ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಪ್ರಧಾನಿಗೆ ಪತ್ರ ಬರೆದ ಬಜರಂಗ್ ಪೂನಿಯ

Date:

ಬ್ರಿಜ್ ಭೂಷಣ್ ಅವರ ನಿಕಟವರ್ತಿ ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥರನ್ನಾಗಿ ನೇಮಿಸಿರುವುದನ್ನು ವಿರೋಧಿಸಿ ಭಾರತದ ಸ್ಟಾರ್ ಕುಸ್ತಿಪಟು ಬಜರಂಗ್ ಪೂನಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿ ಪತ್ರ ಬರೆದಿದ್ದಾರೆ.

“ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಗೆ ಹಿಂದಿರುಗಿಸುತ್ತಿದ್ದೇನೆ. ಈ ಟ್ವೀಟ್ ಈ ಕ್ರಮದ ಬಗ್ಗೆ ನನ್ನ ಅಧಿಕೃತ ಹೇಳಿಕೆಯಾಗಿದೆ” ಎಂದು ಅವರು ವ್ಯಕ್ತಪಡಿಸಿದ್ದಾರೆ.

ಗುರುವಾರ, ಡಿಸೆಂಬರ್ 21 ರಂದು ನವದೆಹಲಿಯಲ್ಲಿ ನಡೆದ ಬಹುನಿರೀಕ್ಷಿತ ಭಾರತದ ಕುಸ್ತಿ ಫಡರೇಷನ್ ಚುನಾವಣೆಯಲ್ಲಿ ಸಂಜಯ್ ಸಿಂಗ್ ಮಾಜಿ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೋರಾನ್ ಅವರನ್ನು 40 ಮತಗಳಿಂದ 7 ಗೆ ಸೋಲಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಘಟನೆಯ ನಂತರ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥರನ್ನಾಗಿ ನೇಮಿಸಿರುವುದನ್ನು ಖಂಡಿಸಿ ಕ್ರೀಡೆಯನ್ನು ತೊರೆಯುವುದಾಗಿ ಪ್ರಕಟಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ನಾವು ನಮ್ಮ ಹೃದಯದಿಂದ ಹೋರಾಡಿದ್ದೇವೆ ಆದರೆ ಬ್ರಿಜ್ ಭೂಷಣ್ ಅವರಂತಹ ವ್ಯಕ್ತಿ, ಅವರ ವ್ಯಾಪಾರ ಪಾಲುದಾರ ಮತ್ತು ನಿಕಟ ಸಹಾಯಕರು ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾದರೆ, ನಾನು ಕುಸ್ತಿಯನ್ನು ತ್ಯಜಿಸುತ್ತೇನೆ” ಎಂದು ಸಾಕ್ಷಿ ಹೇಳಿದ್ದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಸಾಕ್ಷಿ ಮಲಿಕ್ ಅವರು ತೀವ್ರ ಸಂಕಟ ವ್ಯಕ್ತಪಡಿಸಿದ್ದರು.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶದಿಂದಾಗಿ ಆಗಸ್ಟ್ 12 ರಂದು ಮೂಲತಃ ನಿಗದಿಯಾಗಿದ್ದ ಡಬ್ಲ್ಯುಎಫ್‌ಐ ಚುನಾವಣೆಯನ್ನು ಮುಂದೂಡಲಾಯಿತು. ನಂತರ ತಡೆಯಾಜ್ಞೆಯನ್ನು ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಲಾಯಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42...

ರೈತ ಹೋರಾಟ | ಸರ್ಕಾರದ ದಮನಕ್ಕೆ ಬಗ್ಗದ ‘ದೆಹಲಿ ಚಲೋ’; ಈವರೆಗೆ 6 ರೈತರು ಸಾವು

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ರೈತ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ...

ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ...

ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ....