ವಿಶ್ವಕಪ್ – ಮಹಿಳಾ ಚಾಂಪಿಯನ್ಸ್‌ | ‘ಪುರುಷರ ತಂಡ ಎಂದಿಗೂ ಹೀಗೆ ಮಾಡಿಲ್ಲ’ ಎಂದಿದ್ದೇಕೆ ಆರ್ ಅಶ್ವಿನ್?

Date:

ಭಾನುವಾರ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡವು, ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ದೇಶಾದ್ಯಂತ ಭಾರೀ ಮೆಚ್ಚುಗೆ ಮತ್ತು ಅಭಿನಂದನೆಯ ಮಹಾಪೂರವೇ ಹರಿಯುತ್ತಿದೆ. ಮಹಿಳಾ ತಂಡವು ಟ್ರೋಫಿ ಗೆದ್ದ ಐತಿಹಾಸಿಕ ಸಮಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ದಿಗ್ಗಜರಾದ ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ ಹಾಗೂ ಅಂಜುಮ್ ಚೋಪ್ರಾ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಹಾಜರಿದ್ದರು. ಕ್ರೀಡಾಂಗಣದಲ್ಲಿ ನಡೆದ ವಿಜಯೋತ್ಸವ ಮೆರವಣಿಗೆ ವೇಳೆ, ಹರ್ಮನ್‌ಪ್ರೀತ್ ಮತ್ತು ತಂಡವು ಮಿಥಾಲಿ ಮತ್ತು ಜೂಲನ್‌ಗೆ ಟ್ರೋಫಿಯನ್ನು ಹಸ್ತಾಂತರಿಸಿತು, ಎಲ್ಲರೂ ಭಾವುಕರಾದರು. ಈ ಕ್ಷಣವನ್ನು ಪುರುಷರ ತಂಡದ ಸ್ಟಾರ್ ಬೌಲರ್ ಆರ್‌ ಆಶ್ವಿನ್‌ ಶ್ಲಾಘಿಸಿದ್ದಾರೆ. ‘ಪುರುಷರ ತಂಡ ಎಂದಿಗೂ ಹೀಗೆ ಮಾಡಲಿಲ್ಲ’ ಎಂದಿದ್ದಾರೆ.

- Advertisement -

“ಭಾನುವಾರ, ಭಾರತೀಯ ಮಹಿಳಾ ತಂಡವು ಮಿಥಾಲಿ ರಾಜ್‌ ಅವರಿಗೆ ಟ್ರೋಫಿ ನೀಡಿ ಸಂಭ್ರಮಿಸಿತು. ಅವರು ಯಾಕೆ ಹಾಗೆ ಮಾಡಿದರು? ತಂಡವು ನಡೆಯುನ್ನು ನಾನು ಅಭಿನಂದಿಸುತ್ತೇನೆ. ಭಾರತೀಯ ಪುರುಷರ ತಂಡ ಎಂದಿಗೂ ಈ ರೀತಿ ಮಾಡಿಲ್ಲ. ಕೆಲವೊಮ್ಮೆ ಮಾಧ್ಯಮಗಳ ಮುಂದೆ, ನಾವು ‘ಈ ವ್ಯಕ್ತಿ ಇದನ್ನು ಮಾಡಿದರು’ ಅಥವಾ ‘ಆ ವ್ಯಕ್ತಿ ಅದನ್ನು ಮಾಡಿದರು’ ಎಂದೆಲ್ಲ ಹೇಳುತ್ತೇವೆ, ಆರೋಪಿಸುತ್ತೇವೆ. ಆದರೆ, ಹಿಂದಿನ ತಂಡಕ್ಎಕ ನಾವು ನಿಜವಾದ ಮನ್ನಣೆ ನೀಡುವುದನ್ನು ನಾನು ಹೆಚ್ಚಾಗಿ ನೋಡಿಲ್ಲ. ಬದಲಾಗಿ, ‘ನನ್ನ ಕಾಲದ ತಂಡ ಉತ್ತಮವಾಗಿದೆ’ ಮತ್ತು ‘ನಿಮ್ಮ ಕಾಲದ ತಂಡ ಅಷ್ಟು ಉತ್ತಮವಾಗಿರಲಿಲ್ಲ’ ಎಂದು ದೂಷಿಸಲಾಗುತ್ತದೆ. ನಾನು ಅಂತಹ ಬಹಳಷ್ಟು ಚರ್ಚೆಗಳನ್ನು ನೋಡಿದ್ದೇನೆ,” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

“ಈ ಮಹಿಳಾ ತಂಡವು ಮಾಜಿ ಆಟಗಾರರಾದ ಅಂಜುಮ್ ಚೋಪ್ರಾ, ಮಿಥಾಲಿ ರಾಜ್ ಅವರಿಗೆ ಟ್ರೋಫಿಯನ್ನು ಹಸ್ತಾಂತರಿಸುವ ಮೂಲಕ, ಅವರು ಒಂದು ಕಾಲದಲ್ಲಿ ನೆಟ್ಟು, ಪೋಷಿಸಿದ ಬೀಜಗಳು ಇಂದು ವಿಜೇತರಾಗಿ ಎತ್ತರದ ಸ್ಥಾನದಲ್ಲಿ ನಿಂತಿವೆ ಎಂಬುದನ್ನು ಸಂಭ್ರಮಿಸಲು ಅವಕಾಶ ಮಾಡಿಕೊಟ್ಟರು. ಅದು ಎಂಥಹ ಕ್ಷಣ. ನಂಬಲಾಗದಷ್ಟು ಅತ್ಯುತ್ತಮ ಗಳಿಗೆಯೆಂದು ನಾನು ಭಾವಿಸಿದ್ದೇನೆ. ಭಾರತೀಯ ಮಹಿಳೆಯರು ಸಾಧಿಸಿದ ಈ ಗೆಲುವು – ಇಂದಿನದ್ದು ಮಾತ್ರವಲ್ಲ, 25 ವರ್ಷಗಳ ಶ್ರಮದ ಫಲಿತಾಂಶ” ಎಂದು ಅಶ್ವಿನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...