ರಾಯಿಟರ್ಸ್ ಖಾತೆಗೆ ನಿರ್ಬಂಧ: ಭಾರತದಲ್ಲಿ ಸರ್ಕಾರ ‘ಪತ್ರಿಕಾ ಸೆನ್ಸಾರ್‌ಶಿಪ್‌’ ಮಾಡುತ್ತಿದೆ ಎಂದ ಎಕ್ಸ್‌

Date:

ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದ್ದು, ಕೇಂದ್ರ ಸರ್ಕಾರ ಎಕ್ಸ್‌ ಸಂಸ್ಥೆಯಿಂದ ಆಗಿರುವ ತಪ್ಪು ಇದು ಎಂದು ಹೇಳಿದೆ. ಆದರೆ ಭಾರತದಲ್ಲಿ ಸರ್ಕಾರ ‘ಪತ್ರಿಕಾ ಸೆನ್ಸಾರ್‌ಶಿಪ್‌’ ಮಾಡುತ್ತಿದೆ ಎಂದು ಎಕ್ಸ್‌ ಹೇಳಿದೆ. ಸರ್ಕಾರ ಮಾತ್ರ ಇದರಲ್ಲಿ ತನ್ನ ಯಾವುದೇ ಪಾತ್ರವಿಲ್ಲ ಎಂದು ಹೇಳಿಕೊಂಡಿದೆ.

- Advertisement -

“ರಾಯಿಟರ್ಸ್ ಅನ್ನು ನಿರ್ಬಂಧಿಸಿರುವ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ಪಾತ್ರ ಹೊಂದಿಲ್ಲ. ಸಮಸ್ಯೆಯನ್ನು ಪರಿಹರಿಸಲು ನಾವು ಎಕ್ಸ್‌ನೊಂದಿಗೆ ಸಂಪರ್ಕದಲ್ಲಿದ್ದೇವೆ, ಕಾರ್ಯ ನಿರ್ವಹಿಸುತ್ತಿದ್ದೇವೆ” ಎಂದು ಸರ್ಕಾರಿ ವಕ್ತಾರರು ಭಾನುವಾರ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಇದನ್ನು ಓದಿದ್ದೀರಾ? ಇಸ್ರೇಲ್‌ನಿಂದ ರಾಯಿಟರ್ಸ್‌ ಪತ್ರಕರ್ತನ ಹತ್ಯೆ: ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ದೂರು

ಸರ್ಕಾರವು ಜುಲೈ 3ರಂದು ರಾಯಿಟರ್ಸ್ ಸೇರಿದಂತೆ ದೇಶದಲ್ಲಿ 2,355 ಖಾತೆಗಳನ್ನು ‘ಸಕಾರಣವನ್ನು ಒದಗಿಸದೆ ಒಂದು ಗಂಟೆಯೊಳಗೆ’ ನಿರ್ಬಂಧಿಸಲು ಆದೇಶಿಸಿದೆ ಎಂದು ಎಕ್ಸ್ ಹೇಳಿದೆ. ಆದೇಶವನ್ನು ಪಾಲಿಸದಿದ್ದರೆ ದಂಡ ವಿಧಿಸಬಹುದಾದ ಕಾರಣ ಎಕ್ಸ್‌ನ ಆದೇಶವನ್ನು ಪಾಲಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಎಕ್ಸ್‌ ಹೇಳಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

“ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಒಂದು ಗಂಟೆಯೊಳಗೆ ಯಾವುದೇ ಸಮರ್ಥನೆಯನ್ನು ಒದಗಿಸದೆ ತಕ್ಷಣದ ಕ್ರಮ ಕೈಗೊಳ್ಳುವಂತೆ ತಿಳಿಸಿತ್ತು. ಮುಂದಿನ ಸೂಚನೆ ಬರುವವರೆಗೆ ಖಾತೆಗಳನ್ನು ನಿರ್ಬಂಧಿಸುವಂತೆ ಹೇಳಿತ್ತು. ಸಾರ್ವಜನಿಕ ಆಕ್ರೋಶದ ನಂತರ, ಸರ್ಕಾರವು ಎಕ್ಸ್‌ಗೆ ರಾಯಿಟರ್ಸ್ ಮತ್ತು ರಾಯಿಟರ್ಸ್ ವರ್ಲ್ಡ್ ಅನ್ನು ನಿರ್ಬಂಧಿಸುವಂತೆ ವಿನಂತಿಸಿದೆ” ಎಂದು ಎಕ್ಸ್‌ ಹೇಳಿದೆ.

“ಈ ನಿರ್ಬಂಧಿಸುವ ಆದೇಶಗಳಿಂದಾಗಿ ಭಾರತದಲ್ಲಿ ನಡೆಯುತ್ತಿರುವ ಪತ್ರಿಕಾ ಸೆನ್ಸಾರ್‌ಶಿಪ್ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸುತ್ತೇವೆ. ಎಕ್ಸ್‌ ಲಭ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ಪೀಡಿತ ಬಳಕೆದಾರರು ನ್ಯಾಯಾಲಯಗಳ ಮೂಲಕ ಕಾನೂನು ಪರಿಹಾರಗಳನ್ನು ಅನುಸರಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದೂ ತಿಳಿಸಿದೆ.

ಖಾತೆಗಳನ್ನು ನಿರ್ಬಂಧಿಸುವ ಆದೇಶಗಳ ಕುರಿತಾಗಿ ಎಕ್ಸ್‌ ಆಗಾಗ್ಗೆ ಸರ್ಕಾರವನ್ನು ಟೀಕಿಸಿದೆ. ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೊಕದ್ದಮೆ ಹೂಡಿದೆ. ಕಾನೂನುಬಾಹಿರ ನಿರ್ಬಂಧವನ್ನು ಹೇರಲು ಸರ್ಕಾರ ಮಾಹಿತಿ ತಂತ್ರಜ್ಞಾನ ಕಾನೂನುಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...