ಲೈಂಗಿಕ ಕಿರುಕುಳದ ಆರೋಪ; ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳಿಂದ ಪೊಲೀಸ್ ದೂರು

Date:

  • ಲೈಂಗಿಕ ಕಿರುಕುಳದ ಆರೋಪದ ವರದಿಯನ್ನು ಬಹಿರಂಗಪಡಿಸುವಂತೆ ಕುಸ್ತಿಪಟುಗಳಿಂದ ಒತ್ತಾಯ
  • ನವದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಕುಸ್ತಿಪಟುಗಳು

ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ನವದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರಿಗೂ ದೂರು ಸಲ್ಲಿಸಲಾಗಿದ್ದು, ‘ಅಪ್ರಾಪ್ತ ವಯಸ್ಕರು ಸೇರಿದಂತೆ ಹಲವು ಮಹಿಳೆಯರು ದೂರು ದಾಖಲಿಸಿದ್ದಾರೆ. ಆರೋಪಿಯು ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಮಲಿವಾಲ್ ಅವರು, ಉಪ ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಕುಸ್ತಿಪಟುಗಳು ಭಾನುವಾರ ನವದೆಹಲಿಯ ಜಂತರ್ ಮಂತರ್‌ನಲ್ಲಿ ಅವರ ವಿರುದ್ಧ ಧರಣಿ ಸತ್ಯಾಗ್ರಹವನ್ನು ಪುನರಾರಂಭಿಸಲು ಸಿದ್ಧರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರದ ಶಿಂಧೆ ಸರ್ಕಾರ 15 ದಿನದಲ್ಲಿ ಪತನ: ಸಂಜಯ್‌ ರಾವುತ್

“ನಾವು ನಮ್ಮ ಪ್ರತಿಭಟನೆಯನ್ನು ಕ್ರೀಡಾ ಸಚಿವಾಲಯಕ್ಕೆ ಸಲ್ಲಿಸಿದಾಗಿನಿಂದ ಯಾವುದೇ ಕ್ರಮ ತೆಗೆದುಕೊಳ್ಳದ ಕಾರಣ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

“ನಾವು ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದ್ದೇವೆ ಮತ್ತು ಎಫ್‌ಐಆರ್ ದಾಖಲಿಸುವ ಮೊದಲು ವಿಚಾರಣೆ ನಡೆಸುತ್ತಿದ್ದೇವೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸರ್ಕಾರವು ನೇಮಿಸಿದ ಮೇಲ್ವಿಚಾರಣಾ ಸಮಿತಿಯ ಸಂಪೂರ್ಣ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸದಿರುವ ಬಗ್ಗೆ ಬಜರಂಗ್, ವಿನೇಶ್ ಫೋಗಟ್ ಮತ್ತು ದೇಶದ ಹಲವು ಪ್ರಮುಖ ಕುಸ್ತಿಪಟುಗಳು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಒಲಂಪಿಕ್‌ ವಿಜೇತೆ ಬಾಕ್ಸಿಂಗ್ ಚಾಂಪಿಯನ್ ಎಂ ಸಿ ಮೇರಿ ಕೋಮ್ ಅವರು ಜನವರಿ 23 ರಂದು ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳಿಂದ ಹೊರಿಸಲಾದ ಆರೋಪಗಳ ತನಿಖೆಗಾಗಿ ರಚಿಸಲಾದ ಸಮಿತಿಯ ಮುಖ್ಯಸ್ಥರಾಗಿದ್ದರು. ಸಮಿತಿಗೆ ಒಂದು ತಿಂಗಳ ಗಡುವು ನೀಡಲಾಗಿತ್ತು. ಆದರೆ ಸಮಿತಿಯು ವರದಿ ಸಲ್ಲಿಸಿದ್ದರೂ ಅದರ ಸತ್ಯಾಂಶಗಳು ಇನ್ನೂ ಬಹಿರಂಗವಾಗಿಲ್ಲ.

ಮೇರಿ ಕೋಮ್ ಅವರ ಹೊರತಾಗಿ, ಒಲಿಂಪಿಕ್ ಪದಕ ವಿಜೇತ – ಕುಸ್ತಿಪಟು ಯೋಗೇಶ್ವರ್ ದತ್, ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ ತೃಪ್ತಿ ಮುರಗುಂಡೆ, ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್‌ನ ಮಾಜಿ ಸಿಇಒ ರಾಜೇಶ್ ರಾಜಗೋಪಾಲನ್ ಮತ್ತು ಮಾಜಿ ಭಾರತೀಯ ಕ್ರೀಡಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಸಮಿತಿಯ ಸದಸ್ಯರಾಗಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...