‘ಕೊಲೆಗಿಂತಲೂ ಹೇಯ’: ಮಗುವಿನ ಮೇಲಿನ ದೌರ್ಜನ್ಯ ಪ್ರಕರಣ; ಮರಣದಂಡನೆ ಎತ್ತಿಹಿಡಿದ ಹೈಕೋರ್ಟ್

Date:

ಆರರಿಂದ ಎಂಟು ವರ್ಷದೊಳಗಿನ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ವಿಶೇಷ ಪೋಕ್ಸೋ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. ಪ್ರಾಸಿಕ್ಯೂಷನ್ ತನ್ನ ವಾದವನ್ನು ಯಾವುದೇ ಸಂಶಯಕ್ಕೆ ಆಸ್ಪದವಿಲ್ಲದಂತೆ ಸಾಬೀತುಪಡಿಸಿದೆ ಎಂದಿರುವ ಕೋರ್ಟ್‌, ಮಕ್ಕಳ ಮೇಲಿನ ಇಂತಹ ಭೀಕರ ಕೃತ್ಯಗಳು ಕೊಲೆಗಿಂತಲೂ ಅತ್ಯಂತ ಹೇಯವಾದವು ಎಂದು ಹೇಳಿದೆ.

- Advertisement -

ಅಪರಾಧಿಯು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ಹೈಕೋರ್ಟ್‌ನ ದ್ವಿಸದಸ್ಯ ಪೀಠವು, “ಕಾಲಕ್ರಮೇಣ ಸಂತ್ರಸ್ತ ಬಾಲಕಿಯರ ಹೇಳಿಕೆಗಳಲ್ಲಿ ಕಂಡುಬಂದ ಸಣ್ಣಪುಟ್ಟ ವ್ಯತ್ಯಾಸಗಳನ್ನು ಹೊರತುಪಡಿಸಿದರೆ, ಮೂವರೂ ನೀಡಿದ ಸಾಕ್ಷ್ಯಗಳು ನೈಸರ್ಗಿಕ, ಸ್ಥಿರ ಹಾಗೂ ನಂಬಲರ್ಹವಾಗಿವೆ” ಎಂದು ಹೇಳಿದೆ. ಅಪರಾಧಿಗೆ ಪೋಕ್ಸೋ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ನ್ಯಾಯಾಲಯವು ದೃಢಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಾಸಿಕ್ಯೂಷನ್ ವಿವರಗಳ ಪ್ರಕಾರ, ಅಪರಾಧಿಯು ಸುಮಾರು ಒಂದು ವರ್ಷದ ಅವಧಿಯಲ್ಲಿ ಪ್ರತಿ ಶನಿವಾರ ಮಕ್ಕಳನ್ನು ಆಮಿಷ ಒಡ್ಡಿ ಮನೆಗೆ ಕರೆಯಿಸಿಕೊಳ್ಳುತ್ತಿದ್ದನು. ಬಳಿಕ ಅವರಿಗೆ ಚಾಕು ತೋರಿಸಿ ಬೆದರಿಕೆ ಹಾಕಿ, ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಸಂತ್ರಸ್ತ ಮಗುವೊಂದು ಈ ಘಟನೆಯ ಬಗ್ಗೆ ಮತ್ತೊಂದು ಮಗುವಿನೊಂದಿಗೆ ಮಾತನಾಡುತ್ತಿರುವುದನ್ನು ತಾಯಿಯೊಬ್ಬರು ಕೇಳಿಸಿಕೊಂಡಾಗ ಈ ಇಡೀ ಭೀಕರ ಕೃತ್ಯ ಬೆಳಕಿಗೆ ಬಂದಿತ್ತು. ತಕ್ಷಣವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

ತನಗೆ ವಿಧಿಸಲಾದ ಶಿಕ್ಷೆಯನ್ನು ಪ್ರಶ್ನಿಸಿ ಅಪರಾಧಿಯು ಹೈಕೋರ್ಟ್‌ ಮೆಟ್ಟಿಲೇರಿದ್ದನು. ವಿಚಾರಣೆ ವೇಳೆ, ಮ್ಯಾಜಿಸ್ಟ್ರೇಟ್ ಎದುರು ಮಕ್ಕಳು ನೀಡಿದ ಹೇಳಿಕೆಗೂ ಮತ್ತು ವಿಚಾರಣೆಯ ವೇಳೆ ನೀಡಿದ ಸಾಕ್ಷ್ಯಕ್ಕೂ ಸಣ್ಣಪುಟ್ಟ ವ್ಯತ್ಯಾಸಗಳಿವೆ ಎಂಬ ರಕ್ಷಣಾತ್ಮಕ ವಾದವನ್ನು ಹೈಕೋರ್ಟ್ ತಿರಸ್ಕರಿಸಿದೆ. ಮಕ್ಕಳ ಸಾಕ್ಷ್ಯಗಳನ್ನು ಪರಿಶೀಲಿಸುವಾಗ ನ್ಯಾಯಾಲಯಗಳು ಸಣ್ಣಪುಟ್ಟ ವ್ಯತ್ಯಾಸಗಳಿಗಿಂತ ಮುಖ್ಯವಾಗಿ ಗಂಭೀರ ಆರೋಪಗಳತ್ತ ಗಮನ ಹರಿಸಬೇಕು ಎಂದು ಪೀಠ ಹೇಳಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ದೀರ್ಘಕಾಲೀನ ಪರಿಣಾಮಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನ್ಯಾಯಪೀಠ, “ಮಗುವಿನ ಮೇಲಿನ ಲೈಂಗಿಕ ದೌರ್ಜನ್ಯವು ಆ ಮಗುವಿನ ಘನತೆ ಮತ್ತು ಆತ್ಮದ ಮೇಲೆ ಎಸಗುವ ಅಪರಾಧವಾಗಿದೆ. ಇಂತಹ ಅಪರಾಧಗಳಿಗೆ ಕೊಲೆ ಪ್ರಕರಣಗಳಿಗಿಂತಲೂ ಕಠಿಣವಾದ ಶಿಕ್ಷೆ ಸಿಗಬೇಕು. ಏಕೆಂದರೆ ಇಂತಹ ಘಟನೆಗಳಲ್ಲಿ ದೇಹದ ಜೀವ ಉಳಿಯುತ್ತದೆ, ಆದರೆ ಮಗುವಿನ ಆತ್ಮವೇ ಸತ್ತುಹೋಗಿರುತ್ತದೆ,” ಎಂದು ಮದ್ರಾಸ್ ಹೈಕೋರ್ಟ್ ಕಟುವಾಗಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...