಾಳಿಗಳನ್ನು ಭಾರತವು ಬಲವಾಗಿ ಖಂಡಿಸುತ್ತದೆ ಎಂದು ನಾನು ಪುನರುಚ್ಚರಿಸಿದ್ದೇನೆ” ಎಂದು ಬರೆದಿದ್ದಾರೆ.

ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸುರಕ್ಷಿತ ಮತ್ತು ಮುಕ್ತ ಸಂಚಾರದ ಪ್ರಾಮುಖ್ಯತೆಯ ಬಗ್ಗೆ ತಾವಿಬ್ಬರೂ ಒಪ್ಪಿಕೊಂಡಿರುವುದಾಗಿ ಮೋದಿ ತಿಳಿಸಿದ್ದಾರೆ. “ಈ ಪ್ರದೇಶದಲ್ಲಿ ಶಾಂತಿ, ಭದ್ರತೆ ಹಾಗೂ ಸ್ಥಿರತೆಯ ಶೀಘ್ರ ಮರುಸ್ಥಾಪನೆಗಾಗಿ ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ- ಪಾಕ್ ಯುದ್ಧನೌಕೆಗಳು ಢಿಕ್ಕಿ ಹೊಡೆದ ಕತೆಯೇನು?

ಅರಬ್ಬಿ ಸಮುದ್ರದ ಉತ್ತರ ಭಾಗದ ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ ಮತ್ತು ಪಾಕಿಸ್ತಾನದ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...

ಭಾರತದ ಮೇಲೆ ಅಮೆರಿಕದ ಸುಂಕದ ಬರೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಸುವುದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತ...