ಜಗತ್ತು ಆಪರೇಷನ್ ಸಿಂಧೂರದಿಂದ ಕಲಿಯಬೇಕಿದೆ, ಸದ್ಯ ಅಹಂನಿಂದಾಗಿ ಯುದ್ಧಗಳು ನಡೆಯುತ್ತಿದೆ: ವಾಯುಪಡೆಯ ಮುಖ್ಯಸ್ಥ

Date:

ಸಂಘರ್ಷವನ್ನು ಸಕಾಲಿಕವಾಗಿ ಹೇಗೆ ಕೊನೆಗೊಳಿಸಬೇಕು ಎಂಬುದನ್ನು ಜಗತ್ತು ಆಪರೇಷನ್ ಸಿಂಧೂರದಿಂದ ಕಲಿಯಬೇಕು. ಇತರ ದೇಶಗಳಲ್ಲಿ ಹಲವು ವರ್ಷಗಳಿಂದ ಯುದ್ಧಗಳು ನಡೆಯುತ್ತಿದೆ. ಅವುಗಳು ವಸ್ತುನಿಷ್ಠತೆಯನ್ನು ಹೊಂದಿಲ್ಲ. ಅಹಂನಿಂದಾಗಿ ಯುದ್ಧಗಳು ನಡೆಯುತ್ತಿದೆ ಎಂದು ಭಾರತೀಯ ವಾಯುಪಡೆಯ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ಹೇಳಿದ್ದಾರೆ.

- Advertisement -

ಭಾರತ ಶಕ್ತಿಯ ರಕ್ಷಣಾ ಚಿಂತಕರ ಚಾವಡಿ ಆಯೋಜಿಸಿದ್ದ ಭಾರತ ರಕ್ಷಣಾ ಸಮಾವೇಶ 2025ರಲ್ಲಿ ಮಾತನಾಡಿದ ಅವರು, “ಆಪರೇಷನ್ ಸಿಂಧೂರದಿಂದ ಸಂಘರ್ಷವನ್ನು ಯಾವ ರೀತಿ ಕೊನೆಗೊಳಿಸಬೇಕು ಎಂಬುದನ್ನು ಕಲಿಯಬಹುದು. ಗುರಿಯ ಆಯ್ಕೆ ಮತ್ತು ನಿರ್ವಹಣೆ ವಿಚಾರದಲ್ಲೇ ಜಗತ್ತು ಹಾಳಾಗುತ್ತಿದೆ. ಇತರೆಡೆ ತಮ್ಮದೇ ಆದ ಉದ್ದೇಶಗಳನ್ನು ಮರೆತುಬಿಡಲಾಗುತ್ತಿದೆ. ಯಾವ ಉದ್ದೇಶದಿಂದ, ಹೇಗೆ ಯುದ್ಧ ಪ್ರಾರಂಭವಾಯಿತು, ಈಗ ಎಲ್ಲಿ ತಲುಪಿದ್ದಾರೆ ಎಂಬುದನ್ನು ಮರೆತುಬಿಡುತ್ತಾರೆ. ಯುದ್ಧ ಎಂಬುದು ಅಹಂ ಅಥವಾ ಸ್ವಾಭಿಮಾನದ ಸಂಗತಿಯಾಗಿದೆ” ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ್ – ಇನ್ನೂ ಉತ್ತರಿಸದ ಪ್ರಶ್ನೆಗಳು

“ಆದರೆ ಆಪರೇಷನ್ ಸಿಂಧೂರ ಸಮಯದಲ್ಲಿ ಹಾಗಾಗಲಿಲ್ಲ. ಈ ಸಮಯದಲ್ಲಿ ಭಾರತೀಯ ಸೇನೆ ಮತ್ತು ವಾಯುಪಡೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿತು. ಮುಂದಿನ ನಾಲ್ಕು ದಿನಗಳಲ್ಲಿ ಸಂಘರ್ಷ ನಡೆಯಿತು. ಪಾಕಿಸ್ತಾನದ ಕಮಾಂಡರ್‌ಗಳು ಅಂತಿಮವಾಗಿ ಮೇ 10ರಂದು ಕದನ ವಿರಾಮಕ್ಕಾಗಿ ಮನವಿ ಮಾಡಿದರು. ಭಾರತ ಒಪ್ಪಿಕೊಂಡಿತು. ಸಂಘರ್ಷ ಕೊನೆಗೊಂಡಿತು” ಎಂದು ನೆನಪಿಸಿಕೊಂಡರು.

“ನಮ್ಮ ಉದ್ದೇಶ ಬಹಳ ಸ್ಪಷ್ಟವಾಗಿತ್ತು ಮತ್ತು ಅದನ್ನು ಮೊದಲ ದಿನವೇ ಸಾಧಿಸಲಾಯಿತು. ನಾವು ಮೊದಲ ದಿನವೇ ಕದನ ವಿರಾಮಕ್ಕಾಗಿ ಮಾತನಾಡಿದ್ದೆವು, ಆದರೆ ಅದನ್ನು ಒಪ್ಪಲಿಲ್ಲ. ಅದಾದ ಬಳಿಕ ಎದುರಾಳಿ(ಪಾಕಿಸ್ತಾನ) ಬಂದು ನಿಲ್ಲಿಸಲು ಬಯಸುವುದಾಗಿ ಹೇಳಿತು. ಅದು ಉತ್ತಮ ನಿರ್ಧಾರ ಎಂದು ನಾನು ಭಾವಿಸುತ್ತೇನೆ” ಎಂದರು.

“ಸಂಘರ್ಷವನ್ನು ಸಕಾಲಿಕವಾಗಿ ನಿಲ್ಲಿಸದಿದ್ದರೆ, ಅದು ಅಜ್ಞಾತ ದಿಕ್ಕನ್ನು ತೆಗೆದುಕೊಳ್ಳಬಹುದಿತ್ತು. ಮೂರುವರೆ ದಿನಗಳಲ್ಲಿ, ಸುಮಾರು 85 ಗಂಟೆಗಳಲ್ಲಿ, ನಾವು ಸಂಘರ್ಷವನ್ನು ಕೊನೆಗೊಳಿಸಲು ಸಾಧ್ಯವಾಯಿತು. ಅದರ ನಂತರ ಅದು ಎಲ್ಲಿಗೆ ಹೋಗುತ್ತಿತ್ತು ಎಂದು ನಮಗೆ ತಿಳಿದಿಲ್ಲ. ಅದು ಜನರು ಅರಿತುಕೊಂಡಿಲ್ಲ” ಎಂದು ಹೇಳಿದರು.

22 ಭಾರತೀಯರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರು ಹತರಾಗಿದ್ದಾರೆ. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದ ಮಾಡಿಕೊಂಡಿರುವುದಾಗಿ ಘೋಷಿಸಿದ್ದಾರೆ. ಅಮೆರಿಕದ ಮಧ್ಯಸ್ಥಿಕೆ, ವ್ಯಾಪಾರ ನಿಲ್ಲಿಸುವ ಬೆದರಿಕೆಯಿಂದಾಗಿ ಭಾರತ ಯುದ್ಧ ನಿಲ್ಲಿಸಿದೆ ಎಂದು ಹೇಳಿಕೊಳ್ಳುತ್ತಾ ಬರುತ್ತಿದ್ದಾರೆ. ಈ ವಿಚಾರವನ್ನು ವಿಪಕ್ಷಗಳು ಟೀಕಿಸುತ್ತಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಈ ಬಗ್ಗೆ ಸ್ಪಷ್ಟನೆ ನೀಡದಿರುವುದು ಟೀಕೆಗೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...