ಕಾಂಗ್ರೆಸ್ ಮಡಿಲಿನಲ್ಲಿರುವ ಕುಸ್ತಿಪಟುಗಳು: ಬ್ರಿಜ್‌ ಭೂಷಣ್ ಸಿಂಗ್

Date:

ಪ್ರತಿಭಟನಾನಿರತ ಕುಸ್ತಿಪಟುಗಳು ಕಾಂಗ್ರೆಸ್‌ ಮಡಿಲಲ್ಲಿ ಕುಳಿತಿರುವುದರಿಂದ ಬಹುತೇಕ ಪ್ರಮುಖ ಕುಸ್ತಿಪಟುಗಳು ಅವರನ್ನು ಬೆಂಬಲಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್ ಸಿಂಗ್, ”ಕುಸ್ತಿಪಟುಗಳು ಕಾಂಗ್ರೆಸ್‌ನ ಮಡಿಲಲ್ಲಿ ಕುಳಿತಿರುವುದರಿಂದ ಪ್ರಮುಖ ಹಲವು ಪ್ರತಿಭಟನಾಕಾರರು ಅವರನ್ನು ಬೆಂಬಲಿಸುತ್ತಿಲ್ಲ. ಈಗ, ಅವರೊಂದಿಗೆ ಹೋರಾಡಲು ನಾನು ನೇಣು ಹಾಕಿಕೊಳ್ಳಬೇಕೇ?” ಎಂದು ಪ್ರಶ್ನಿಸಿದ್ದಾರೆ.

“ಕುಸ್ತಿಯ ಅಭಿವೃದ್ಧಿ ಕಳೆದ 11 ತಿಂಗಳುಗಳಿಂದ ಕುಂಠಿತವಾಗಿದೆ. ನ್ಯಾಯಯುತ ಚುನಾವಣೆ ನಡೆದು ನಮ್ಮ ಪಾಳಯದಿಂದ ಸಂಜಯ್ ಸಿಂಗ್ ಸ್ಪಷ್ಟ ಬಹುಮತದೊಂದಿಗೆ ಆಯ್ಕೆಯಾದರು. ಇತರ ಅಭ್ಯರ್ಥಿಯು 33 ಮತಗಳಿಂದ ಸೋತರು. ಸಂಜಯ್‌ ಸಿಂಗ್ ಅವರು ಕ್ರೀಡೆಯ ಸುಧಾರಣೆಗೆ ಉತ್ತಮ ಕೆಲಸ ಮಾಡುವ ಗುರಿಯನ್ನು ಹೊಂದಿದ್ದಾರೆ” ಎಂದು ಬ್ರಿಜ್‌ ಭೂಷಣ್ ಸಿಂಗ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕುಸ್ತಿಪಟುಗಳು ಇನ್ನೂ ಪ್ರತಿಭಟನೆ ನಡೆಸುತ್ತಿದ್ದರೆ ಮತ್ತು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ವಿದಾಯ ಹೇಳಿದರೆ, ನಾನು ಅವರಿಗೆ ಏನು ಸಹಾಯ ಮಾಡಬಹುದು ಎಂದು ಪ್ರಶ್ನಿಸಿದ ಬ್ರಿಜ್, ಅವರು ತಿಂಗಳಿನಿಂದ ನನ್ನ ಮೇಲೆ ನಿಂದನೆ ಮಾಡುತ್ತಿದ್ದಾರೆ. ಹಾಗೆ ಮಾಡಲು ಅವರಿಗೆ ಯಾರು ಬೆಂಬಲ ನೀಡಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಿ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಭಾರತದ ಅಗ್ರಗಣ್ಯ ಕುಸ್ತಿಪಟುಗಳು ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಕುಸ್ತಿಪಟುಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಬಂಧನಕ್ಕೆ ಒತ್ತಾಯಿಸಿ ಹಲವು ತಿಂಗಳುಗಳ ಕಾಲ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು.

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ನಂತರ ಅವರು ಜೂನ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ದೂರುಗಳಲ್ಲಿ ಅನುಚಿತವಾಗಿ ಸ್ಪರ್ಶಿಸುವುದು, ಮಹಿಳೆಯರ ಖಾಸಗಿ ಭಾಗಗಳ ಮೇಲೆ ಕೈ ಹಾಕುವುದು ಸೇರಿದಂತೆ ಹಲವು ಆರೋಪಗಳು ದಾಖಲಾಗಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ತನ್ಅನ ನಾಚಾರಕ್ಕೆ ಇತರರನ್ನು ದೂಷಣೆಗೆ ನಿಂತಿರುವ ಫ್ಯಾಸಿಸ್ಟ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೆಎನ್‌ಯು ವಿವಿಯಲ್ಲಿ ಎಡ ಪಂಥೀಯ – ಎಬಿವಿಪಿ ವಿದ್ಯಾರ್ಥಿಗಳ ನಡುವೆ ಗಲಭೆ: ಹಲವರಿಗೆ ಗಾಯ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಂಥೀಯ ಬೆಂಬಲಿತ...

ನ್ಯೂಸ್‌ ಚಾನೆಲ್‌ಗಳಲ್ಲಿ ಕೋಮು ದ್ವೇಷ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌18ಗೆ ದಂಡ; ಆಜ್ ತಕ್‌ಗೆ ಎಚ್ಚರಿಕೆ

ದ್ವೇಷ ಮತ್ತು ಕೋಮು ಸೌಹಾರ್ದತೆ ಕದಡುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ ಟೈಮ್ಸ್‌...

ಪೆಟ್ರೋಲಿಯಂ ಮೇಲಿನ ವಿಂಡ್‌ಫಾಲ್ ತೆರಿಗೆ ಹೆಚ್ಚಳ

ಶುಕ್ರವಾರದಿಂದ ಜಾರಿಗೆ ಬರುವಂತೆ ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲದ ಮೇಲಿನ ವಿಂಡ್‌ಫಾಲ್...

ಗುಜರಾತ್‌ | 2 ವರ್ಷದಿಂದ 3.8 ಲಕ್ಷ ಅರ್ಹ ಶಿಕ್ಷಕರು ನಿರುದ್ಯೋಗಿಗಳಾಗಿದ್ದಾರೆ

ಗುಜರಾತ್‌ನಲ್ಲಿ 2.75 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿಇಟಿ) ಉತ್ತೀರ್ಣರಾಗಿದ್ದಾರೆ....