ಬ್ರಿಜ್‌ ಭೂಷಣ್‌ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು ಮತ್ತು ರಾಜಕೀಯ ಪ್ರೇರಿತ: ದೆಹಲಿ ನ್ಯಾಯಾಲಯ

Date:

ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಕುಸ್ತಿಪಟುಗಳು ಹೂಡಿದ್ದ ಲೈಂಗಿಕ ಕಿರುಕುಳ ಪ್ರಕರಣವು ‘ಸುಳ್ಳು, ಕಟ್ಟುಕಥೆ ಹಾಗೂ ರಾಜಕೀಯ ಪ್ರೇರಿತ’ ಎಂದು ದೆಹಲಿಯ ನ್ಯಾಯಾಲಯ ಅಭಿಪ್ರಾಯಪಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -

ಆಗಸ್ಟ್ 3ರಂದು ನ್ಯಾಯಾಲಯವು ಬ್ರಿಜ್ ಭೂಷಣ್ ಹಾಗೂ ಸಹ-ಆರೋಪಿ, ಡಬ್ಲ್ಯುಎಫ್‌ಐ ಮಾಜಿ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ದೋಷಮುಕ್ತಗೊಳಿಸಿತ್ತು . ಸದ್ಯ ನ್ಯಾಯಾಲಯದ ಆದೇಶದ ಪ್ರತಿ ಲಭ್ಯವಾಗಿದ್ದು, ಸಿಂಗ್‌ ವಿರುದ್ಧದ ಆರೋಪಗಳಿಗೆ ಆಧಾರವಾಗಿದ್ದ ಇಬ್ಬರು ಮಹಿಳಾ ಕುಸ್ತಿಪಟುಗಳು ವಿಚಾರಣೆ ವೇಳೆ ಪ್ರತಿಕೂಲ ಸಾಕ್ಷಿಗಳಾಗಿ ಬದಲಾಗಿದ್ದು, ಪ್ರಾಸಿಕ್ಯೂಷನ್ ವಾದವನ್ನು ಬೆಂಬಲಿಸಿಲ್ಲ ಎಂಬ ಅಂಶ ಬಹಿರಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ರೌಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಎಸಿಜೆಎಂ) ಅಶ್ವಿನಿ ಪನ್ವಾರ್ ಅವರು ಈ ಬಗ್ಗೆ ತೀರ್ಪು ನೀಡಿದ್ದಾರೆ. “ಸಿಂಗ್ ವಿರುದ್ಧದ ಆರೋಪಗಳು ಮೊದಲೇ ತಾಲೀಮು ನಡೆಸಿದ, ಪೂರ್ವನಿಯೋಜಿತ ಹಾಗೂ ಸುಳ್ಳು ಕಟ್ಟುಕಥೆಗಳಂತೆ ಕಂಡುಬರುತ್ತಿವೆ. ದೀರ್ಘಕಾಲದ ನಂತರ ದೂರು ದಾಖಲಿಸಿರುವುದು ಈ ಅನುಮಾನವನ್ನು ಮತ್ತಷ್ಟು ಬಲಪಡಿಸಿದೆ. ಓರ್ವ ಮಹಿಳಾ ಕುಸ್ತಿಪಟು, ಮತ್ತೋರ್ವ ಪುರುಷ ಕುಸ್ತಿಪಟು ಹಾಗೂ ಮಹಾದೇವ್ ಅಕಾಡೆಮಿಯ ತರಬೇತುದಾರರ ಕುಮ್ಮಕ್ಕಿನಿಂದ ಗುಂಪಾಗಿ ಸೇರಿ ಈ ಸುಳ್ಳು ಆರೋಪಗಳನ್ನು ಮಾಡಲಾಗಿದೆ,” ಎಂದು ನ್ಯಾಯಾಲಯ ಹೇಳಿದೆ.

ಆರಂಭದಿಂದಲೂ ಸಂತ್ರಸ್ತೆಯರೆಂದು ಬಿಂಬಿತರಾಗಿದ್ದ ಇಬ್ಬರು ಕುಸ್ತಿಪಟುಗಳು ನ್ಯಾಯಾಲಯದ ಮುಂದೆ ಹಾಜರಾಗಿ, ‘ತಮ್ಮ ಮೇಲೆ ಯಾವುದೇ ಲೈಂಗಿಕ ಕಿರುಕುಳದ ಕೃತ್ಯಗಳು ನಡೆದಿಲ್ಲ’ ಎಂದು ಸ್ಪಷ್ಟವಾಗಿ ಒಪ್ಪಿಕೊಂಡಿದ್ದಾರೆ. ಇಬ್ಬರು ಪ್ರಮುಖ ಸಾಕ್ಷಿಗಳೇ ಪ್ರಾಸಿಕ್ಯೂಷನ್‌ ಪ್ರಕರಣವನ್ನು ಸಂಪೂರ್ಣವಾಗಿ ತಳ್ಳಿಹಾಕಿರುವುದು ಇಡೀ ಪ್ರಕರಣವು ರಾಜಕೀಯ ಪ್ರೇರಿತ ಪಿತೂರಿ ಎಂಬುದನ್ನು ತೋರಿಸುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ತಮಗೆ ಓರ್ವ ಮಹಿಳಾ ಕುಸ್ತಿಪಟು (ಪಿಡಬ್ಲ್ಯು 5) ಮತ್ತು ಆಕೆಯ ಪತಿಯಿಂದ (ಪಿಡಬ್ಲ್ಯು 10) ಹೇಳಿಕೆ ನೀಡಲು ಒತ್ತಡ ಹೇರಲಾಗಿತ್ತು ಎಂದು ಆ ಇಬ್ಬರೂ ಸಾಕ್ಷಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

2023ರಲ್ಲಿ ಕುಸ್ತಿಪಟುಗಳು ಧರಣಿ ಕೂರುವ ಮೊದಲು ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಲೈಂಗಿಕ ಕಿರುಕುಳದ ಆರೋಪಗಳಿರಲಿಲ್ಲ ಅಥವಾ ಯಾವುದೇ ಮಹಿಳಾ ಕುಸ್ತಿಪಟುವಿನ ಹೆಸರನ್ನು ಉಲ್ಲೇಖಿಸಿರಲಿಲ್ಲ ಎಂದು ನ್ಯಾಯಾಲಯ ಗಮನಸೆಳೆದಿದೆ. “ನಂತರ ಆಯ್ದ ಮಹಿಳಾ ಕುಸ್ತಿಪಟುಗಳು ಮುಂದೆ ಬಂದು, ಅತಿಯಾದ ಅಲಂಕಾರಿಕ ಪದಗಳನ್ನು ಬಳಸಿ ಅತ್ಯಂತ ಆಕರ್ಷಕವಾಗಿ ಸಿದ್ಧಪಡಿಸಿದ ‘ಟೈಲರ್ ಮೇಡ್’ (ಬೇಕೆಂದೇ ಸೃಷ್ಟಿಸಿದ) ದೂರುಗಳನ್ನು ಏಪ್ರಿಲ್ 21, 2023 ರಂದು ಪೊಲೀಸರಿಗೆ ನೀಡಿದ್ದಾರೆ,” ಎಂದು ನ್ಯಾಯಾಲಯ ತೀರ್ಪಿನಲ್ಲಿ ಅಸಮಾಧಾನ ವ್ಯಕ್ತಪಡಿಸಿದೆ.

ಆರಂಭದಲ್ಲಿ ಆರು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಜೂನ್ 15, 2023ರಂದು ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲಿನ ದೌರ್ಜನ್ಯ), 354A (ಲೈಂಗಿಕ ಕಿರುಕುಳ), 354D (ಹಿಂಬಾಲಿಸುವಿಕೆ) ಮತ್ತು 506(1) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಕೆಯಾಗಿತ್ತು. ಮೇ 10, 2024ರಂದು ಐವರು ಕುಸ್ತಿಪಟುಗಳಿಗೆ ಕಿರುಕುಳ ನೀಡಿದ ಆರೋಪದಡಿ ನ್ಯಾಯಾಲಯವು ದೋಷಾರೋಪಣೆ ನಿಗದಿಪಡಿಸಿತ್ತು. ಸಹ-ಆರೋಪಿ ವಿನೋದ್ ತೋಮರ್ ವಿರುದ್ಧವೂ ಬೆದರಿಕೆ ಹಾಕಿದ ಆರೋಪ ಹೊರಿಸಲಾಗಿತ್ತು.

ಇದಕ್ಕೂ ಮುನ್ನ, ಅಪ್ರಾಪ್ತ ಕುಸ್ತಿಪಟುವೊಬ್ಬಳು ನೀಡಿದ್ದ ದೂರಿನ ಆಧಾರದ ಮೇಲೆ ದಾಖಲಾಗಿದ್ದ ಪೋಕ್ಸೊ (POCSO) ಪ್ರಕರಣವನ್ನು, ಆಕೆ ದೂರು ಹಿಂಪಡೆದ ಕಾರಣ ಪೊಲೀಸರು ‘ರದ್ದತಿ ವರದಿ’ ಸಲ್ಲಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದರು.

​ಅಂತಿಮವಾಗಿ, ಬ್ರಿಜ್ ಭೂಷಣ್ ಮತ್ತು ವಿನೋದ್ ತೋಮರ್ ವಿರುದ್ಧದ ಆರೋಪಗಳನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿದ ನ್ಯಾಯಾಲಯ, ಇಬ್ಬರನ್ನೂ ಪ್ರಕರಣದಿಂದ ಖುಲಾಸೆಗೊಳಿಸಿದೆ.

ಬ್ರಿಜ್ ಭೂಷಣ್ ಪರವಾಗಿ ವಕೀಲರಾದ ರಾಜೀವ್ ಮೋಹನ್, ರಿಷಭ್ ಭಾಟಿ, ರೆಹಾನ್ ಖಾನ್ ಮತ್ತು ಸೂರ್ಯನ್ಶ್ ಸಿಂಗ್ ವಾದ ಮಂಡಿಸಿದರೆ, ಕುಸ್ತಿಪಟುಗಳ ಪರವಾಗಿ ಹಿರಿಯ ವಕೀಲೆ ರೆಬೆಕ್ಕಾ ಜಾನ್ ಮತ್ತು ತಂಡ ಹಾಜರಾಗಿತ್ತು. ಸರ್ಕಾರದ ಪರವಾಗಿ ಮನೀಶ್ ರಾವತ್ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...